ಇದೆಂಥಾ ಮಳೆ!

•ಭಾರೀ ಮಳೆಯಿಂದ ಭೂ ಕುಸಿತ- ಮನೆಗಳು ನೆಲಸಮ•ಜನಜೀವನ ಅಸ್ತವ್ಯಸ್ತ

Team Udayavani, Aug 9, 2019, 12:11 PM IST

9-Agust-16

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಗುರುವಾರವೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆಗಳಲ್ಲಿ ಭೂ ಕುಸಿತ, ಮನೆಗಳು ಬಿದ್ದು ಹೋಗಿರುವ ಬಗ್ಗೆ ವರದಿಯಾಗಿದೆ. ಮನೆ ಬಿದ್ದು 4 ಜನರಿಗೆ ಗಾಯವಾಗಿರುವ ಘಟನೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.

ಬುಧವಾರ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನಿಗಾಗಿ ಶೋಧ ಕಾರ್ಯ ಗುರುವಾರವೂ ಮುಂದುವರೆದಿತ್ತು.

ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳು ಹಾಗೂ ಚಿಕ್ಕಮಗಳೂರು ತಾಲೂಕಿನ ಗಿರಿ ಶ್ರೇಣಿಗಳಲ್ಲಿ ಗುರುವಾರ ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿರುವುದರಿಂದ ಹಾನಿಯ ಪ್ರಮಾಣ ಹೆಚ್ಚಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆಗೆ ಗಿರಿ ಮುಖ್ಯ ರಸ್ತೆಯಿಂದ ಸೀತಾಳಯ್ಯನಗಿರಿ-ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ ಹಲವು ಕಡೆ ಧರೆ ಕುಸಿತ ಉಂಟಾಗಿದೆ. ಗಿರಿ ರಸ್ತೆಯಿಂದ ಸೀತಾಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ 8-10 ಕಡೆ ಧರೆ ಕುಸಿದಿದ್ದು, ಕೆಲವು ಕಡೆ ತೀವ್ರವಾಗಿದೆ. ಕುಸಿದ ಮಣ್ಣು ಶೋಲಾ ಕಾಡಿನೊಳಗೆ ಜಮಾವಣೆಯಾಗಿರುವುದರಿಂದ ಆತಂಕ ಸೃಷ್ಟಿಯಾಗಿದೆ.

ಧರೆ ಕುಸಿತದಿಂದ ಗಿರಿ ಪ್ರದೇಶದಲ್ಲಿ ಹುಟ್ಟುವ ಹಳ್ಳಗಳ ನೀರು ಕೆಸರು ಮಿಶ್ರಿತವಾಗಿ ಕೆಂಪು ಬಣ್ಣದೊಂದಿಗೆ ಹರಿಯುತ್ತಿರುವುದರಿಂದ ಭೂ ಕುಸಿತದ ಭಯಂಕರತೆಗೆ ಸಾಕ್ಷಿಯಾಗಿದೆ. ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲೂ ಕುಸಿತ ಉಂಟಾಗಿದ್ದು, ಮೊದಲ ತಿರುವಿನಲ್ಲೇ ಬರುವ ಶೋಲಾ ಕಾಡಿನ ಬಳಿ ಮಳೆಯ ಹೊಡೆತಕ್ಕೆ ಒಂದು ಭಾಗವೇ ಕೊಚ್ಚಿಕೊಂಡು ಹೋಗಿದೆ.

ಮೇಲ್ಭಾಗದ ಹುಲ್ಲುಗಾವಲಿನ ಗುಡ್ಡ ಸಹ ಕುಸಿದಿದ್ದು, ಮಣ್ಣು, ಕಲ್ಲು ರಸ್ತೆ ಮೇಲೆ ಬಿದ್ದಿವೆ. ಒಂದು ಸಣ್ಣ ಕಾರು ಮಾತ್ರ ಹೋಗುವಷ್ಟು ಜಾಗವಿದೆ. ಈ ರಸ್ತೆಯಲ್ಲಿ ಮಳೆ ಮುಂದುವರಿದು ಬಿರುಸಿನಿಂದ ಬಂದರೆ ಇನ್ನಷ್ಟು ಕುಸಿತಗಳುಂಟಾಗುವ ಸಂಭವವಿದೆ.

ಮನೆ ಕುಸಿತ: ನಗರದ ವಿಜಯಪುರ ಬಡಾವಣೆಯಲ್ಲಿ ಕುಸುಮಾ ಅವರ ಮನೆಯ ಗೋಡೆ ಮಳೆಯಿಂದಾಗಿ ಬಿದ್ದಿದ್ದು, ಸಾವಿರಾರು ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಅರವಿಂದ ನಗರದಲ್ಲೂ ಮನೆಯೊಂದು ಬಿದ್ದಿದ್ದು, ಅದೃಷ್ಟವಶಾತ್‌ ಮನೆಯಲ್ಲಿದ್ದ ತಾಯಿ ಮತ್ತು ಮಗುವಿಗೆ ಯಾವುದೇ ತೊಂದರೆಯಾಗಿಲ್ಲ.

ಮೂಡಿಗೆರೆ ತಾಲೂಕಿನಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರೆದಿತ್ತು. ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ನದಿಯಲ್ಲಿ ಮುಳುಗಿಹೋಗಿತ್ತು. ಸೇತುವೆಯ ಮೇಲೆ ಸುಮಾರು 4 ಅಡಿಗಳಷ್ಟು ಎತ್ತರದಲ್ಲಿ ನೀರು ಹರಿಯುತ್ತಿದೆ.

ಶೃಂಗೇರಿ ತಾಲೂಕಿನಾದ್ಯಂತ ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿದೆ. ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಶೃಂಗೇರಿ ಶಂಕರ ಮಠದ ಗುರುಭವನ ಹಾಗೂ ಗಾಂಧಿ ಭವನಕ್ಕೆ ನದಿಯ ನೀರು ನುಗ್ಗಿದೆ. ಮಠದ ಪ್ರಸಾದ ನಿಲಯಕ್ಕೂ ನೀರು ನುಗ್ಗಿದೆ. ನರಸಿಂಹ ವನಕ್ಕೆ ತೆರಳುವ ಮಾರ್ಗ ನೀರಿನಲ್ಲಿ ಮುಳುಗಿದೆ. ಮಳೆ- ಗಾಳಿಯಿಂದಾಗಿ ವಿದ್ಯುತ್‌ ಪೂರೈಕೆಯಲ್ಲೂ ವ್ಯತ್ಯಯವಾಗಿದೆ.

ನರಸಿಂಹರಾಜಪುರ ತಾಲೂಕಿನಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ತಾಲೂಕಿನ ಕಡಹೀನಬೈಲು ಗ್ರಾಮದಲ್ಲಿ ಮನೆಯ ಮೇಲೆ ಬೃಹತ್‌ ಗಾತ್ರದ ಸಾಗವಾನಿ ಮರ ಬಿದ್ದ ಹಿನ್ನೆಲೆಯಲ್ಲಿ ಚಂದನ, ರಘು, ಮೀನಾ, ರೂಪಾ ಎಂಬುವವರಿಗೆ ಗಾಯವಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತಿನಕೊಪ್ಪ- ಶಂಕರಪುರ-ಮುಡುಬ ರಸ್ತೆಯಲ್ಲಿದ್ದ ಸೇತುವೆ ಬುಧವಾರದಿಂದಲೂ ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಮಧುಕರ್‌ ಶೆಟ್ಟಿ ಅವರ ಅಡಕೆ ತೋಟಕ್ಕೆ ನದಿ ನೀರು ನುಗ್ಗಿದ್ದು, ತೋಟ ಸಂಪೂರ್ಣ ಜಲಾವೃತವಾಗಿದೆ.

ತರೀಕೆರೆ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದೆ. ಕೆಮ್ಮಣ್ಣುಗುಂಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಹತ್ತಗಿರಿ ಜಲಪಾತದಲ್ಲಿ ನೀರಿನ ಪ್ರಮಾಣ ತೀವ್ರವಾಗಿದ್ದು, ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ಜಲ ದಿಗ್ಬಂದನ ಹಾಕಿದಂತಾಗಿದೆ. ಕಲ್ಹತ್ತಗಿರಿ ಜಲಪಾತದಲ್ಲಿ ಪ್ರವಾಹದ ರೀತಿಯಲ್ಲಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಲಪಾತದತ್ತ ಪ್ರವಾಸಿಗರು ತೆರಳದಂತೆ ತಡೆಯಲಾಗುತ್ತಿದೆ. ತರೀಕೆರೆ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಮನೆಗಳು ಬಿದ್ದು ಹಾನಿಯಾಗಿರುವ ವರದಿಯಾಗಿದೆ.

ಕೊಪ್ಪ ತಾಲೂಕಿನಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಕಡೂರು ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿದೆ.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.