ಕಾನೂನುಗಳು ಕಾರ್ಯರೂಪಕ್ಕೆ ಬಂದಾಗ ಬದಲಾವಣೆ

ಲಿಂಗತ್ವ ಅಲ್ಪಸಂಖ್ಯಾಕರಿಗೆ ಕಾನೂನು ಅರಿವು ಉದ್ಘಾಟಿಸಿ ಸಿ.ಎಂ.ಜೋಶಿ

Team Udayavani, Aug 8, 2019, 5:38 AM IST

070819ASTRO02

ಉಡುಪಿ: ಎಲ್ಲ ಸಮು ದಾಯಗಳ ಅಭ್ಯುದಯವಾಗಬೇಕೆಂಬ ಉದ್ದೇಶದಿಂದ ಹಲವಾರು ಕಾನೂನು ಗಳು ರೂಪಿಸಲ್ಪಟ್ಟಿವೆ. ಆದರೆ ಆ ಕಾನೂನುಗಳು ಕಾರ್ಯಗತಗೊಂಡರೆ ಮಾತ್ರ ಸಮಾಜದಲ್ಲಿ ಉತ್ತಮ ಬದ ಲಾವಣೆ ಕಾಣಲು ಸಾಧ್ಯ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ. ಜೋಶಿ ಹೇಳಿದರು.

ಆ. 7ರಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಬೆಂಗಳೂರಿನ ಆಶ್ರಯ ಸಮುದಾಯ ಸಂಘಟನೆ, ಸಾರಥ್ಯ, ಪಯಣ ಸಂಘಟನೆಗಳ ಸಹಭಾಗಿತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣ ದಲ್ಲಿ ಜರಗಿದ ಲಿಂಗತ್ಪ ಅಲ್ಪಸಂಖ್ಯಾಕರ ಸಮುದಾಯದವರಿಗಾಗಿ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮ ವನ್ನು ಉದ್ಘಾಟಿಸಿ ನ್ಯಾಯಾಧೀಶರು ಮಾತನಾಡಿದರು.

ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಆದರೆ ಕೆಲವು ಸಮಾಜದವರು, ಕೆಲವು ಭಾಗದವರು ಇನ್ನೂ ಕೂಡ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಇದಕ್ಕೆ ಕಾನೂನು ಸಮರ್ಪಕವಾಗಿ ಪಾಲನೆಯಾಗದಿರುವುದು ಕೂಡ ಕಾರಣ. ಕೆಲವು ವರ್ಷಗಳ ಹಿಂದೆ ಲಿಂಗತ್ವ ಅಲ್ಪಸಂಖ್ಯಾಕ ಸಮುದಾಯದವರ ಪರ ದನಿ ಎತ್ತುವವರು ಇರಲಿಲ್ಲ. ಕಾನೂನು ಸೇವೆಗಳ ಪ್ರಾಧಿಕಾರ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅವರ ಪರ ದನಿ ಎತ್ತುವ ಕೆಲಸ ಆರಂಭಿಸಿತು. ಅವರನ್ನು ಮುಖ್ಯವಾಹಿನಿಗೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. 10 ವರ್ಷಗಳ ಹಿಂದೆ ಯಾವುದೇ ಅರ್ಜಿ ಫಾರಂಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾಕರು ಎಂಬ ಕಾಲಂ ಇರಲಿಲ್ಲ. ಬಳಿಕ ನ್ಯಾಯಾಲಯ ಇದಕ್ಕೆ ಅವಕಾಶ ಮಾಡಿಕೊಟ್ಟಿತು. ನ್ಯಾಯಾಲಯಗಳಲ್ಲಿಯೂ ಲಿಂಗತ್ವ ಅಲ್ಪಸಂಖ್ಯಾಕರ ಕುರಿತಾಗಿ ನ್ಯಾಯಾ ಧೀಶರಿಗೆ ಮಾಹಿತಿ ಕಾರ್ಯಕ್ರಮಗಳು ಆಗಾಗ್ಗೆ ನಡೆಯುತ್ತಿರುತ್ತವೆ ಎಂದು ಸಿ.ಎಂ.ಜೋಷಿ ಹೇಳಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಎಎಸ್‌ಪಿ ಕುಮಾರಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಎಲ್‌.ಗೊನ್ಸಾಲ್ವಿಸ್‌, ಸಾರಥ್ಯ ಸಂಸ್ಥೆಯ ಅಧ್ಯಕ್ಷ ಪೆದ್ದಣ್ಣ, ಆಶ್ರಯ ಸಮುದಾಯ ಸಂಘಟನೆಯ ಪ್ರತಿನಿಧಿ ಸಂಜೀವ ವಂಡ್ಸೆ , ತ್ರಿಮೂರ್ತಿ ಉಪಸ್ಥಿತರಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಸಂತೋಷ್‌ ಸ್ವಾಗತಿಸಿದರು.

ಗುರುತಿನ ಚೀಟಿ ವಿತರಣೆ
ಲಿಂಗತ್ವ ಅಲ್ಪಸಂಖ್ಯಾಕರಿಗೆ ಗುರುತು ಕಾರ್ಡ್‌ ವಿತರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು ಅದರಂತೆ ಸಮಾ ರಂಭದಲ್ಲಿ 7 ಮಂದಿಗೆ ಸಾಂಕೇತಿಕವಾಗಿ 7 ಮಂದಿಗೆ ವಿತರಿಸಲಾಯಿತು. ಜಿಲ್ಲೆಯಲ್ಲಿ 280ಕ್ಕೂ ಅಧಿಕ ಲಿಂಗತ್ವ ಅಲ್ಪಸಂಖ್ಯಾಕರು ಇದ್ದಾರೆ ಎನ್ನಲಾಗಿದ್ದು ಈ ಕುರಿತಾದ ಸಮೀಕ್ಷೆಯನ್ನು ಸಮಿತಿ ನಡೆಸಲಿದೆ.

ಲಿಂಗತ್ವ ಅಲ್ಪಸಂಖ್ಯಾಕರು ಗುರುತು ಕಾರ್ಡ್‌ಗಾಗಿ ತಹಶೀಲ್ದಾರ್‌ ಅವರಿಗೆ ಅರ್ಜಿ ಸಲ್ಲಿಸಬಹುದು. ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಈ ಕಾರ್ಡ್‌ಗಳು ಬಳಕೆಯಾಗಲಿವೆ.

ಅಲ್ಪಸಂಖ್ಯಾಕ ನೀತಿ ಜಾರಿ
ಲಿಂಗತ್ವ ಅಲ್ಪಸಂಖ್ಯಾಕರು ಸೇರಿದಂತೆ ಸಮಾಜದಲ್ಲಿ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳದವರಿಗೆ ಸಹಾಯ ಮಾಡಬೇಕೆಂಬ ಇಚ್ಛೆ ಅನೇಕ ಅಧಿಕಾರಿಗಳಿಗೆ ಇರುತ್ತದೆ. ಆದರೆ ಇದಕ್ಕೆ ಪೂರಕವಾಗಿ ನೀತಿ ನಿಯಮಗಳು ಇಲ್ಲದಿದ್ದರೆ ಅಡ್ಡಿಯಾಗುತ್ತದೆ. ಇದೀಗ ಲಿಂಗತ್ವ ಅಲ್ಪಸಂಖ್ಯಾಕರಿಗೆ ಸಂಬಂಧಿಸಿದ ನೀತಿ ಜಾರಿಗೆ ಬಂದಿದೆ. ಇದರಿಂದಾಗಿ ಆಡಳಿತವರ್ಗ ಕೂಡ ಮುನ್ನಡೆಯಲು ಅನುಕೂಲವಾಗಿದೆ. ಲಿಂಗತ್ವ ಅಲ್ಪಸಂಖ್ಯಾಕರ ಪರವಾಗಿ ನಿರಂತರವಾಗಿ ಕೆಲಸಗಳನ್ನು ಮಾಡುತ್ತಿದ್ದರೆ ಸಮಾಜದಲ್ಲಿ ನಿಧಾನಕ್ಕೆ ಬದಲಾವಣೆಯುಂಟಾಗುವ ವಿಶ್ವಾಸವಿದೆ.
-ಸಿಂಧೂ ಬಿ. ರೂಪೇಶ್‌, ಜಿ.ಪಂ. ಸಿಇಒ

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.