ಅನ್ಯೋನ್ಯ ದಾಂಪತ್ಯ
Team Udayavani, Aug 7, 2019, 5:04 AM IST
1975ರ ಜು. 13ರಂದು ಸುಷ್ಮಾ ಅವರು, ಸ್ವರಾಜ್ ಕೌಶಲ್ ಅವರನ್ನು ವಿವಾಹವಾಗಿದ್ದರು. ಆಗ, ದೇಶದೆಲ್ಲೆಲ್ಲೂ ತುರ್ತು ಪರಿಸ್ಥಿತಿಯಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಸುಷ್ಮಾ ಸ್ವರಾಜ್ ಈ ಹಿಂದೆ ಕಾರ್ಯನಿರ್ವಹಿಸಿದ್ದ ಕಾರಣ ಅವರಿಗೆ, ಕೌಶಲ್ ಅವರ ಪರಿಚಯವಿತ್ತು. ಆದರೆ, ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದಾಗ ಅವರಿಬ್ಬರೂ ಪರಸ್ಪರ ಹತ್ತಿರವಾದರು. ಮದುವೆಯ ನಂತರ ಸುಷ್ಮಾ ಜೀ ಅವರು ರಾಜಕೀಯದಲ್ಲಿ ಗುರುತಿಸಿಕೊಂಡರೆ, ಕೌಶಲ್ ಅವರು ವಕೀಲ ಕಾಯಕದಲ್ಲೇ ಮುಂದುವರಿದರು.
ಕೌಶಲ್ ಅವರು, 1990ರಿಂದ 1993ರವರೆಗೆ ಮಿಜೋರಾಂ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 1998ರಿಂದ 2004ರವರೆಗೆ ಲೋಕಸಭಾ ಸದಸ್ಯರೂ ಆಗಿದ್ದರು. ಅವರ ಈ ರಾಜಕೀಯ ಸಾಧನೆಗಳಿಗೆ ಸುಷ್ಮಾ ಸ್ವರಾಜ್ ಅವರ ಪ್ರೋತ್ಸಾಹವೂ ಬೆನ್ನಿಗಿತ್ತು. ಸುಷ್ಮಾ-ಕೌಶಲ್ ದಂಪತಿಗೆ ಬಾನ್ಸುರಿ ಎಂಬ ಮಗಳಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿರುವ ಅವರು, ಲಂಡನ್‌ನ ಇನ್ನರ್ ಸಿಟಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸುಷ್ಮಾ ಅವರ ಸಹೋದರಿ ವಂದನಾ ಶರ್ಮಾ ಅವರು, ಹರ್ಯಾಣದ ಸರ್ಕಾರಿ ಕಾಲೇಜೊಂದರ ರಾಜಕೀಯ ಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿದ್ದಾರೆ. ಇನ್ನು, ಸಹೋದರ ಡಾ. ಗುಲ್ಶನ್ ಶರ್ಮಾ ಅವರು, ಅಂಬಾಲದಲ್ಲಿ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್‌ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.