ತ್ರಿವಿಕ್ರಮ ಫಸ್ಟ್ ಲುಕ್ ರಿಲೀಸ್ ಮಾಡಿದ ಕ್ರೇಜಿಸ್ಟಾರ್
ಪುತ್ರ ವಿಕ್ರಮ್ ಪೋಸ್ಟರ್ ನೋಡಿ ಖುಷಿಗೊಂಡ ರವಿಚಂದ್ರನ್
Team Udayavani, Aug 8, 2019, 3:03 AM IST
ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅಭಿನಯದ “ತ್ರಿವಿಕ್ರಮ’ ಚಿತ್ರ ಶುರುವಿಗೆ ಮುನ್ನವೇ ಒಂದಷ್ಟು ಸುದ್ದಿಯಾಗಿದ್ದು ಗೊತ್ತೇ ಇದೆ. ಈಗ ಆ ಚಿತ್ರದ ಹೊಸ ಸುದ್ದಿಯೆಂದರೆ, ಚಿತ್ರದ ಫಸ್ಟ್ ಲುಕ್ ಹೊರಬಂದಿದೆ. ವಿಶೇಷವೆಂದರೆ, ಈ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ರವಿಚಂದ್ರನ್. ಹೌದು, ಬುಧವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಚಿತ್ರತಂಡದ ಜೊತೆಗೆ “ತ್ರಿವಿಕ್ರಮ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ರವಿಚಂದ್ರನ್, ಪುತ್ರ ವಿಕ್ರಮ್ ಅವರು ಬೈಕ್ ಮೇಲೆ ಕುಳಿತಿರುವ ಹೊಸಬಗೆಯ ಪೋಸ್ಟರ್ ನೋಡಿ ಖುಷಿಗೊಂಡಿದ್ದಾರೆ.
ಈ ಸಂದರ್ಭದಲ್ಲಿ ನಟ ಮನೋರಂಜನ್, ವಿಕ್ರಮ್, ನಿರ್ದೇಶಕರಾದ ಸಹನಾಮೂರ್ತಿ, ನಿರ್ಮಾಪಕ ಸೋಮಣ್ಣ , ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಇದ್ದರು. ವರಮಹಾಲಕ್ಷ್ಮೀ ಹಬ್ಬದಂದು “ತ್ರಿವಿಕ್ರಮ’ ಚಿತ್ರಕ್ಕೆ ಚಾಲನೆ ಸಿಗಲಿದೆ. ಚಿತ್ರಕ್ಕೆ ಆಕಾಂಕ್ಷ ಮತ್ತು ಅಕ್ಷರಗೌಡ ನಾಯಕಿಯರು. ಈ ಪೈಕಿ ಆಕಾಂಕ್ಷ ಮುಂಬೈ ಮೂಲದ ಹುಡುಗಿ. ಇದು ಅವರಿಗೆ ಮೊದಲ ಚಿತ್ರ. ಇನ್ನು, ಅಕ್ಷರಗೌಡ ಅವರು “ಪಂಚತಂತ್ರ’ ಚಿತ್ರದಲ್ಲಿ ನಟಿಸಿದ್ದರು. ಇಲ್ಲಿ ಎರಡನೇ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದೊಂದು ಪಕ್ಕಾ ಲವ್‌ಸ್ಟೋರಿ ಹೊಂದಿದ್ದು, ತಾಯಿ ಸೆಂಟಿಮೆಂಟ್, ಎಮೋಷನ್ಸ್ ಹಾಗು ಒಂದಷ್ಟು ಗೆಳೆತನ ಇತ್ಯಾದಿ ಅಂಶಗಳು ಚಿತ್ರದಲ್ಲಿವೆ. ನಾಯಕ ವಿಕ್ರಮ್‌ಗೆ ಇಲ್ಲಿ ಹೊಸ ಗೆಟಪ್ ಇರಲಿದ್ದು, ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಂಡಿದ್ದಾರೆ ಎಂಬುದು ನಿರ್ದೇಶಕರ ಮಾತು. ಚಿತ್ರದಲ್ಲಿ ಸಾಧುಕೋಕಿಲ, ತುಳಸಿ ಶಿವಮಣಿ, ಚಿಕ್ಕಣ್ಣ, ಸುಚೇಂದ್ರಪ್ರಸಾದ್ ಇತರರು ನಟಿಸುತ್ತಿದ್ದಾರೆ. ಅರ್ಜುನ್ ಜನ್ಯಾ ಆರು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಬೆಂಗಳೂರು, ದಾಂಡೇಲಿ, ರಾಜಸ್ಥಾನ್ ಹಾಗು ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.