ಜಮ್ಮು: ಸೆಕ್ಷನ್ 144 ಹಿಂತೆಗೆತ; ಶನಿವಾರದಿಂದ ಶಾಲೆ-ಕಾಲೇಜು ಶುರು
Team Udayavani, Aug 9, 2019, 6:23 PM IST
ಜಮ್ಮು: 370 ವಿಧಿ ರದ್ದತಿಗೆ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಮುನ್ನೆಚ್ಚರಿಕೆಯಾಗಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು ಕರ್ಫ್ಯೂ ಕೂಡ ಹಾಕಲಾಗಿತ್ತು. ಇದೀಗ ಪರಿಸ್ಥಿತಿ ಶಾಂತಿಯುತವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಮ್ಮುವಿನಲ್ಲಿ 144ಸೆಕ್ಷನ್ ತೆರವು ಮಾಡಲಾಗಿದೆ. ಜಮ್ಮು ನಗರ ವ್ಯಾಪ್ತಿಯಲ್ಲಿ ಇದನ್ನು ಅನ್ವಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇದರಿಂದ ಶನಿವಾರದಿಂದ ಶಾಲಾ-ಕಾಲೇಜುಗಳು ಎಂದಿನಂತೆ ಆರಂಭಗೊಳ್ಳಲಿದೆ.
ಆದಾಗ್ಯೂ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಭದ್ರತಾ ಪಡೆಗಳು ಸ್ಥಳದಲ್ಲೇ ಕಣ್ಗಾವಲು ಇರಿಸಲಿವೆ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕರು ಹೇಳಿದ್ದಾರೆ.
ಉಧಂಪುರದಲ್ಲಿ ಸಾಮಾನ್ಯ ಸ್ಥಿತಿ: ಉಧಂಪುರದಲ್ಲೂ 144 ಸೆಕ್ಷನ್ ಇದ್ದರೂ ಮಾರುಕಟ್ಟೆಗಳು ಶುಕ್ರವಾರ ತೆರೆದಿದ್ದವು. ಈದ್ ಹಬ್ಬದ ಹಿನ್ನೆಲೆಯಲ್ಲಿ ಜನರು ಖರೀದಿಗೆ ಬಂದಿದ್ದರು. ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಅಂಗಡಿಗಳು ತೆರೆದಿದ್ದವು. ವಾಹನಗಳೂ ಸಂಚರಿಸುತ್ತಿದ್ದವು. ಕೆಲವೊಂದು ಭಾಗಗಳಿಂದ 144 ಸೆಕ್ಷನ್ ತೆಗೆಯಲಾಗುತ್ತಿದ್ದು, ಹಂತ ಹಂತವಾಗಿ ಸೆಕ್ಷನ್ ತೆಗೆಯಲಾಗುತ್ತಿದೆ ಎಂದು ಉಪ ಜಿಲ್ಲಾಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.