
ಕೊಲ್ಲುವುದನ್ನು ನಾನು ಕಲಿತಿಲ್ಲ
ಬೇರ್ ಗ್ರಿಲ್ಸ್ಗೆ ಹೇಳಿದ್ದ ಪ್ರಧಾನಿ ಮೋದಿ
Team Udayavani, Aug 10, 2019, 5:12 AM IST

ನವದೆಹಲಿ: ಡಿಸ್ಕವರಿ ಚಾನೆಲ್ನಲ್ಲಿ ಸೋಮವಾರ ಪ್ರಸಾರವಾಗಲಿರುವ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್ ಗ್ರಿಲ್ಸ್ ಜೊತೆಗೆ ನಡೆಸಿದ ಮಾತುಕತೆಯ ಕೆಲವು ಸನ್ನಿವೇಶಗಳನ್ನು ಡಿಸ್ಕವರಿ ಚಾನೆಲ್ ಪ್ರಕಟಿಸಿದೆ. ಹುಲಿಯಿಂದ ಬಚಾವಾಗಲು ವಿಶೇಷ ಭರ್ಚಿಯೊಂದನ್ನು ಮೋದಿ ಕೈಗೆ ಬೇರ್ ಗ್ರಿಲ್ಸ್ ನೀಡಿದಾಗ, ‘ಒಂದು ಜೀವವನ್ನು ಹತ್ಯೆಗೈಯಬಾರದು ಎಂದು ನಾನು ಬೆಳೆದು ಬಂದ ಪರಿಸರ ನನಗೆ ಹೇಳಿಕೊಟ್ಟಿದೆ. ನೀವು ಹೇಳಿದ್ದೀರಿ ಎಂಬ ಕಾರಣಕ್ಕೆ ನಾನು ಈ ಭರ್ಚಿಯನ್ನು ಕೈಯಲ್ಲಿ ಹಿಡಿದುಕೊಳ್ಳುತ್ತೇನೆ’ ಎಂದು ಮೋದಿ ಹೇಳುತ್ತಾರೆ.
ಅಲ್ಲದೆ, ನಾವು ಈ ವಲಯವನ್ನು ಅಪಾಯಕರ ಪ್ರದೇಶ ಎಂದು ಪರಿಗಣಿಸಬಾರದು. ನಾವು ನಿಸರ್ಗದ ವಿರುದ್ಧ ಹೋದರೆ ಆಗ ಎಲ್ಲವೂ ಅಪಾಯಕರವಾಗಿರುತ್ತದೆ. ಮನುಷ್ಯರೂ ಅಪಾಯಕರವಾಗುತ್ತಾರೆ. ಆದರೆ ನಾವು ನಿಸರ್ಗದೊಂದಿಗೆ ಸಹಕರಿಸಿದರೆ, ನಿಸರ್ಗವೂ ನಮಗೆ ಸಹಕರಿಸುತ್ತದೆ ಎಂದೂ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಸ್ವಚ್ಛ ಭಾರತದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಅವರು ಪ್ರಸ್ತಾಪಿಸಿದ್ದು, ಹೊರಗಿನವರು ನಮ್ಮ ದೇಶವನ್ನು ಸ್ವಚ್ಛಗೊಳಿಸಲಾಗದು. ನಮ್ಮ ದೇಶದ ಜನರೇ ದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಮಾಜಿಕ ನೈರ್ಮಲ್ಯದ ಹವ್ಯಾಸವನ್ನು ನಾವು ಬೆಳೆಸಿಕೊಳ್ಳಬೇಕಿದೆ. ನಮ್ಮ ಯೋಜನೆ ಈ ನಿಟ್ಟಿನಲ್ಲಿ ಸಾಕಷ್ಟು ಯಶಸ್ಸು ಕಂಡಿದೆ. ನಾವು ಶೀಘ್ರದಲ್ಲೇ ಯಶಸ್ವಿಯಾಗುತ್ತೇವೆ ಎಂದು ನಿರೀಕ್ಷಿಸಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.