ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ • ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿ

Team Udayavani, Aug 7, 2019, 3:27 PM IST

RN-TDY-2

ಸಾತನೂರು ರಸ್ತೆಯಲ್ಲಿ ಅಪಘಾತದಿಂದ ಜಖಂಗೊಂಡಿರುವ ಸಾರಿಗೆ ಬಸ್‌.

ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್‌, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಟ್ಟಣದ ಸಾತನೂರು ರಸ್ತೆಯ ಅಂಬೇಡ್ಕರ್‌ ನಗರದ ಬಳಿ ನಡೆದಿದೆ.

ಸಾತನೂರು ಮಾರ್ಗದ ಸಾರಿಗೆ ಸಂಸ್ಥೆ ಬಸ್‌, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ ಬಸ್‌ ಮುಂಭಾಗ ಕುಳಿತಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ: ವಿರೂಪಸಂದ್ರ ಗ್ರಾಮದ ಲಕ್ಷ್ಮೀ, ಕೋಡಿಹೊಸಹಳ್ಳಿಯ ಗೀತಾ, ಬಿ.ವಿ.ಹಳ್ಳಿಯ ಹರ್ಷಿತಾ, ಭಾಗ್ಯ, ಅಮ್ಮಳ್ಳಿದೊಡ್ಡಿಯ ಶಾಂತಾ, ಬೈರಶೆಟ್ಟಿಹಳ್ಳಿ ಗ್ರಾಮದ ಪೂರ್ಣಿಮಾ, ಶಿವರಾಜು, ಅರುಣ್‌, ಜಗದೀಶ್‌, ಸತೀಶ್‌ ಅವರಿಗೆ ಗಾಯಗಳಾಗಿವೆ. ಚಾಲಕ ಲೋಕೇಶ್‌ ಕಾಲಿಗೆ ಪೆಟ್ಟಾದರೆ, ನಿರ್ವಾಹಕ ಸ್ವಾಮಿ ಕಣ್ಣಿನ ಬಳಿ ಗಾಯಗಳಾಗಿವೆ. ಗಾಯಗೊಂಡವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕೆಟ್ಟು ರಸ್ತೆ ಬದಿ ನಿಂತಿದ್ದ ಲಾರಿ: ಲಾರಿ ಕೆಟ್ಟಿದ್ದರಿಂದ ರಸ್ತೆ ಬದಿಯಲ್ಲಿಯೇ ಇದ್ದ ಗ್ಯಾರೇಜ್‌ಗೆ ರಿಪೇರಿಗಾಗಿ ಬಿಡಲಾಗಿತ್ತು. ಸಾತನೂರು ಕಡೆಯಿಂದ ಬಂದ ಬಸ್‌ನ ಬ್ರೇಕ್‌ ವೈಫಲ್ಯವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್‌ ಹಾಕಿದಾಗ ವೈಫಲ್ಯಗೊಂಡಿರುವುದು ಚಾಲಕನ ಗಮನಕ್ಕೆ ಬಂದು, ಹೆಚ್ಚಿನ ಅನಾಹುತ ತಪ್ಪಿಸಲು ಮುಂದೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಸಿದ್ದಾನೆ ಎಂದು ಹೇಳಲಾಗಿದೆ.

ಗ್ರಾಮೀಣ ಭಾಗದಲ್ಲಿ ಹಳೆ ಬಸ್‌ ಸಂಚಾರ: ಗ್ರಾಮೀಣ ಭಾಗದಲ್ಲಿ ಸಂಚಾರ ಮಾಡುವ ಬಹುತೇಕ ಬಸ್‌ಗಳು ಹಳೆಯವಾಗಿದ್ದು, ಅವಧಿ ಮುಗಿದಿದ್ದರೂ ಕೆಲ ಬಸ್‌ಗಳು ಸಂಚಾರ ಮಾಡುತ್ತಿವೆ. ಸುಸ್ಥಿತಿಯಲ್ಲಿರದ ಬಸ್‌ಗಳನ್ನು ಓಡಿಸುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿವೆ ಎನ್ನುವುದು ಚಾಲಕ, ನಿರ್ವಾಹಕರ ಅಳಲಾಗಿದೆ. ಸ್ಥಳಕ್ಕೆ ಡಿಪೋ ವ್ಯವಸ್ಥಾಪಕ ರಾಘವೇಂದ್ರ, ಸಂಚಾರ ಠಾಣೆ ಎಸ್‌ಐ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

1-ruu

RCB ಅಭಿಮಾನಿಗಳನ್ನು ಕಿಚಾಯಿಸಿದ ಗಾಯಕ್ವಾಡ್‌!

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.