ಪ್ರವಾಹದಲ್ಲಿ ಕೊಚ್ಚಿ ಹೋದ ರೈತ
ಅಗ್ನಿಶಾಮಕ ದಳದಿಂದ ಶೋಧ ಕಾರ್ಯ•ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Team Udayavani, Aug 9, 2019, 11:52 AM IST
ಯಾದಗಿರಿ: ಕೌಳೂರು ಹೊರವಲಯದಲ್ಲಿ ರೈತ ಪ್ರವಾಹದಲ್ಲಿ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಕ್ಕೆ ತೆರಳಿದರು
ಯಾದಗಿರಿ: ತಾಲೂಕಿನ ಕೌಳೂರು ಹೊರವಲಯದ ನದಿ ಪಾತ್ರಕ್ಕಿಳಿದಿದ್ದ ಸಾಬರಡ್ಡಿ(34) ಎಂಬ ರೈತ ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಘಟನೆ ನಡೆದಿದೆ.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿ ಪಾತ್ರಕ್ಕೆ 1 ಲಕ್ಷ ಕ್ಯೂಸೆಕ್‌ಗೂ ಹೆಚ್ಚಿನ ನೀರು ಹರಿಬಿಟ್ಟಿರುವುದು ಯಾದಗಿರಿ ಭೀಮಾ ನದಿಯಿಂದ ಕೌಳೂರು ಮಾರ್ಗವಾಗಿ ರಭಸದಿಂದ ನೀರು ಹರಿಯುತ್ತಿದೆ. ತನ್ನ ಜಮೀನಿಗೆ ನೀರು ಪಡೆಯಲು ನದಿಪಾತ್ರಕ್ಕೆ ಹಾಕಿದ್ದ ಮೋಟರ್ ತೆಗೆಯಲು ಗುರುವಾರ ಬೆಳಗ್ಗೆ 8:30ರ ಸುಮಾರು ತನ್ನ ಸಹೋದರನೊಂದಿಗೆ ಕೌಳೂರು ನದಿ ಪಾತ್ರಕ್ಕೆ ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ. ನೀರು ಪೂರೈಕೆಯಾಗುತ್ತಿದ್ದ ಪೈಪ್ ಪುಟ್ವಾಲ್ವ್ ತರಲು ಹೋದ ವೇಳೆ ಏಕಾಏಕಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಗಿ ತಿಳಿದು ಬಂದಿದೆ.
ಸ್ವಲ್ಪ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರಿಂದ ಮುನ್ನೆಚ್ಚರಿಕೆಯಾಗಿ ಟೊಂಕಕ್ಕೆ ಹಗ್ಗ ಕಟ್ಟಿಕೊಂಡೇ ನದಿ ಪಾತ್ರಕ್ಕೆ ತೆರಳಿದ್ದ, ನೀರಿನ ರಭಸ ಹೆಚ್ಚಾಗಿದ್ದರಿಂದ ಹಗ್ಗ ಹೊಟ್ಟೆ ಭಾಗಕ್ಕೆ ಬಿಗಿಯಾಗಿದ್ದು, ಅದನ್ನು ಬಿಡು ನಾನು ಈಜಿ ಬರುವೆ ಎಂದು ಹೇಳಿದ ವ್ಯಕ್ತಿ ಮೇಲೆ ಬಂದೇ ಇಲ್ಲ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ, ಡಿವೈಎಸ್‌ಪಿ ಯು. ಶರಣಪ್ಪ, ಸಿಪಿಐ ಶರಣಗೌಡ ಎನ್., ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಈರಣ್ಣ ಮಗ್ಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಗ್ನಿ ಶಾಮಕ ದಳದಿಂದ ಶೋಧ ಕಾರ್ಯ: ಕೌಳೂರು ಬಳಿ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಯಾದಗಿರಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಹೆಚ್ಚುವರಿಯಾಗಿ ಸೈನ್ಯದ ರಕ್ಷಣಾ ತಂಡ ಹಾಗೂ ಜತೆಗೆ ಸ್ಥಳೀಯ ಮೀನುಗಾರರ ಸಹಾಯ ಪಡೆದು ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.