ಕಣಿವೆಯಲ್ಲಿ ಶಾಂತಿಯುತ ಪರಿಸ್ಥಿತಿ
Team Udayavani, Aug 7, 2019, 4:00 AM IST
ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅದನ್ನು ಕೇಂದ್ರಾಡಳಿತ ರಾಜ್ಯವನ್ನಾಗಿ ಘೋಷಿಸಿದ್ದರೂ, ಕಣಿವೆ ರಾಜ್ಯದಲ್ಲಿ ಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅದನ್ನು ಅಲ್ಲಿನ ಪೊಲೀಸ್ ಮಹಾನಿರ್ದೇಶಕರಾದ ದಿಲ್‌ಬಾಘ್ ಸಿಂಗ್ ಖಚಿತ ಪಡಿಸಿ ದ್ದಾರೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ, ಎಲ್ಲ ಕಡೆ ಪೊಲೀಸ್ ಬಿಗಿಭದ್ರತೆಯಿದೆ.
ತುರ್ತು ಕೆಲಸಕ್ಕೆ ತೆರಳಬೇಕಾದವರಿಗೆ ಮಾತ್ರ, ಷರತ್ತಿನೊಂದಿಗೆ ಹೊರ ಹೋ ಗಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಶ್ರೀನಗರದಲ್ಲಿ ದೂರವಾಣಿ ಮತ್ತು ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದೆ. ಜಮ್ಮು ಭಾಗದ ಕಿಶ್ವಾರ್ ಮತ್ತು ರಜೌರಿಯಲ್ಲಿ ರಾತ್ರಿ ಹೊತ್ತು ಕರ್ಫ್ಯೂ ವಿಧಿಸಲಾಗಿದೆ. ರಾಜ್ಯದ ಎಲ್ಲ ಭಾಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ.
ಅಶಾಂತಿಗೆ ಕಾರಣವಾಗಬಹುದಾದ ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿಯ ಬಂಧನವನ್ನು ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇನ್ನಿಬ್ಬರು ನಾಯಕರಾದ ಸಜ್ಜದ್ ಲೋನ್, ಇಮ್ರಾನ್ ಅನ್ಸಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಜನರಿಗೂ ಮನವಿ ಮಾಡಲಾಗಿದೆ. ಅದಕ್ಕೆ ಜನತೆ ಸ್ಪಂದಿಸುತ್ತಿದ್ದಾರೆ. ರಾಜಧಾನಿ ಶ್ರೀನಗರದಲ್ಲಿ ಯಾವುದೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.