ನೆರೆ ಹಾನಿ ಪ್ರದೇಶಕ್ಕೆ ಡಿಸಿ ಭೇಟಿ- ಪರಿಶೀಲನೆ

ವಿದ್ಯುತ್‌ ಸಂಪರ್ಕ ಕಡಿತಗೊಂಡ ಗ್ರಾಮಗಳಿಗೆ ತಕ್ಷಣ ವಿದ್ಯುತ್‌ ಪೂರೈಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Team Udayavani, Aug 8, 2019, 11:36 AM IST

8–Agust-20

ಶಿವಮೊಗ್ಗ: ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಭೇಟಿ ನೀಡಿದರು. ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಇದ್ದರು.

ಶಿವಮೊಗ್ಗ: ಕಳೆದ 3-4 ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಹಸ್ರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ನೂರಾರು ಸಂಖ್ಯೆಯ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರ ಪರಿಹಾರ ಕ್ರಮಗಳಿಗಾಗಿ ಜಿಲ್ಲಾಡಳಿತ ಅಗತ್ಯ ತುರ್ತು ಕ್ರಮಗಳನ್ನು ಕೈಗೊಂಡು ಸಂತ್ರಸ್ತರ ನೆರವಿಗೆ ಧಾವಿಸಿದೆ.

ಈಗಾಗಲೇ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಕೆ.ಬಿ.ಶಿವಕುಮಾರ್‌ ಅವರು ಮಳೆಹಾನಿಗೊಳಗಾದ ನಗರದ ಆಯ್ದ ಸ್ಥಳಗಳಿಗೆ ಉಪ ವಿಭಾಗಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ತಹಶೀಲ್ದಾರರು ಹಾಗೂ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ನಗರದ ಶಾಂತಮ್ಮ ಲೇಔಟ್, ಚಿಕ್ಕಲ್, ರಾಗಿಗುಡ್ಡ ಹಾಗೂ ತಾಲೂಕು ಕಚೇರಿ ಸಮೀಪದಲ್ಲಿ ಮರಗಳು ಧರೆಗುರುಳಿವೆ. ಬಸವನಗುಡಿಯಲ್ಲಿ ಯುಜಿಡಿ ಬ್ಲಾಕ್‌ಆಗಿದ್ದು, ತಕ್ಷಣದ ಕ್ರಮಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯ ಸೊರಬ ತಾಲೂಕಿನ 4ಗ್ರಾಮಗಳಲ್ಲಿ, ಶಿಕಾರಿಪುರ ತಾಲೂಕಿನ 5ಗ್ರಾಮಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಕೂಡಲೇ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡುವಂತೆ ಮೆಸ್ಕಾಂ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಾಗರ ತಾಲೂಕಿನಲ್ಲಿ 2150ಹೆಕ್ಟೇರ್‌, ಸೊರಬ ತಾಲೂಕಿನಲ್ಲಿ 2239 ಹೆಕ್ಟೇರ್‌, ಹೊಸನಗರ ತಾಲೂಕಿನಲ್ಲಿ 58 ಹೆಕ್ಟೇರ್‌ ಹಾಗೂ ಶಿಕಾರಿಪುರ ತಾಲೂಕಿನಲ್ಲಿ 6.4ಹೆಕ್ಟೇರ್‌ ಭೂಪ್ರದೇಶ ಜಲಾವೃತವಾಗಿದೆ. ಅಲ್ಲದೆ ಶಿವಮೊಗ್ಗ ತಾಲೂಕಿನಲ್ಲಿ 19 ಮನೆಗಳು, ಭದ್ರಾವತಿಯಲ್ಲಿ 27 ಮನೆಗಳು, ಸಾಗರ ತಾಲೂಕಿನಲ್ಲಿ ಸುಮಾರು 22 ಮನೆಗಳು, ತೀರ್ಥಹಳ್ಳಿಯಲ್ಲಿ 8 ಮನೆಗಳು, ಸೊರಬ ತಾಲೂಕಿನಲ್ಲಿ 10 ಮನೆಗಳು ಹಾಗೂ ಹೊಸನಗರ ತಾಲೂಕಿನಲ್ಲಿ 6 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಅಲ್ಲಿನ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಶಿವಮೊಗ್ಗ ನಗರದ ನದಿ ಇಕ್ಕೆಲಗಳ ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ 101176 ಕ್ಯೂಸೆಕ್ಸ್‌, ಭದ್ರಾ ಜಲಾಶಯದಲ್ಲಿ 22120 ಕ್ಯೂಸೆಕ್ಸ್‌ ಒಳಹರಿವು ಇದೆ. ತುಂಗಾ ಜಲಾಶಯದಲ್ಲಿ 77661ಕ್ಯೂಸೆಕ್ಸ್‌ ನೀರಿನ ಒಳ ಹರಿವು ಇದ್ದು, 76080 ಕ್ಯೂಸೆಕ್ಸ್‌ ಹೊರಹರಿವು ಇದೆ. ಆದ್ದರಿಂದ ನದಿ ಪ್ರಮಾಣದಲ್ಲಿ ನೀರಿನ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.