ಗೂಡರ ಬ್ಯಾರೇಜ್ ಭರ್ತಿ
ಭೀಮಾ ನದಿಗೆ ಹೆಚ್ಚಿನ ನೀರು-ಗ್ರಾಮಸ್ಥರ ಆತಂಕ
Team Udayavani, Aug 9, 2019, 11:45 AM IST
ಸೈದಾಪುರ: ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಗುರುಮಠಕಲ್ ವೃತ್ತ ನಿರೀಕ್ಷಕ ಶ್ರೀನಿವಾಸ ಅಲಾಪುರ ನೀರು ಹರಿವು ವೀಕ್ಷಿಸಿದರು.
ಸೈದಾಪುರ: ಸನ್ನತಿ ಬ್ಯಾರೇಜ್‌ನಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಗೂಡೂರು-ಜೋಳದಡಗಿ ಬ್ರೀಜ್ ಕಂ ಬ್ಯಾರೇಜ್ ಭರ್ತಿಯಾಗಿದೆ. ಇದರಿಂದ ನದಿ ತೀರದ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ.
ಗೂಡೂರು ಸಮೀಪದ ಬ್ಯಾರೇಜ್‌ಗೆ ಗುರುವಾರ ಮಧ್ಯಾಹ್ನದ ವೇಳೆಗೆ ನೀರು ಬಂದಿದೆ. ಬ್ಯಾರೇಜ್ 0.946 ಟಿಎಂಸಿ ಅಡಿ ನೀರಿನ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭರ್ತಿಯಾಗಿ ಉಳಿದ ನೀರನ್ನು ನದಿಗೆ ಹರಿಸಲಾಗುತ್ತದೆ.
ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಮುಂಜಾಗೃತ ಕ್ರಮವಾಗಿ ಬುಧವಾರ ಗ್ರಾಮಗಳಲ್ಲಿ ಡಂಗುರು ಹಾಕಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಮಿನುಗಾರರನ್ನು ಸ್ಥಳಾಂತರಿಸಲಾಗಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಗ್ರಾಮಸ್ಥರಿಗೆ ಸಲಹೆ ಸೂಚನೆ ನೀಡುತ್ತಿದ್ದಾರೆ.
ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಗುರುಮಠಕಲ್ ವೃತ್ತ ನಿರೀಕ್ಷಕ ಶ್ರೀನಿವಾಸ ಅಲಾಪುರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಸೈದಾಪುರ ಪಿಎಸ್‌ಐ ಎನ್.ವೈ. ಗುಂಡುರಾವ್, ಗುರುಸ್ವಾಮಿ ಸೇರಿದಂತೆ ಕಂದಾಯ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.