ಪ್ರವಾಹ ಸಂತ್ರಸ್ತರ ಸೇವೆಗೆ ಟೊಂಕ ಕಟ್ಟಿ ನಿಂತ 108 ಸಿಬ್ಬಂದಿ

ಹೆಚ್ಚುವರಿ ಸಿಬ್ಬಂದಿಗೆ ಬೇಡಿಕೆ ಸಲ್ಲಿಕೆ

Team Udayavani, Aug 9, 2019, 10:11 AM IST

9-Agust-3

ವಿಜಯಪುರ: ಪ್ರವಾಹ ಬಾಧಿತ ವಿಜಯಪುರ-ಬಾಗಲಕೋಟೆ ಜಿಲ್ಲೆಯಲ್ಲಿ ದಿನದ 24 ಗಂಟೆ ತುರ್ತು ಆರೋಗ್ಯ ಸೇವೆಯಲ್ಲಿ ತೊಡಗಿರುವ 108 ಆಂಬುಲೆನ್ಸ್‌ ಸಿಬ್ಬಂದಿ.

ಜಿ.ಎಸ್‌. ಕಮತರ
ವಿಜಯಪುರ:
ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿರುವಾಗಲೇ ವಿವಿಧ ನದಿಗಳ ಪ್ರವಾಹದಿಂದ ಬಾಧಿತ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಸವಾಲಾಗುತ್ತಿದೆ. ಸಾಮಾನ್ಯ ಸಂದರ್ಭಕ್ಕಿಂತ ನೆರೆ ಹಾಳಿಯಂಥ ಸಂಕಷ್ಟದ ಸಂದರ್ಭದಲ್ಲಿ ಕಂಡು ಬರುವ ವಿವಿಧ ಆರೋಗ್ಯ ಅದರಲ್ಲೂ ತುರ್ತು ಆರೋಗ್ಯ ಸೇವೆ ನೀಡಲು ವಿಜಯಪುರ-ಬಾಗಲಕೋಟೆ ಜಿಲ್ಲೆಗಳಲ್ಲಿ 108 ಆಂಬ್ಯುಲೆನ್ಸ್‌ ತುರ್ತು ಆರೋಗ್ಯ ಸೇವೆ ನೀಡಲು ಹೆಚ್ಚುವರಿ 10 ಆಂಬ್ಯುಲೆನ್ಸ್‌ ಸೇವೆ ಆರಂಭಿಸಿದ್ದು ಕರ್ತವ್ಯದಲ್ಲಿರುವ ಸಿಬ್ಬಂದಿಯಲ್ಲದೇ ಹೆಚ್ಚುವರಿಯಾಗಿ 30 ಸಿಬ್ಬಂದಿಗೆ ಬೇಡಿಕೆ ಸಲ್ಲಿಸಲಾಗಿದೆ.

108 ತುರ್ತು ಆರೋಗ್ಯ ಸೇವೆಗಾಗಿ ವಿಜಯಪುರ ಜಿಲ್ಲೆಯಲ್ಲಿ 30 ಆಂಬ್ಯುಲೆನ್ಸ್‌ ಹಾಗೂ ಚಾಲಕರು ಹಾಗೂ ಸ್ಟಾಪ್‌ ನರ್ಸ್‌ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣಾಧಿಕಾರಿ ಸೇರಿ 128 ಸಿಬ್ಬಂದಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿರುವ 23 ಆಂಬ್ಯುಲೆನ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸಲು 102 ಸಿಬ್ಬಂದಿ ಇದ್ದಾರೆ. ಆದರೆ ಅವಳಿ ಜಿಲ್ಲೆಗಳಲ್ಲಿ ಕೃಷ್ಣಾ, ಭೀಮಾ, ಘಟಪ್ರಭಾ, ಮಲಪ್ರಭಾ ನದಿಗಳಲ್ಲಿ ಕಂಡು ಬಂದಿರುವ ಭೀಕರ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಆರೋಗ್ಯ ತುರ್ತು ಸೇವೆಗೆ ಹೆಚ್ಚಿನ ಬೇಡಿಕೆ ಬಂದಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿ ಕಾಯ್ದಿರಿಸಿದ ಸ್ಥಿತಿಯಲ್ಲಿದ್ದ 10 ಆಂಬ್ಯುಲೆನ್ಸ್‌ಗಳನ್ನು ತರಿಸಿ, ಬಾಗಲಕೋಟೆ ಜಿಲ್ಲೆಗೆ 6 ಹಾಗೂ ವಿಜಯಪುರ ಜಿಲ್ಲೆಯಲ್ಲಿ 4 ಆಂಬ್ಯುಲೆನ್ಸ್‌ಗಳನ್ನು ಹೆಚ್ಚುವರಿ ಸೇವೆಗೆ ನಿಯೋಜಿಸಲಾಗಿದೆ. ಇದಲ್ಲದೇ ಕಳೆದ ನಾಲ್ಕಾರು ದಿನಗಳಿಂದ ಹಾಲಿ ಕರ್ತವ್ಯದಲ್ಲಿರುವ ಸಿಬ್ಬಂದಿ ಅತ್ಯಂತ ಕಠಿಣ ಪರಿಸ್ಥಿತಿಯಲ್ಲೂ ಉತ್ತಮ ಸೇವೆ ನೀಡುತ್ತಿದ್ದರೂ, ಸಿಬ್ಬಂದಿ ಮೇಲೆ ಅಧಿಕ ಒತ್ತಡ ಬೀಳುವುದನ್ನು ಹಾಗೂ ಇನ್ನೂ ಹೆಚ್ಚುವ ಪ್ರವಾಹ ಪರಿಸ್ಥಿತಿಯ ಸಂದರ್ಭದಲ್ಲಿ ಗರಿಷ್ಠ ದರ್ಜೆಯ ಆರೋಗ್ಯ ಸೇವೆ ನೀಡಲು ಹೆಚ್ಚುವರಿಯಾಗಿ ಇನ್ನೂ 30 ಸಿಬ್ಬಂದಿಗೆ ಬೇಡಿಕೆ ಸಲ್ಲಿಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯ ದಿನಗಳಲ್ಲಿ 120-150 ರಷ್ಟಿರುತ್ತಿದ್ದ 108 ಆಂಬ್ಯುಲೆನ್ಸ್‌ನ ತುರ್ತು ಸೇವೆಯ ಪ್ರಕರಣ ಇದೀಗ 150-180ಕ್ಕೆ ಏರಿದ್ದು, ಸರಾಸರಿ ಶೇ. 30 ತುರ್ತು ಸೇವೆ ಹೆಚ್ಚಿದೆ. ಅವಳಿ ಜಿಲ್ಲೆಗಳಲ್ಲಿ ಅತಿಹೆಚ್ಚು ಪ್ರವಾಹ ಬಾಧಿತ ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ನಿತ್ಯದ ಸರಾಸರಿ 100 ತುರ್ತು ಸೇವೆ ಪ್ರಕರಣದ ಬದಲಾಗಿ ಇದೀಗ 120ಕ್ಕೆ ಏರಿದ್ದು, ಈ ಜಿಲ್ಲೆಯಲ್ಲಿ ಶೇ. 35 ಹೆಚ್ಚುವರಿ ತುರ್ತುಸೇವೆ ಪ್ರಕರಣಗಳು ದಾಖಲಾಗುತ್ತಿವೆ.

ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಸಾಮಾನ್ಯವಾಗಿ ಕಂಡು ಬರುವ ಹೃದಯಾಘಾತ, ಮೂಳೆ ಮುರಿತ, ವೃದ್ಧರಲ್ಲಿ ಹೆಚ್ವುತ್ತಿರುವ ಆರೋಗ್ಯ ಸಮಸ್ಯೆ, ಮಕ್ಕಳಲ್ಲಿ ಕಂಡು ಬರುವ ರೋಗಗಳು ಹೀಗೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚುತ್ತಿವೆ. ಹೀಗಾಗಿ 108 ಸಿಬ್ಬಂದಿ ಗಂಭೀರ ಪ್ರವಾಹ ಪೀಡಿತ ಕೆಲವು ಹಳ್ಳಿಗಳಲ್ಲಿ ಠಿಕಾಣಿ ಹೂಡಿದ್ದರೆ, ಮತ್ತೆ ಕೆಲವು ಆಂಬ್ಯುಲೆನ್ಸ್‌ಗಳು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ನಿರಂತರ ಸಂಚಾರ ಸೇವೆಗೆ ಮುಂದಾಗಿವೆ. ಕಳೆದ ನಾಲ್ಕು ದಿನಗಳಲ್ಲಿ 108 ಆಂಬ್ಯುಲೆನ್ಸ್‌ಗೆ ಹೆಚ್ಚಿನ ಬೇಡಿಕೆ ಕಂಡು ಬರುತ್ತಿದ್ದರೂ ಸಾರ್ವಜನಿಕರಲ್ಲಿ ಇನ್ನೂ ನಮ್ಮ ಸೇವೆಯನ್ನು ಬಳಸಿಕೊಳ್ಳುವಲ್ಲಿ ಜಾಗೃತೆ ಇಲ್ಲವಾಗಿದೆ ಎಂಬ ಕೊರಗು 108 ಸಿಬ್ಬಂದಿ ಹೇಳುತ್ತಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ, ಹುನಗುಂದ ಹಾಗೂ ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಮುದ್ದೇಬಿಹಾಳ ಸೇರಿದಂತೆ ಕೆಲವು ತಾಲೂಗಳಲ್ಲಿ ಪ್ರವಾಹ ಬಾಧಿತರ ಆರೋಗ್ಯ ಸೇವೆ ನೀಡುವಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿವೆ. ಜಮಖಂಡಿ ತಾಲೂಕಿನ ಅಲಗೂರ ಭಾಗದಲ್ಲಿ ಪ್ರವಾಹ ಸಂದರ್ಭದಲ್ಲಿ ಮಳೆಯ ಕೆಸರಿನಲ್ಲಿ ದ್ವಿಚಕ್ರ ವಾಹನ ಜಾರಿಬಿದ್ದು ವ್ಯಕ್ತಿಯೊಬ್ಬ ತುರ್ತು ಚಿಕಿತ್ಸೆ ಸಿಗದೇ ಮೃತ ಪಟ್ಟಿದ್ದರೆ, 108 ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಗಾಯಾಳುವಾಗಿದ್ದ ವ್ಯಕ್ತಿಯೊಬ್ಬನಿಗೆ ತುರ್ತು ಚಿಕಿತ್ಸೆ ನೀಡಿ ರಕ್ಷಿಸಲಾಗಿದೆ.

ಅವಳಿ ಜಿಲ್ಲೆಗಳಲ್ಲಿರುವ ಹೆಚ್ಚುವರಿಯ 10 ಸೇರಿ 63 ಆಂಬ್ಯುಲೆನ್ಸ್‌ಗಳಲ್ಲಿ ಆಕ್ಷಿಜನ್‌ ವ್ಯವಸ್ಥೆ ಇದ್ದು, 5 ಆಂಬ್ಯುಲೆನ್ಸ್‌ಗಳಲ್ಲಿ ಅತಿ ತುರ್ತು ಆರೋಗ್ಯ ಸೇವೆಗಾಗಿ ತಲಾ 5 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ತಂತ್ರಜ್ಞಾನದ 5 ವೆಂಟಿಲೇಟರ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಇದರಲ್ಲೇ ಅವಳಿ ಜಿಲ್ಲೆಗಳ 108 ಎಲ್ಲ ಆಂಬ್ಯುಲೆನ್ಸ್‌ ಗಳಲ್ಲಿ ಯಾವುದೇ ರೀತಿಯ ಔಷಧಿ ಹಾಗೂ ಚಿಕಿತ್ಸೆಗೆ ಬೇಕಿರುವ ಇತರೆ ವೈದ್ಯಕೀಯ ಪರಿಕರಗಳು ಸೇರಿದಂತೆ ಅಗತ್ಯಕ್ಕಿಂತ ಹೆಚ್ಚಾಗಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿ ಇರಿಸಿಕೊಂಡಿದ್ದು, ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿರುವ ಸಾಮಾನ್ಯವಾಗಿ ಇರುವ ವ್ಯೆದ್ಯಕೀಯ ಔಷಧಿಗಿಂತ ಹೆಚ್ಚಿನ ದಾಸ್ತಾನು ಮಾಡಿಕೊಂಡಿದ್ದೇವೆ ಎಂದು ಅವಳಿ ಜಿಲ್ಲೆಗಳಲ್ಲಿ 108 ಸೇವೆಯ ಜಿಲ್ಲಾ ವ್ಯವಸ್ಥಾಪಕ ಸಂತೋಷ ಬೋಡಾ ವಿವರಿಸಿದ್ದಾರೆ.

ಪ್ರವಾಹ ಸಂದರ್ಭದಲ್ಲಿ ತುರ್ತು ಆರೋಗ್ಯ ಸೇವೆಗೆ ಹೆಚ್ಚಿನ ಬೇಡಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತರು ತಮ್ಮ ತುರ್ತು ಆರೋಗ್ಯ ಸೇವೆಗಾಗಿ 108 ಅಂಬುಲೆನ್ಸ್‌ ಸಿಬ್ಬಂದಿಯ ಸೇವೆಯನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.

108 ತುರ್ತು ಸೇವೆಯ ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕ ಸಂತೋಷ ಬೋಡಾ ಮೊ. 9886386999, ತುರ್ತು ಪರಿಸ್ಥಿತಿ ನಿರ್ವಹಣಾಧಿಕಾರಿಗಳಾದ ವಿಜಯಪುರ ಜಿಲ್ಲೆಯ ಅನಿಲಕುಮಾರ ಪಾಟೀಲ ಮೊ. 9731896108, ಬಾಗಲಕೋಟೆ ಜಿಲ್ಲೆಯ ಪ್ರಭಾಕರ ತಳವಾರ ಮೊ. 7899283108 ಅವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

ತುರ್ತು ಸೇವೆಯ 108 ಸಿಬ್ಬಂದಿ ಹಗಲಿರುಳು ಎನ್ನದೇ ಸಂತ್ರಸ್ತರ ಸೇವೆಗೆ ಸನ್ನದ್ಧವಾಗಿದ್ದೇವೆ. ಸಾರ್ವಜನಿಕರಲ್ಲಿ ಪ್ರವಾಹ ಸಂದರ್ಭದಲ್ಲಿ 108 ತುರ್ತು ಸೇವೆ ಬಳಕೆ ಕುರಿತು ಜಾಗೃತೆ ಇಲ್ಲ. ಹೀಗಾಗಿ ಅವಳಿ ಜಿಲ್ಲೆಗಳ ಪ್ರವಾಹ ಬಾಧಿತ ಹಳ್ಳಿಗಳಲ್ಲಿ ತುರ್ತು ಆರೋಗ್ಯ ಸೇವೆ ನೀಡಲು ನಮ್ಮ ತಂಡ ಸನ್ನದ್ಧವಾಗಿದ್ದು, ಸಂತ್ರಸ್ತರು ಕೂಡಲೇ 108ಗೆ ಕರೆ ಮಾಡಿ ಸೇವೆ ಪಡೆಯುವಂತೆ ಹಾಗೂ ಇನ್ನೂ ಹೆಚ್ಚಿನ ಮಾಹಿತಿಗೆ ನಾನು ಸೇರಿದಂತೆ ತುರ್ತು ಪರಿಸ್ಥಿತಿ ನಿರ್ವಹಣಾ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
ಸಂತೋಷ ಬೋಡಾ,
ಜಿಲ್ಲಾ ವ್ಯವಸ್ಥಾಪಕ 108 ಆಂಬ್ಯುಲೆನ್ಸ್‌ ತುರ್ತು ಸೇವೆ
ವಿಜಯಪುರ-ಬಾಗಲಕೋಟೆ ಜಿಲ್ಲೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.