ಖಾಸಗಿ ಶಾಲೆಗಳಲ್ಲಿ ಪರಿಶಿಷ್ಟರಿಗಿಲ್ಲ ಮೀಸಲು
ಶೀಘ್ರ ಶುಲ್ಕ ವಿವರ ಪ್ರಕಟಿಸಲು ಕ್ರಮಕೈಗೊಳ್ಳಿ • ಪರಿಶಿಷ್ಟ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಡಿಡಿಪಿಐಗೆ ಎಸಿ ಸೂಚನೆ
Team Udayavani, Aug 8, 2019, 1:20 PM IST
ಕೋಲಾರದಲ್ಲಿ ನಡೆದ ಪರಿಶಿಷ್ಟರ ದೌರ್ಜನ್ಯ ಸಭೆಯಲ್ಲಿ ಎಸಿ ಸೋಮಶೇಖರ್ ಮಾತನಾಡಿದರು.
ಕೋಲಾರ: ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿದ್ದರೂ ನಿರ್ಲಕ್ಷ್ಯ ತೋರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈ ಗೊಂಡು, ಶಾಲಾ ಶುಲ್ಕಗಳ ವಿವರ ಪ್ರಕಟಿಸಲು ಕ್ರಮ ಕೈಗೊಳ್ಳಿ ಎಂದು ಡಿಡಿಪಿಐಗೆ ಉಪವಿಭಾಗಾಧಿಕಾರಿ ಸೋಮಶೇಖರ್ ಸೂಚನೆ ನೀಡಿದರು.
ನಗರದ ತಮ್ಮ ಕಚೇರಿಯಲ್ಲಿ ನಡೆದ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹದ್ದು ಮೀರಿ ವರ್ತಿಸುತ್ತಿವೆ, ಶಿಕ್ಷಣ ಇಲಾಖೆ ಅಧಿಕಾರಿಗಳ ಮಾತಿಗೆ ನಯಾಪೈಸೆ ಮರ್ಯಾದೆ ನೀಡುತ್ತಿಲ್ಲ. ಹೆಚ್ಚಾಗಿ ಮಾತನಾಡಿದರೆ ಅಧಿಕಾರಿಗಳನ್ನು ಬೆದರಿಸುವುದಲ್ಲದೆ, ಕೂಡಿ ಹಾಕುತ್ತಾರೆ ಎಂದು ಸಭೆಯಲ್ಲಿದ್ದ ಮುಖಂಡರು ಎಸಿ ಗಮನಕ್ಕೆ ತಂದರು.
ಮುಲಾಜಿಲ್ಲದೆ ಕ್ರಮ: ಇದಕ್ಕೆ ಪ್ರತಿಕ್ರಿಯಿಸಿದ ಸೋಮಶೇಖರ್, ಇವೆಲ್ಲವೂ ಸರಿಯಲ್ಲ. ಖಾಸಗಿ ಶಾಲೆಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದರೆ ನೋಡಿಕೊಂಡಿರಲು ಸಾಧ್ಯವಿಲ್ಲ. ಈ ಕೂಡಲೇ ಡಿಡಿಪಿಐಗೆ ಪತ್ರ ಕಳುಹಿಸಿ, ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು. ಜೊತೆಗೆ ಶುಲ್ಕಗಳ ವಿವರದ ಫಲಕ ಹಾಕಿಸಲಾಗುವುದು. ಆಗಲೂ ಯಾರಾದರೂ ನಿಯಮ ಉಲ್ಲಂಘಿಸಿದ್ದೇ ಆದಲ್ಲಿ, ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ದೇಗುಲಕ್ಕೆ ಪ್ರವೇಶ: ಗೃಹಪ್ರವೇಶ ಸಮಿತಿಯ ಸಂಚಾಲಕ ಅರಿವು ಡಾ.ಶಿವಪ್ಪ, ಸಮಿತಿಯಿಂದ ಸಮೀಕ್ಷೆ ನಡೆಸಲಾಗಿದ್ದು, ಆ ಪೈಕಿ ಶೇ.90 ದೇವಾಲಯಗಳಿಗೆ ಗ್ರಾಮೀಣ ಭಾಗದಲ್ಲಿ ದಲಿತರಿಗೆ ಪ್ರವೇಶವಿಲ್ಲ. ಸುರಕ್ಷತೆ ಇದ್ದರೆ ಅವರೂ ಎಲ್ಲರಂತೆ ಬರುತ್ತಾರೆ. ನಾವು ಕಾರ್ಯಕ್ರಮಗಳನ್ನು ನಡೆಸಿರುವ ಪರಿಣಾಮ ರಾಜ್ಯದ 32 ಸಾವಿರ ದೇವಾಲಯಗಳಲ್ಲಿ ಪ್ರವೇಶವಕಾಶ ಸಿಕ್ಕಿದೆ ಎಂದರು.
ಕ್ರಮ ಕೈಗೊಂಡಿಲ್ಲ: ಹಳ್ಳಿಗಳಲ್ಲಿ ಈಗಲೂ ಮನೆ, ದೇವಾಲಯಗಳಲ್ಲಿ ದಲಿತರ ಪ್ರವೇಶ ನಿರಾಕರಣೆ ಇದೆ. ಇನ್ನು ನಗರ ಪ್ರದೇಶಗಳಲ್ಲಿನ ಸಫಾಯಿ ಕರ್ಮಚಾರಿಗಳು ಬಹುತೇಕ ದಲಿತರೇ ಆಗಿದ್ದು, ಇತ್ತೀಚೆಗೆ ಮುಳಬಾಗಿಲಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಯಾವುದೇ ಸುರಕ್ಷತಾ ಸಲಕರಣೆಗಳನ್ನು ಬಳಸುತ್ತಿರಲಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಫೋಟೋ ಸಮೇತ ತಿಳಿಸಿದ್ದರೂ ಕ್ರಮ ಇಲ್ಲ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಉಪವಿಭಾಗಾಧಿಕಾರಿ ಸೋಮಶೇಖರ್, ಮುಜರಾಯಿ ಅಲ್ಲದೆ, ಎಲ್ಲ ದೇವಾಲಯಗಳೆದುರೂ ಎಲ್ಲ ವರ್ಗದ ಜನರಿಗೂ ಪ್ರವೇಶವಿದೆ ಎನ್ನುವ ಫಲಕಗಳನ್ನು ಅಳವಡಿಸಬೇಕಿದ್ದು, ಇದಕ್ಕೆ ತಹಶೀಲ್ದಾರರು ಜವಾಬ್ದಾರಿ ವಹಿಸಬೇಕು ಜೊತೆಗೆ ಪೊಲೀಸ್ ಅಧಿಕಾರಿಗಳ ಸಹಕಾರ ಪಡೆದುಕೊಳ್ಳಿ ಎಂದರು.
ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಸಫಾಯಿ ಕರ್ಮಚಾರಿಗಳಿಗೆ ಸಲಕರಣೆ ವ್ಯವಸ್ಥೆ ಮಾಡದ ಮುಳಬಾಗಿಲು ನಗರಸಭೆ ಪೌರಾಯುಕ್ತರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಮಾತನಾಡಿದ ಮುಖಂಡರು, ಸರ್ವೇ ಇಲಾಖೆಯ ಅಧಿಕಾರಿ ಸುರೇಶ್‌ಬಾಬು ದಲಿತರ ಭೂಮಿಗಳನ್ನೇ ಗುರಿಯಾಗಿಸಿಕೊಂಡು ಅದಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುವ ಕೆಲಸಗಳನ್ನು ಮಾಡುತ್ತಿದ್ದಾನೆ. ಇದುವರೆಗೂ ಆತನ ವರ್ಗಾವಣೆ ಮಾಡಿಸಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದು ದೂರಿದರು.
ಪರಿಶೀಲಿಸಿ ಕ್ರಮ: ಈಗಾಗಲೇ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಲೂರಿನ ಶಾಸಕ ನಂಜೇಗೌಡರನ್ನೂ ಪ್ರಕರಣಗಳಲ್ಲಿ ಸಿಲುಕಿಸಿ ತೊಂದರೆ ನೀಡಿ ಬೆದರಿಸುತ್ತಿದ್ದಾನೆ. ದಾಖಲೆ ಸಮೇತ ಅಧಿಕಾರಿ ವಿರುದ್ಧ ದೂರು ನೀಡಿದರೂ ಕ್ರಮವಾಗಿಲ್ಲ ಎಂದು ಹೇಳಿದರು. ಇದಕ್ಕೆ ಉಪವಿಭಾಗಾಕಾರಿ ಸೋಮಶೇಖರ್, ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಯಾವುದಕ್ಕೂ ಸ್ಪಂದಿಸುತ್ತಿಲ್ಲ: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಮಾಲೂರು ಅಧಿಕಾರಿ ಶಿವಕುಮಾರ್ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು ಜಿಪಂ ಉಪಾಧ್ಯಕ್ಷರು ಸೇರಿದಂತೆ ಮುಖಂಡರು ದೂರಿದರು.
ಸಮಗ್ರ ವರದಿ ನೀಡದಿದ್ದರೆ ಕ್ರಮ: ಈ ವೇಳೆ ಶಿವಕುಮಾರ್‌ರನ್ನು ತರಾಟೆ ತೆಗೆದುಕೊಂಡ ಎಸಿ, ನಾನು ಹೇಳಿದ್ದ 3 ಕೆಲಸಗಳನ್ನು ನೀನು ಮಾಡಿಲ್ಲ. ನಿನಗೆ ಸಂಬಳ ಯಾಕೆ ಕೊಡಬೇಕು. ಆಟ ಅಡುತ್ತೀಯ ನೀನು. 2 ದಿನದ ಒಳಗಾಗಿ ಸಮಗ್ರ ವರದಿ ನೀಡದಿದ್ದರೆ ಸರಿಯಾಗಿ ಅನುಭವಿಸುತ್ತೀಯ ಎಂದು ಎಚ್ಚರಿಕೆ ನೀಡಿದರು.
ಪ್ರಕರಣ ದಾಖಲು: ಕೋಲಾರ ಡಿವೈಎಸ್ಪಿ ಚೌಡಪ್ಪ, 2017ರಲ್ಲಿ 39 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 8 ಸುಳ್ಳಾಗಿವೆ. 2018ರಲ್ಲಿ 31 ಪ್ರಕರಣ ದಾಖಲು, 5 ಸುಳ್ಳು ಹಾಗೂ 2019ರಲ್ಲಿ 19 ಪ್ರಕರಣ ದಾಖಲು 1 ಸುಳ್ಳು ಎಂದು ಮಾಹಿತಿ ನೀಡಿದರು.
ಮುಳಬಾಗಿಲು ಡಿವೈಎಸ್ಪಿ ಬಿ.ಕೆ.ಉಮೇಶ್, 2017ರಲ್ಲಿ 23 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 2 ಸುಳ್ಳಾಗಿವೆ. 2018ರಲ್ಲಿ 19 ಪ್ರಕರಣ ದಾಖಲು, 2 ಸುಳ್ಳು ಹಾಗೂ 2019ರಲ್ಲಿ 12 ಪ್ರಕರಣ ದಾಖಲು 1 ಸುಳ್ಳು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಯಶೋಧ ಕೃಷ್ಣಮೂರ್ತಿ, ಸದಸ್ಯೆ ರೂಪಶ್ರೀ ಮಂಜು, ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.