ರಾಜ್ಯಕ್ಕೆ ಮಹಾ ಜಲಾಘಾತ; ಜನರ ಬದುಕು ಮೂರಾಬಟ್ಟೆ

ಭಾರೀ ಮಳೆಗೆ ಮತ್ತೆ 4 ಬಲಿ; ಕೃಪೆ ತೋರದ ಕೃಷ್ಣಾ, ಭೀಮಾ, ಕಾಳಿ

Team Udayavani, Aug 7, 2019, 6:00 AM IST

s-44

ಹುಬ್ಬಳ್ಳಿ/ಬೆಂಗಳೂರು: ‘ಮಹಾಘಾತ’ ಜಲಪ್ರಳಯಕ್ಕೆ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಹೈದ್ರಾಬಾದ್‌ ಕರ್ನಾಟಕ ಜನರ ಬದುಕು ಮೂರಾಬಟ್ಟೆಯಾಗಿದೆ.

ಕೃಷ್ಣಾ, ಭೀಮಾ, ದೂಧಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ, ಕಾಳಿ, ಅಘನಾಶಿನಿ ಸೇರಿದಂತೆ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 52 ಸೇತುವೆಗಳು ಮುಳುಗಡೆಯಾಗಿವೆ. 9420 ಜನರನ್ನು ಸ್ಥಳಾಂತರಿಸಲಾಗಿದೆ. ಪುಣೆ-ಬೆಂಗಳೂರು, ವಿಜಯಪುರ-ಧಾರವಾಡ ರಸ್ತೆ ಸಂಚಾರ, ಕರ್ನಾಟಕ-ಗೋವಾ ರೈಲು ಸಂಚಾರ ಬಂದ್‌ ಆಗಿದೆ. ಮತ್ತೆ ನಾಲ್ವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ ಮಳೆಗೆ ಬೆಳಗಾವಿ ನಲುಗಿ ಹೋಗಿದೆ. 30 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 140 ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. 8,012 ಜನರನ್ನು ಸ್ಥಳಾಂತರಿಸಲಾಗಿದೆ. ಆರು ಜಾನುವಾರುಗಳು ಮೃತಪಟ್ಟಿವೆ. ಬೆಳಗಾವಿ ನಗರದಲ್ಲಿ ಒಂದೇ ದಿನ 27 ಸೇರಿ 599 ಮನೆಗಳು ಹಾನಿಯಾಗಿವೆ. 80,590 ಹೆಕ್ಟೇರ್‌ ಪ್ರದೇಶ ಜಲಾವೃತವಾಗಿದೆ. 1,048 ಕಿಮೀ ರಸ್ತೆ ಕಿತ್ತು ಹೋಗಿದೆ. ಆರು ಸರ್ಕಾರಿ ಕಟ್ಟಡಗಳು ಧರೆಗುರುಳಿವೆ. 23 ಗಂಜಿ ಕೇಂದ್ರ ಆರಂಭಿಸಲಾಗಿದೆ.

ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ, ಗೋಕಾಕ, ಖಾನಾಪುರ, ಮೂಡಲಗಿ, ಹುಕ್ಕೇರಿ ತಾಲೂಕುಗಳ 96 ಹಳ್ಳಿಗಳು ಪ್ರವಾಹ ಬಾಧಿತವಾಗಿವೆ. ರಾಜಾಪುರ ಬ್ಯಾರೇಜ್‌ದಿಂದ 2,52,585 ಕ್ಯೂಸೆಕ್‌, ದೂಧಗಂಗಾದಿಂದ 42,240 ಕ್ಯೂಸೆಕ್‌ ಸೇರಿದಂತೆ ಕೃಷ್ಣಾ ನದಿಗೆ ಒಟ್ಟು 2,94,825 ಕ್ಯೂಸೆಕ್‌ ನೀರು ಬರುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಕಿತ್ತೂರಿನ ಐತಿಹಾಸಿಕ ಕೋಟೆಯಲ್ಲಿ ಎರಡು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗೋಡೆಯ ಅಲ್ಪಭಾಗ ಕುಸಿದಿದೆ.

ಹೆದ್ದಾರಿ ಸಂಪರ್ಕ ಕಡಿತ: ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರ ನಡುವಿನ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಭೂ ಕುಸಿತದ ಕಾರಣ ಬೆಳಗಾವಿಯಿಂದ ಕೊಲ್ಲಾಪುರದವರೆಗೆ ಮುಂದಿನ 24 ಗಂಟೆಗಳ ಕಾಲ ರಸ್ತೆ ಸಂಚಾರ ನಿಷೇಧಿಸಲಾಗಿದೆ. ಕಾಕತಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

3 ಹೆದ್ದಾರಿ ಸಹಿತ 12 ಸೇತುವೆ ಬಂದ್‌: ಕೃಷ್ಣಾ, ಘಟಪ್ರಭಾ ಉಕ್ಕಿ ಹರಿಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆ ಹಾವಳಿ ಮಿತಿ ಮೀರಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಘಟಪ್ರಭಾ ನದಿಗೆ 1.28 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ ಹೀಗಾಗಿ ಮುಧೋಳದ ಕಾಂಬಳೆ ಗಲ್ಲಿ ಮತ್ತು ಕುಂಬಾರ ಗಲ್ಲಿಗಳು ಜಲಾವೃತಗೊಂಡಿದ್ದು, ಇಲ್ಲಿನ 35 ಕುಟುಂಬಗಳ 105 ಜನರನ್ನು ಸ್ಥಳಾಂತರಿಸಲಾಗಿದೆ. ಇನ್ನೂ 150 ಕುಟುಂಬಗಳ ಸುಮಾರು 350ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಸಿದ್ಧತೆ ನಡೆದಿದೆ. ಧಾರವಾಡ-ವಿಜಯಪುರ, ಜಮಖಂಡಿ-ಜತ್ತ, ಜಮಖಂಡಿ- ಸಾವಳಗಿ ಹೆದ್ದಾರಿ ಸೇರಿದಂತೆ ಮುಧೋಳ, ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಒಟ್ಟು 12 ಸೇತುವೆಗಳು ಜಲಾವೃತಗೊಂಡಿವೆ. ಹೀಗಾಗಿ ಈ ಮಾರ್ಗಗಳ ಸಂಚಾರ ಬಂದ್‌ ಆಗಿವೆ. ಕೃಷ್ಣಾ ನದಿಗೆ 4.22 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ 27 ಹಳ್ಳಿಗಳು ಬಾಧಿತಗೊಂಡಿವೆ. ನಾಲ್ಕು ಗ್ರಾಮಗಳು ಜಲಾವೃತಗೊಂಡಿದ್ದು, ಈವರೆಗೆ 225 ಕುಟುಂಬಗಳ 825 ಜನ ಹಾಗೂ 1,415 ಜಾನುವಾರು ಸ್ಥಳಾಂತರಿಸಲಾಗಿದೆ. ಜಮಖಂಡಿ ತಾಲೂಕಿನಲ್ಲಿ 11 ಹಾಗೂ ಮುಧೋಳ ನಗರದಲ್ಲಿ 2 ಸೇರಿ ಒಟ್ಟು 13 ಗಂಜಿ ಕೇಂದ್ರ ತೆರೆಯಲಾಗಿದೆ.

ಹೆದ್ದಾರಿಗಳ ಸಂಪರ್ಕವೇ ಕಡಿತ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಖಾನಾಪುರ-ಗೋವಾ, ಖಾನಾಪುರ-ಬೆಳಗಾವಿ, ಖಾನಾಪುರ-ಪಾರಿಶ್ವಾಡ, ಖಾನಾಪುರ -ಪಣಜಿ ರಾಜ್ಯ ಹೆದ್ದಾರಿ ಮೇಲೆ ನೀರು ಬಂದಿರುವುದರಿಂದ ಸಂಚಾರ ಸ್ಥಗಿತಗೊಂಡಿದೆ. ಚೋರ್ಲಾ ಬಳಿ ಭೂ ಕುಸಿತ ಉಂಟಾಗಿದ್ದರಿಂದ ಬೆಳಗಾವಿ-ಗೋವಾ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಲೋಂಡಾದಲ್ಲಿ 25 ಮನೆಗಳು ಜಲಾವೃತವಾಗಿದ್ದು ಲೋಂಡಾ ರೈಲ್ವೆ ನಿಲ್ದಾಣದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಖಾನಾಪುರ ಹೊರವಲಯದ ಜಮೀನಿನಲ್ಲಿರುವ ಶಾಸಕಿ ಅಂಜಲಿ ನಿಂಬಾಳಕರ ಮನೆ ಸಹ ಸಂಪೂರ್ಣ ಜಲಾವೃತಗೊಂಡಿದೆ. ನಂದಗಡ-ಬೀಡಿ ರಸ್ತೆ ಪಕ್ಕದಲ್ಲಿರುವ ಹೊನ್ನಮ್ಮ ದೇವಸ್ಥಾನದ ಎರಡೂ ಬದಿಗಳಿಂದ ಕೆರೆ ತುಂಬಿ ಉಕ್ಕಿ ಹರಿಯುತ್ತಿದೆ. ಬೀಡಿ-ಹಳಿಯಾಳ, ಬೀಡಿ-ಕಿತ್ತೂರ ಮಧ್ಯದಲ್ಲಿರುವ ತಟ್ಟಿ ಹಳ್ಳದ ಸೇತುವೆಗಳ ಮೇಲೆಯೇ ನೀರು ಹರಿಯುತ್ತಿದ್ದು ಸಂಚಾರಕ್ಕೆ ಬಂದ್‌ ಆಗಿದೆ.

ಮಳೆಗೆ ಮತ್ತೆ ನಾಲ್ವರು ಬಲಿ

ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಶ್ರೀಂಗೇರಿ ಗ್ರಾಮದ ಶಿವಪ್ಪ ಸೊಟ್ಟಕ್ಕನವರ(50) ಧರ್ಮಾ ಜಲಾಶಯದ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಚಿಕ್ಕನಕೋಟೆ ಬಳಿ ಬೈಕ್‌ ಮೇಲೆ ತೆರಳುತ್ತಿದ್ದ ವಿಠuಲ್ ಗಣಪತಿ ಶೆಟ್ಟಿ ಮರ ಬಿದ್ದು ಮೃತಪಟ್ಟಿದ್ದಾರೆ. ಕಾರವಾರ ತಾಲೂಕಿನ ಮಾಜಾಳಿಯ ಬೈರೆ ಬಳಿ ಮಗನ ಮನೆಗೆ ಬಂದಿದ್ದ ಶಿವ ಎಂಬವರು ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರು ಬಳಿ ಹೆದ್ದಾರಿ ಬಳಿ ಸಂಚಾರ ನಿಯಂತ್ರಣ ಮಾಡುತ್ತಿದ್ದ ಚನ್ನಮ್ಮನ ಕಿತ್ತೂರು ಠಾಣೆ ಪಿಎಸ್‌ಐ ವೀರಪ್ಪ ಲಕ್ಕಿ(46) ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.