ಕೇರಳದಲ್ಲಿ ಮಹಾಮಳೆಗೆ 6 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Team Udayavani, Aug 8, 2019, 7:30 PM IST
ತಿರುವನಂತಪುರ: ಕೇರಳ ರಾಜ್ಯಾದ್ಯಂತ ಸುರಿಯುತ್ತಿರುವ ಮಹಾಮಳೆಗೆ 6 ಮಂದಿ ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಸಾಕಷ್ಟು ಆಸ್ತಿ ಪಾಸ್ತಿ ನಷ್ಟವಾಗಿದ್ದು, ಸಂತ್ರಸ್ತರು ಅಸಹಾಯಕರಾಗಿದ್ದಾರೆ.
ನೆರೆಯಿಂದಾಗಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದ್ದು 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಅಣೆಕಟ್ಟುಗಳು ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ಹಲವಾರು ಸ್ಥಳಗಳು ಮುಳುಗಿವೆ.
ನದಿ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಎಲ್ಲೆಡೆ ಪ್ರವಾಹ ಭೀತಿ ಇದೆ. ವಯನಾಡ್, ಕೋಯಿಕ್ಕೋಡ್, ಮಲಪ್ಪುರಂ, ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆ ಬರುತ್ತಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ತ್ರಿಶ್ಶೂರು, ಎರ್ನಾಕುಲಂ, ಪಾಲಕ್ಕಾಡ್, ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೋಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ತೆರಳಬೇಕಾಗಿದ್ದ ಮೂರು ವಿಮಾನಗಳನ್ನು ವಾಪಸ್ ಕಳಿಸಲಾಗಿದೆ. ಕೋಯಿಕ್ಕೋಡ್ನಿಂದ ಅಬುಧಾಬಿಗೆ ಸಂಚರಿಸಬೇಕಾಗಿದ್ದ ಎತಿಹಾದ್ ಏರ್ಲೈನ್ಸ್ ವಿಮಾನಯಾನ ರದ್ದುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.