15ಕ್ಕೂ ಅಧಿಕ ಗ್ರಾಮಗಳ ನೂರಾರು ಮನೆ ಜಲಾವೃತ
ಬೆಳ್ತಂಗಡಿಯಲ್ಲಿ ಉಕ್ಕಿ ಹರಿದ ನದಿ ಮತ್ತು ಉಪನದಿಗಳು; ಪ್ರವಾಹ
Team Udayavani, Aug 10, 2019, 5:55 AM IST
ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹರಿಯುತ್ತಿರುವ ನದಿ ಮತ್ತು ಉಪನದಿಗಳಲ್ಲಿ ಶುಕ್ರವಾರ ನಿರೀಕ್ಷೆ ಮೀರಿದ ಪ್ರವಾಹ ಉಂಟಾಗಿ ತಾಲೂಕಿನ ಸುಮಾರು 15ಕ್ಕೂ ಅಧಿಕ ಗ್ರಾಮಗಳ ನೂರಾರು ಮನೆಗಳು ಜಲಾವೃಗೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ತಾಲೂಕಿನ ನೇತ್ರಾವತಿ, ಕಪಿಲ, ಮೃತ್ಯುಂಜಯ, ಸೋಮಾವತಿ ನದಿಗಳು, ನೆರಿಯ ಮತ್ತು ಅಣಿಯೂರು ಹೊಳೆಯಲ್ಲಿ ಪ್ರವಾಹದ ನೀರು ಉಕ್ಕಿಹರಿದಿತ್ತು. ಶುಕ್ರವಾರ ಮುಂಜಾನೆಯೇ ಪ್ರವಾಹ ಹರಿದು ಬಂದಿದ್ದು, ಬೆಳಗ್ಗೆಜನರು ಏಳುವ ಹೊತ್ತಿಗೆ ಮನೆಯಂಗಳದಲ್ಲಿ ನೆರೆ ಕಂಡು ಬೆಚ್ಚಿದರು. ಸ್ಥಳೀಯರು ಹೇಳುವ ಪ್ರಕಾರ ಇಂತಹ ನೆರೆ ನೀರು ಕಂಡದ್ದು ಇದೇ ಮೊದಲು.
ಲಾೖಲ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಮುಂಡಾಜೆ, ಕಲ್ಮಂಜ, ಚಾರ್ಮಾಡಿ, ಪುದುವೆಟ್ಟು, ಧರ್ಮಸ್ಥಳ, ಶಿಶಿಲ, ಕೊಕ್ಕಡ, ನಿಡ್ಲೆ, ಬೆಳಾಲು ಗ್ರಾಮಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ ವಾಗಿತ್ತು.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟವು ಶುಕ್ರವಾರ ಬೆಳಗ್ಗೆಯೇ ಮುಳುಗಡೆಯಾಗಿದ್ದು, ಮಧ್ಯಾಹ್ನದ ವೇಳೆಗೆಹೆಚ್ಚಿನ ಪ್ರಮಾಣದ ನೀರು ಕಂಡುಬಂದಿತ್ತು. ನೂರಾರು ಮನೆಗಳು ಜಲಾವೃತವಾಗಿರುವ ಜತೆಗೆ ಸಾವಿರಾರು ಎಕರೆ ಅಡಿಕೆ ತೋಟಗಳು, ಭತ್ತ, ರಬ್ಬರ್ ಬೆಳೆಗಳು ಜಲಾವೃತಗೊಂಡಿದ್ದವು.
ಪ್ರವಾಹಕ್ಕೆ ಸಿಲುಕಿದ ಭಕ್ತರು
ಮಿತ್ತಬಾಗಿಲು ಗ್ರಾಮದ ದಿಡುಪೆ ಪ್ರದೇಶದಲ್ಲಿ ಸ್ಥಳೀಯ ಹೊಳೆಯಿಂದ ಪ್ರವಾಹದ ನೀರು ಉಕ್ಕಿ ಕೂಡಬೆಟ್ಟು ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ವರಮಹಾಲಕ್ಷ್ಮೀ ಪೂಜೆಗೆ ಬಂದ ನೂರಕ್ಕೂ ಅಧಿಕ ಭಕ್ತರು ಸಿಲುಕಿ ಹಾಕಿಕೊಂಡರು. ನೆರಿಯ ಗ್ರಾಮದ ಕಾಟಾಜೆಯಲ್ಲಿ ವೃದ್ಧರೊಬ್ಬರು ನೆರೆ ನೀರಿನಲ್ಲಿ ಸಿಲುಕಿದ್ದು, ರಕ್ಷಿಸಲಾಯಿತು. ಚಾರ್ಮಾಡಿ ಪ್ರದೇಶದಲ್ಲಿ 35ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದವು. ನಾವೂರು, ಕಾಜೂರು-ಕೊಲ್ಲಿ ಪ್ರದೇಶದಲ್ಲೂ ಸಾಕಷ್ಟು ಮನೆಗಳು ಜಾಲಾವೃತಗೊಂಡಿದ್ದವು. ಪುದುವೆಟ್ಟು ಗ್ರಾಮದ ಬೊಲ್ಮನಾರು ಪೆಲತ್ತೇರಿ, ಕೇರ್ಯ ಪ್ರದೇಶದಲ್ಲಿ 15ಕ್ಕೂ ಅಧಿಕ ಮನೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಪಜಿರಡ್ಕ ಪ್ರದೇಶದಲ್ಲಿ ಕುಟುಂಬವೊಂದು ನೆರೆ ನೀರಿಗೆ ಸಿಲುಕಿ ಮನೆಯ ಮಹಡಿಯ ಮೇಲೆ ಬಂದು ರಕ್ಷಣೆಗಾಗಿ ಬೊಬ್ಬೆ ಹಾಕುತ್ತಿದ್ದುದು ಕಂಡುಬಂತು.
ತಾಲೂಕು ಆಡಳಿತ ಪರಿಹಾರ ಕೇಂದ್ರಗಳನ್ನು ತೆರೆದಿದೆ.
ಪಜಿರಡ್ಕ ಸಂಗಮ ಕ್ಷೇತ್ರ ಸೇರಿದಂತೆ ಹತ್ತಾರು ಧಾರ್ಮಿಕ ತಾಣಗಳು ಕೂಡ ಪ್ರವಾಹದ ನೀರಲ್ಲಿ ಮುಳುಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.