ಭೋರ್ಗರೆಯುತ್ತಿರುವ ನೇತ್ರಾವತಿ : ಹತ್ತು ಮೀಟರ್ ಅಪಾಯದ ಮಟ್ಟದಲ್ಲಿ ಜೀವನದಿ


Team Udayavani, Aug 9, 2019, 8:29 PM IST

Pravaha-Nethravati-726

ಬಂಟ್ವಾಳ : ಪಶ್ಚಿಮ ಘಟ್ಟದ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನೇತ್ರಾವತಿ ಮತ್ತು ಕುಮಾರಾಧಾರ ನದಿಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು. ಹಲವು ಕಡೆಗಳಲ್ಲಿ ನೆರೆ ಪರಿಸ್ಥಿತಿ ಎದುರಾಗಿದೆ. ಬಂಟ್ವಾಳದ ಕಂಚಿಕಾರಪೇಟೆ ಎಂಬಲ್ಲಿರುವ ನೇತ್ರಾವತಿ ನದಿ ನೀರು ಮಟ್ಟ ಮಾಪಕದಲ್ಲಿ ಪ್ರಸ್ತುತ ನೀರಿನ ಮಟ್ಟ 10 ಮೀಟರ್ ಗಳನ್ನು ದಾಟಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ದಾಖಲೆಯ ಮಟ್ಟ ಎನ್ನಲಾಗುತ್ತಿದೆ.

ಕರಾವಳಿಯ ಜೀವನಾಡಿಯಂತಿರುವ ಎರಡೂ ನದಿಗಳು ಉಕ್ಕಿ ಹರಿದ ಕಾರಣ ಶುಕ್ರವಾರ ರಾತ್ರಿ ಹೊತ್ತಿಗೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನೇತ್ರಾವತಿ – ಕುಮಾರಧಾರ ನದಿಗಳ ಸಂಗಮವಾಗಿದೆ.

ಚಾರ್ಮಾಡಿ, ಮುಂಡಾಜೆ, ನಿಡ್ಗಳ್, ಧರ್ಮಸ್ಥಳ, ಉಪ್ಪಿನಂಗಡಿ, ಬಂಟ್ವಾಳ ಸೇರಿದಂತೆ ನೇತ್ರಾವತಿ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಧರ್ಮಸ್ಥಳದ ದೊಂಡೊಲೆ ಎಂಬಲ್ಲಿ ಪವರ್ ಪ್ರಾಜೆಕ್ಟ್ ಉದ್ದೇಶದಿಂದ ಕಟ್ಟಲಾಗಿದ್ದ ಕಿರು ಆಣೆಕಟ್ಟು ಸಂಪೂರ್ಣ ಜಲಾವೃತಗೊಂಡಿದೆ.

ಕಲ್ಮಂಜದಲ್ಲಿರುವ ಪಜಿರಡ್ಕ ಸಂಗಮ ಕ್ಷೇತ್ರಕ್ಕೆ ನೀರು ನುಗ್ಗಿದೆ. ಉಪ್ಪಿನಂಗಡಿ ಸಂಗಮ ಕ್ಷೇತ್ರದಲ್ಲೂ ನೆರೆ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರುತ್ತಿದೆ. ಇನ್ನು ಕುಮಾರಾಧಾರಾ ನದಿಯ ಉಪನದಿ ಕೆಂಪುಹೊಳೆ ಉಕ್ಕಿ ಹರಿಯುತ್ತಿರುವ ಕಾರಣ ಉದನೆ, ನೇಲ್ಯಡ್ಕಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ವಳಾಲು ಎಂಬಲ್ಲಿ ನೇತ್ರಾವತಿ ನೀರು ಮಂಗಳೂರು ಬೆಂಗಳೂರು ಹೆದ್ದಾರಿಗೆ ನೆರೆ ನೀರು ನುಗ್ಗಿದೆ.

ಇನ್ನು ಚಾರ್ಮಾಡಿಯಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ನೇತ್ರಾವತಿಯ ಹರಿವಿನ ರಭಸವನ್ನು ತಾಳಲಾರದೆ ದಿಡುಪೆ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ. ಮನೆಗಳು ಮತ್ತು ಅಡಿಕೆ ಮರಗಳು ಕಣ್ಣೆದುರೇ ಧರೆಗುರುಳುತ್ತಿವೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೂ ಅವಕಾಶ ನೀಡದೆ ಹರಿಯುತ್ತಿದೆ ನೆರೆ ನೀರು.

ತಗ್ಗು ಪ್ರದೇಶದಲ್ಲಿರುವವರು ತಕ್ಷಣವೇ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ನೇತ್ರಾವತಿ ನದೀಪಾತ್ರದಲ್ಲಿ ಮೈಕ್ ಮೂಲಕವೂ ಸ್ಥಳೀಯರಿಗೆ ನೆರೆ ಪರಿಸ್ಥಿತಿಯ ಕುರಿತು ಹಾಗೂ ಮುಂಜಾಗರುಕತಾ ಸೂಚನೆಗಳನ್ನು ನೀಡಲಾಗುತ್ತಿದೆ.

ಶಂಭೂರು ಎ.ಎಂ.ಆರ್. ಆಣೆಕಟ್ಟು ಸಂಪೂರ್ಣ ತುಂಬಿದ್ದು ಅಪಾಯದ ಕರೆಗಂಟೆಯನ್ನು ಆಣೆಕಟ್ಟು ಬಳಿಯ ನಿವಾಸಿಗಳಿಗೆ ಮೊಳಗಿಸಲಾಗಿದೆ. ಹೆಚ್ಚುವರಿ ನೀರನ್ನು 14 ಗೇಟುಗಳ ಮೂಲಕ ಹೊರಬಿಡಲಾಗುತ್ತಿದೆ. ಇನ್ನು ತುಂಬೆಯಲ್ಲಿರುವ ಆಣೆಕಟ್ಟಿನಲ್ಲೂ ಸಹ 30 ಗೇಟುಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.

ಅಜಿಲಮೊಗರುವಿನಲ್ಲಿ ನೇತ್ರಾವತಿ ನದಿಯಿಂದ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯಲು ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದ್ದಾರೆ. ಇನ್ನು ಮಾಜೀ ಶಾಸಕ ರಮಾನಾಥ್ ರೈ ಅವರೂ ಸಹ ಬಂಟ್ವಾಳದ ಬಡ್ಡಕಟ್ಟೆ, ಜಕ್ರಿಬೆಟ್ಟು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಬೇಸಗೆಯಲ್ಲಿ ಸಂಪೂರ್ಣ ಸೊರಗಿ ಹೋಗಿದ್ದ ಜೀವನದಿ ನೇತ್ರಾವತಿ ಬಳಿಕ ಮಳೆಗಾಲ ಪ್ರಾರಂಭವಾದರೂ ಜುಲೈವರೆಗೆ ಮೈದುಂಬಿರಲಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಜೋರಾಗಿರುವುದರಿಂದ ನೇತ್ರಾವತಿ ಮೈದುಂಬಿಕೊಂಡಿರುವುದು ಮಾತ್ರವಲ್ಲದೇ ತನ್ನ ಇಕ್ಕೆಲಗಳಲ್ಲಿ ನೆರೆ ಪರಿಸ್ಥಿತಿಯನ್ನೂ ತಂದೊಡ್ಡಿದ್ದಾಳೆ.

ಸಚಿತ್ರ ಮಾಹಿತಿ: ಕಿರಣ್ ಸರಪಾಡಿ, ಚೈತ್ರೇಶ್

ಟಾಪ್ ನ್ಯೂಸ್

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.