ಸಾರಿಗೆ ಅಧಿಕಾರಿಗಳಿಗಿಲ್ಲ ರಜೆ
Team Udayavani, Aug 10, 2019, 5:50 AM IST
ನೆರೆ ಹಾವಳಿ ಹಿನ್ನೆಲೆಯಲ್ಲಿ ಬಸ್‌ಗಳ ಕಾರ್ಯಾಚರಣೆ ಕುರಿತ ಮಾಹಿತಿಗಾಗಿ ಶುಕ್ರವಾರ ಖುದ್ದು ನಿಗಮದ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಾರಾಂತ್ಯ ಮತ್ತು ದೀರ್ಘಾವಧಿ ರಜೆ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಿಡಬೇಕು. ಅದರಲ್ಲೂ ಮುಖ್ಯವಾಗಿ ನೆರೆಪೀಡಿತ ಪ್ರದೇಶಗಳಲ್ಲಿ ವಿಭಾಗ ಅಥವಾ ಘಟಕ ಅಧಿಕಾರಿಗಳು ರಜೆ ಮೇಲೆ ಹೋಗ ಬಾರದು. ಸ್ಥಳದಲ್ಲೇ ಮೊಕ್ಕಾಂ ಹೂಡಿ, ಪರಿಸ್ಥಿತಿ ನಿಭಾಯಿಸತಕ್ಕದ್ದು ಎಂದು ಆದೇಶಿಸಿದರು.
ಅಲ್ಲದೆ, ವಿಭಾಗಗಳ ಮಟ್ಟದಲ್ಲಿಯೂ ನಿಯಂತ್ರಣ ಕೊಠಡಿ ಸ್ಥಾಪಿಸಬೇಕು. ದಿನದ 24 ಗಂಟೆ ಅದು ಕಾರ್ಯ ನಿರ್ವಹಿಸಬೇಕು. ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಿ, ಕಾರ್ಯಾಚರಣೆ ಮೇಲೆ ನಿಗಾ ವಹಿಸಬೇಕು. ಪ್ರತಿ ಮೂರು ಗಂಟೆ ಗಳಿಗೊಮ್ಮೆ ವಿಭಾಗದಿಂದ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಬೇಕು. ಮಾರ್ಗದಲ್ಲಿನ ರಸ್ತೆ, ಮಳೆ, ಸೇತುವೆ, ನೀರಿನ ಹರಿವು ಮತ್ತಿತರ ಅಂಶಗಳ ಬಗ್ಗೆ ಕೂಲಂಕುಷ ಮಾಹಿತಿ ಕ್ರೋಢೀಕರಿ ಸಬೇಕು. ಯಾವುದೇ ಬಸ್ ಪ್ರವಾಹ ಅಥವಾ ಮಳೆಗೆ ಸಿಲುಕಿದರೆ, ತಕ್ಷಣ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆ ತರಲು ಜಿಲ್ಲಾಡಳಿತದೊಂದಿಗೆ ಸಂಪರ್ಕ ಸಾಧಿಸಿ, ತುರ್ತು ಕ್ರಮ ಕೈಗೊಳ್ಳಬೇಕು. ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಾರಾಂತ್ಯ ಹೆಚ್ಚುವರಿ ಕಾರ್ಯಾಚರಣೆ ಅಥವಾ ಅನುಸೂಚಿಗಳು ರದ್ದಾದಲ್ಲಿ ಪ್ರಯಾಣಿಕರಿಗೆ ಸಂಪೂರ್ಣ ಪ್ರಯಾಣ ದರದ ಹಿಂಪಾವತಿ ಮಾಡಬೇಕು ಎಂದು ಹೇಳಿದರು. ಸಾರ್ವಜನಿಕರು ಬಸ್ ಕಾರ್ಯಾಚರಣೆ/ ರದ್ಧತಿ, ಮಾರ್ಗ ಬದಲಾವಣೆ/ ಪರಿಹಾರ ಸಾಮಗ್ರಿಗಳ ಉಚಿತ ರವಾನೆ ಕುರಿತ ಮಾಹಿತಿಗೆ ಕೇಂದ್ರ ಕಚೇರಿಯ ನಿಯಂತ್ರಣಾ ಕೊಠಡಿಯ ಮೊಬೈಲ್ ಸಂಖ್ಯೆ: 77609 90100 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rapper Badshah: ಬಾಲಿವುಡ್ ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂಬ್ ಸ್ಪೋಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.