ತಾಯಿ ಹೃದಯದ ಸುಷ್ಮಾರ ಬದ್ಧತೆ ನಮಗೆ ಸ್ಫೂರ್ತಿ

Team Udayavani, Aug 7, 2019, 5:55 AM IST

s-49

ಎಬಿವಿಪಿಯ ಅಚ್ಚುಕಟ್ಟಾದ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿದ್ದ ತಾಯಿ ಹೃದಯದ ಸುಷ್ಮಾ ಸ್ವರಾಜ್‌ ಅವರು ನಮ್ಮೊಂದಿಗಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ.

ಅದು 1999ರ ಲೋಕಸಭಾ ಚುನಾವಣೆ ಸಂದರ್ಭ. ಬಳ್ಳಾರಿ ಕ್ಷೇತ್ರದಿಂದ ಸುಷ್ಮಾ ಸ್ವರಾಜ್‌ ಅವರು ಸ್ಪರ್ಧಿಸಿದ್ದಾಗ ನಾನು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಉಸ್ತುವಾರಿಯಾಗಿದ್ದೆ. ಆಗ ಕೆಲವು ದಿನ ಅವರೊಂದಿಗೆ ಕಾರ್ಯ ನಿರ್ವಹಿಸುವ ಅವಕಾಶ ಸಿಕ್ಕಿತ್ತು. ಅದ್ಭುತ ವಾಗ್ಮಿ, ಭಾಷಣಕಾರರಾಗಿದ್ದ ಅವರು ಕನ್ನಡದಲ್ಲಿ ಭಾಷಣ ಮಾಡುವಷ್ಟರ ಮಟ್ಟಿಗೆ ಕನ್ನಡ ಪ್ರೇಮ ತೋರಿದ್ದರು.

ನಾವು ನಿಗದಿಪಡಿಸುವ ಕಾರ್ಯಕ್ರಮಕ್ಕೆ ಸಕಾಲಕ್ಕೆ ಬರುತ್ತಿದ್ದರು. ರಾತ್ರಿ ಹೊತ್ತು ಪ್ರಚಾರ ಎಷ್ಟೇ ತಡವಾದರೂ ಮರುದಿನ ಸಕಾಲಕ್ಕೆ ಪ್ರಚಾರ ಸಭೆಗೆ ಆಗಮಿಸುತ್ತಿದ್ದ ಅವರ ಸಮಯ ಪಾಲನೆ, ಬದ್ಧತೆ ನಮಗೆ ಸ್ಫೂರ್ತಿಯಾಗಿತ್ತು.

ಎಬಿವಿಪಿಯ ಅಚ್ಚುಕಟ್ಟಾದ ವ್ಯವಸ್ಥೆ, ಯೋಜಿತ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವಾಗ ಬಹಳ ಸಂಭ್ರಮಪಟ್ಟಿದ್ದೆವು. ನಮ್ಮ ಭುಜ ತಟ್ಟಿ ಪ್ರೋತ್ಸಾಹಿಸಿದ ಪರಿ ಸದಾ ಸ್ಮರಣೀಯ. ಒಮ್ಮೆ ಮಾಜಿ ಸಚಿವ ಎಂ.ಪಿ.ಪ್ರಕಾಶ್‌ ಅವರ ಮನೆಗೆ ಸುಷ್ಮಾ ಸ್ವರಾಜ್‌ ಅವರು ಭೇಟಿ ನೀಡಿದ್ದರು. ಆಗ ಅವರೊಂದಿಗೆ ಒಟ್ಟಿಗೆ ಊಟ ಮಾಡಿದ್ದ ನೆನಪು ಸದಾ ಸ್ಮರಣೀಯ.

ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡರೂ ಬಳ್ಳಾರಿಯೊಂದಿಗಿನ ಒಡನಾಟವನ್ನು ಅವರು ಬಿಟ್ಟಿರಲಿಲ್ಲ. ನಿರಂತರವಾಗಿ ಬಳ್ಳಾರಿ ಸಂಪರ್ಕವಿಟ್ಟುಕೊಳ್ಳುವ ಮೂಲಕ ನಂಟು ಉಳಿಸಿಕೊಂಡಿದ್ದರು. ವಿದೇಶಾಂಗ ಸಚಿವರಾಗಿದ್ದಾಗ ವಿದೇಶಗಳಲ್ಲಿ ಭಾರತೀಯರು ಯಾವುದೇ ರೀತಿ ತೊಂದರೆ, ಸಂಕಷ್ಟ, ಅನಾಹುತಗಳಲ್ಲಿ ಸಿಲುಕಿದರೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಹಿರಿಯ ನಾಯಕರಲ್ಲಿ ಪ್ರಮುಖರಾಗಿದ್ದ ಸುಷ್ಮಾ ಸ್ವರಾಜ್‌ ಅವರು ವಿಧಿವಶರಾಗಿರುವುದು ತೀವ್ರ ನೋವು ತಂದಿದೆ.

● ಎನ್‌. ರವಿಕುಮಾರ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.