ಗಡಿಯಲ್ಲಿ ಜಲಪ್ರಳಯ; ಜೀವನ ಅಯೋಮಯ


Team Udayavani, Aug 7, 2019, 10:35 AM IST

bg-tdy-1

ರಾಯಬಾಗ: ತಾಲೂಕಿನ ಹಳೆದಿಗ್ಗೇವಾಡಿ ಗ್ರಾಮದಲ್ಲಿ ಪ್ರವಾಹದಿಂದ ಸುರಕ್ಷಿತ ಸ್ಥಳಕ್ಕೆ ತೆರಳಿದ ತೋಟಪಟ್ಟಿ ಜನರು.

ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಗಡಿನಾಡಲ್ಲಿ ಜಲಪ್ರಳಯದ ಸ್ಥಿತಿ ನಿರ್ಮಾಣ ಮಾಡಿದೆ.

ನದಿಗಳ ಅಬ್ಬರ ಪರಾಕಾಷ್ಠೆ ಮುಟ್ಟಿದೆ. ರಸ್ತೆಗಳು ನದಿಗಳಾಗಿ ಬದಲಾಗಿವೆ. ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಲಾಶಯಗಳು ಭೋರ್ಗರೆಯುತ್ತಿವೆ. ನದಿ ಪಾತ್ರದ ಜನರಲ್ಲಿ ಕ್ಷಣಕ್ಷಣಕ್ಕೂ ಆತಂಕ ಗಂಭೀರವಾಗುತ್ತಿದೆ.

ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಹಿರಣ್ಯಕೇಶಿ, ಮಲಪ್ರಭಾ, ಮಾರ್ಕಂಡೇಯ ನದಿಗಳ ಅಬ್ಬರದಿಂದ ಮಠ ಮಂದಿರಗಳು ಜಲದಿಗ್ಬಂಧನಕ್ಕೊಳಗಾಗಿವೆ. ಹೊಲ ಗದ್ದೆಗಳು ನದಿಗಳಂತೆ ಗೋಚರಿಸುತ್ತಿವೆ. ರಸ್ತೆಗಳು ಕೆರೆಗಳಂತೆ ಕಾಣುತ್ತಿವೆ. ಗಟಾರು ಯಾವುದು. ರಸ್ತೆ ಯಾವುದು ಎಂಬುದು ಗೊತ್ತಾಗದಷ್ಟು ನೀರು ಹರಿಯುತ್ತಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಅನೇಕ ಕಡೆ ತಗ್ಗುಪ್ರದೇಶಗಳಲ್ಲಿನ ಜನರು ರಾತ್ರಿಯಿಡೀ ನಿದ್ದೆಮಾಡದೆ ಮನೆಯಿಂದ ನೀರನ್ನು ಹೊರಗೆ ಹಾಕುವ ಕೆಲಸ ಮಾಡಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳ ಮಟ್ಟ ಗಣನೀಯವಾಗಿ ಹೆಚ್ಚಿದ್ದು ಚಿಕ್ಕೋಡಿ, ರಾಯಬಾಗ, ಅಥಣಿ, ಗೋಕಾಕ, ಹುಕ್ಕೇರಿ, ಖಾನಾಪುರ, ಕಾಗವಾಡ, ಮೂಡಲಗಿ ತಾಲೂಕುಗಳಲ್ಲಿ 30 ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿವೆ.

ಜಿಲ್ಲೆಯಲ್ಲಿ ಕಳೆದ ಆ.1 ರಿಂದ ಇದುವರೆಗೆ ಸತತ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ. ಅಥಣಿ, ಕಾಗವಾಡ, ರಾಯಬಾಗ. ಚಿಕ್ಕೋಡಿ, ನಿಪ್ಪಾಣಿ, ಗೋಕಾಕ,. ಖಾನಾಪುರ, ಮೂಡಲಗಿ, ಹುಕ್ಕೇರಿ ತಾಲೂಕುಗಳಲ್ಲಿ 96 ಹಳ್ಳಿಗಳು ಪ್ರವಾಹ ಬಾಧಿತವಾಗಿವೆ.

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಬೀಳುತ್ತಲೇ ಇದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ರಾಜಾಪುರ ಬ್ಯಾರೇಜ್‌ದಿಂದ 2,52,585 ಕ್ಯೂಸೆಕ್‌ ಹಾಗೂ ದೂಧ‌ಗಂಗಾ ನದಿಯಿಂದ 42,240 ಕ್ಯೂಸೆಕ್‌ ಸೇರಿದಂತೆ ಕೃಷ್ಣಾ ನದಿಗೆ ಈಗ ಒಟ್ಟು 2,94,825 ಕ್ಯೂಸೆಕ್‌ ನೀರು ಬರುತ್ತಿದೆ. ಮುಖ್ಯವಾಗಿ 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 599 ಮನೆಗಳು ಭಾಗಶಃ ಹಾನಿಗೊಳಗಾಗಿದ್ದರೆ ಒಂದು ಮನೆ ಸಂಪೂರ್ಣ ಕುಸಿದಿದೆ. ಆರು ಜಾನುವಾರುಗಳು ಸಾವನ್ನಪ್ಪಿವೆ. 80,590 ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಗೊಳಗಾಗಿವೆ.

ಹೆದ್ದಾರಿ ಸಂಪರ್ಕ ಕಡಿತ: ಮಹಾರಾಷ್ಟ್ರದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಕೊಲ್ಲಾಪುರ ಹಾಗೂ ಕರ್ನಾಟಕದ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರಸ್ತೆಯ ಮೇಲೆ ಭಾರೀ ಪ್ರಮಾಣದ ನೀರು ಹಾಗೂ ಭೂ ಕುಸಿತದ ಕಾರಣ ಬೆಳಗಾವಿಯಿಂದ ಕೊಲ್ಲಾಪುರದವರೆಗೆ ಮುಂದಿನ 24 ಗಂಟೆಗಳ ಕಾಲ ರಸ್ತೆ ಸಂಚಾರ ನಿಷೇಧಿಸಲಾಗಿದೆ. ಆದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ವಾಹನಗಳ ಮಾಲೀಕರು ರಸ್ತೆ ದಾಟುವ ಸಾಹಸಕ್ಕೆ ಮುಂದಾಗಬಾರದು ಎಂದು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ತಿಳಿಸಿದ್ದಾರೆ. ಇದಲ್ಲದೇ ಕಾಕತಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಬಂದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಬೆಳಗಾವಿ ತಾಲೂಕಿನಲ್ಲಿ ಮಾರ್ಕಂಡೇಯ ನದಿಯ ಪ್ರವಾಹದಿಂದ ಬೆನಕನಹಳ್ಳಿ ರಸ್ತೆ, ಬೆಳಗುಂದಿ-ರಕ್ಕಸಕೊಪ್ಪ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸಂಪರ್ಕ ಕಳೆದುಕೊಂಡ ಖಾನಾಪುರ: ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಬಹುತೇಕ ಪ್ರದೇಶಗಳು ಸಂಪರ್ಕ ಕಳೆದುಕೊಂಡಿವೆ. ಮುಖ್ಯವಾಗಿ ಖಾನಾಪುರ-ಗೋವಾ, ಖಾನಾಪುರ-ಬೆಳಗಾವಿ ರಸ್ತೆಗಳ ಮೇಲೆ ನೀರು ಬಂದಿರುವುದರಿಂದ ಇಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಚೋರ್ಲಾ ಬಳಿ ಭೂ ಕುಸಿತ ಉಂಟಾಗಿದ್ದರಿಂದ ಬೆಳಗಾವಿ-ಗೋವಾ ನಡುವಿನ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಖಾನಾಪುರ-ಪಾರಿಶ್ವಾಡ ರಸ್ತೆಯ ಮೇಲೆ ಸಹ ನೀರು ಬಂದು ಸಂಪರ್ಕ ಸ್ಥಗಿತವಾಗಿದೆ. ಲೋಂಡಾದಲ್ಲಿ 25 ಮನೆಗಳು ಜಲಾವೃತವಾಗಿದ್ದು ಈ ಮನೆಯ ಜನರಿಗೆ ಲೋಂಡಾ ರೈಲ್ವೇ ನಿಲ್ದಾಣದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಖಾನಾಪುರ ಹೊರವಲಯದ ಜಮೀನಿನಲ್ಲಿ ಇರುವ ಶಾಸಕಿ ಅಂಜಲಿ ನಿಂಬಾಳಕರ ಅವರ ಮನೆ ಸಹ ಸಂಪೂರ್ಣ ಜಲಾವೃತಗೊಂಡಿದೆ. ಖಾನಾಪುರ -ಪಣಜಿ ರಾಜ್ಯ ಹೆದ್ದಾರಿಯ ಮಲಪ್ರಭಾ ಸೇತುವೆಯ ಮೇಲೆ ಆರು ಅಡಿ ನೀರು ಬಂದಿದೆ. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ನಂದಗಡ -ಬೀಡಿ ರಸ್ತೆಯ ಪಕ್ಕದಲ್ಲಿರುವ ಹೊನ್ನಮ್ಮ ದೇವಸ್ಥಾನದ ಎರಡೂ ಬದಿಗಳಿಂದ ಕೆರೆಯು ತುಂಬಿ ಉಕ್ಕಿ ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇದಲ್ಲದೆ ಬೀಡಿ -ಹಳಿಯಾಳ, ಬೀಡಿ-ಕಿತ್ತೂರ ಮಧ್ಯದಲ್ಲಿರುವ ತಟ್ಟಿ ಹಳ್ಳದ ಸೇತುವೆಗಳ ಮೇಲೆಯೇ ನೀರು ಹರಿಯುತ್ತಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿರುವ ಕಾರಣ ನೀರು ಗೋಕಾಕ ನಗರದ ಜನವಸತಿ ಸ್ಥಳಗಳಲ್ಲಿ ಜನರು ಪರದಾಡುವಂತಾಗಿದೆ. ನಗರದ ಕುಂಬಾರ ಗಲ್ಲಿ, ಹಾಳಬಾಗ್‌ ಗಲ್ಲಿ, ಅಂಬಿಗೇರ ಗಲ್ಲಿ, ಬೋಜಗಾರ ಗಲ್ಲಿ ಮತ್ತು ಸ್ಮಶಾನ ಭಾಗದ ಜನ ವಸತಿ ಕೇಂದ್ರಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಳಬಾಗ್‌ ಗಲ್ಲಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಜನರಿಗೆ ಸುರಕ್ಷಿತ ಸ್ಥಳಕ್ಕೆ ಹೋಗಲು ಸೂಚಿಸಲಾಗಿದ್ದು ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.
ಕುಡಿಯುವ ನೀರು ಸರಬರಾಜು ಸ್ಥಗಿತ:  ನಗರದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದ ಹಿಂಡಲಗಾ ಪಂಪ್‌ಹೌಸ್‌ ನೀರಿನಿಂದ ಆವೃತವಾಗಿದ್ದು ಪಂಪ್‌ ಚಾಲನೆ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂಡಲಗಾ ಮತ್ತು ರಕ್ಕಸಕೊಪ್ಪ ಪಂಪ್‌ಗ್ಳು ಚಾಲನೆಯಲ್ಲಿಲ್ಲ ಹಾಗೂ ಹಿಡಕಲ್ ಡ್ಯಾಮ್‌ನಲ್ಲಿ ನೀರಿನ ಪ್ರಮಾಣ ಅಪಾಯದ ಮಟ್ಟ ತಲುಪಿರುವುದರಿಂದ ಅಲ್ಲಿ ಸಹ ನೀರೆತ್ತುವ ಕಾರ್ಯ ಸ್ಥಗಿತಗೊಳಿಸಲಾಗಿದೆ. ಕಾರಣ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯು ಹತೋಟಿಗೆ ಬಂದ ನಂತರ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಬೆಳಗಾವಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯ ಪಾಲಕ ಅಭಿಯಂತರು ತಿಳಿಸಿದ್ದಾರೆ.
ಮಲಪ್ರಭಾ: 10 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ: ಮುನವಳ್ಳಿ: ಭಾರಿ ಮಳೆಯಿಂದ ನವಿಲುತೀರ್ಥ ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್‌ಗಿಂತ ಅಧಿಕ ಒಳಹರಿವು ಇದ್ದು, ಜಲಾಶಯದ ನಾಲ್ಕು ಗೇಟ್‌ಗಳಿಂದ 10 ಸಾವಿರ ಕ್ಯೂಸೆಕ್‌ಕ್ಕೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನತೆ ಜಾಗರೂಕತೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಮಲಪ್ರಭಾ ಉಗಮಸ್ಥಾನ ಕಣಕುಂಬಿ ಸೇರಿದಂತೆ ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆಯಾಗಿ ಭಾರೀ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಸ್ಥಳೀಯ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಲ್ಲಿಯವರೆಗೆ ಯಾವುದೇ ಹಾನಿ ಉಂಟಾಗಿಲ್ಲ ಮಲಪ್ರಭಾ ಅಣೆಕಟ್ಟಿನ ಗರಿಷ್ಠ ಎತ್ತರ 2079 ಅಡಿ ಇದೆ. ಪ್ರಸ್ತುತ ನೀರಿನ ಪ್ರಮಾಣ 2075.5 ಇದ್ದು, ಮಳೆ ಪ್ರಮಾಣ ಹೀಗೆ ಮುಂದುವರಿದರೆ ಜಲಾಶಯ ಎರಡೇ ದಿನದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈಗಾಗಲೇ ಏಳು ಬಾರಿ ಜಲಾಶಯ ಭರ್ತಿಯಾಗಿದ್ದು ಎಂಟನೇ ಸಾರಿಗೆ ಭರ್ತಿಯಾಗಲು ಸಿದ್ಧವಾಗಿದೆ. ಶಾಸಕ ಮಾಮನಿ ಅವಲೋಕನ : ಮಂಗಳವಾರ ಶಾಸಕ ಆನಂದ ಮಾಮನಿ ಮುನವಳ್ಳಿ ಮಲಪ್ರಭಾ ನದಿಪಾತ್ರಕ್ಕೆ ಭೇಟಿ ಕೊಟ್ಟು, ಅವಲೋಕನ ಮಾಡಿದರು. ಹಳೇ ಸೇತುವೆ ಈಗಾಗಲೇ ಮುಳುಗಿದ್ದು, ನದಿ ಪಾತ್ರದ ಜನತೆ ಜಾಗರೂಕರಾಗಿರಬೇಕು. ಅತಿವೃಷ್ಟಿಯಿಂದ ಬೆಳೆ ಹಾನಿ ಹಾಗೂ ಆಸ್ತಿ ಹಾನಿಯಾದರೆ ಕೂಡಲೇ ಸಾರ್ವಜನಿಕರು ಮನವಿ ಸಲ್ಲಿಸಬೇಕೆಂದರು.
•ಕೇಶವ ಆದಿ

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.