ಗುರು-ಶಿಷ್ಯರಲ್ಲಿ ಬಾಂಧವ್ಯ ಹೆಚ್ಚಲಿ
120 ಮಹಿಳೆಯರಿಂದ ಪೂರ್ಣಕುಂಭ•600 ಶಾಲಾ ವಿದ್ಯಾರ್ಥಿಗಳು ಭಾಗಿ
Team Udayavani, Aug 11, 2019, 4:19 PM IST
ಚಿತ್ರದುರ್ಗ: ಚಿಕ್ಕಗೊಂಡನಹಳ್ಳಿ ಪ್ರೌಢಶಾಲೆ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಬಸವಪ್ರಭು ಸ್ವಾಮೀಜಿ ಚಾಲನೆ ನೀಡಿದರು.
ಚಿತ್ರದುರ್ಗ: ತಾಲೂಕಿನ ಚಿಕ್ಕಗೊಂಡನಹಳ್ಳಿ ಶಾಲೆಯ ಸುವರ್ಣ ಮಹೋತ್ಸವ ಶನಿವಾರ ಅದ್ದೂರಿಯಾಗಿ ಜರುಗಿತು. ಇಡೀ ಊರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.
ಶಾಲೆಯ ಪ್ರಾರಂಭಕ್ಕೆ ಕಾರಣರಾದ ಗ್ರಾಮದ ಕೊಟ್ರಪ್ಪ, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಹಾಗೂ ಶಾರಾದಾ ದೇವಿಯ ಭಾವಚಿತ್ರಗಳನ್ನು ಸಾರೋಟಿನಲ್ಲಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ 120 ಮಹಿಳೆಯರು ಪೂರ್ಣಕುಂಭ ಹೊತ್ತಿದ್ದರು. 600 ವಿದ್ಯಾರ್ಥಿಗಳು ಸಾಲಾಗಿ ಮೆರವಣಿಗೆಯಲ್ಲಿ ಸಾಗಿದರು. ಇಡೀ ದಿನ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆ, ರಾಜ್ಯ ಸೇರಿದಂತೆ ಹಲವೆಡೆಯಿಂದ ಮಠಾಧಿಧೀಶರು, ಗಣ್ಯರು ಬಂದು ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಒಂದು ಶಾಲೆ ಐವತ್ತು ವರ್ಷ ಪೂರೈಸುವುದು ಸುಲಭದ ಮಾತಲ್ಲ. ಇಂದು ಮಕ್ಕಳ ಸಂಖ್ಯೆ ಕಡಿಮೆ ಎನ್ನುವ ಕಾರಣಕ್ಕೆ ಅನೇಕ ಸರ್ಕಾರಿ ಶಾಲೆಗಳು ಬೀಗ ಹಾಕಿಸಿಕೊಳ್ಳುತ್ತಿವೆ. ಇವೆಲ್ಲವುಗಳ ನಡುವೆ ಚಿಕ್ಕಗೊಂಡನಹಳ್ಳಿ ಶಾಲೆಯ ಸುವರ್ಣ ಮಹೋತ್ಸವ ಶ್ಲಾಘನೀಯ. ಕಳೆದ 50 ವರ್ಷಗಳಲ್ಲಿ ಈ ಶಾಲೆಯಲ್ಲಿ ಪಾಠ ಮಾಡಿದ ಬಹುತೇಕ ಶಿಕ್ಷಕರನ್ನು ಕರೆಯಿಸಿ ಗುರುವಂದನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಗುರು ಮತ್ತು ಶಿಷ್ಯರಲ್ಲಿ ಈ ರೀತಿಯ ಬಾಂಧವ್ಯ ಬೆಳೆಯಬೇಕು ಎಂದು ಹೇಳಿದರು.
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಇಡೀ ದಿನ ಗ್ರಾಮದಲ್ಲೇ ಇದ್ದು ಕಾರ್ಯಕ್ರಮದ ಉಸ್ತುವಾರಿ ನೋಡಿಕೊಂಡರು. ಸುವರ್ಣ ಮಹೋತ್ಸವ ಸಂದರ್ಭದಲ್ಲೇ ಚಿಕ್ಕಗೊಂಡನಹಳ್ಳಿ ಶಾಲೆಗೆ 75 ಲಕ್ಷ ರೂ. ಅನುದಾನದಲ್ಲಿ ಸಭಾ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಇಂದು ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಾರ್ಯಕ್ರಮ ಸಂಘಟಿಸುವುದು ಕಷ್ಟ. ಆದರೆ, ಚಿಕ್ಕಗೊಂಡನಹಳ್ಳಿಯಲ್ಲಿ ಮಾದರಿ ಕಾರ್ಯಕ್ರಮ ಮಾಡುವ ಮೂಲಕ ಒಳ್ಳೆಯ ಸಂದೇಶ ಕೊಡಲಾಗಿದೆ. ಬಡವ, ಶ್ರೀಮಂತ, ಮೇಲು-ಕೀಳು ಎಲ್ಲವನ್ನು ಸರಿದೂಗಿಸಿಕೊಂಡು ಒಗ್ಗಟ್ಟಾಗಿ ಶಾಲೆಯ ಸುವರ್ಣ ಮಹೋತ್ಸವ ಆಚರಣೆ ಮಾಡಿದ್ದು, ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ಆರ್.ತೂಪಲ್ಲಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ತಾಪಂ ಅಧ್ಯಕ್ಷ ಲಿಂಗರಾಜು, ಗ್ರಾಪಂ ಅಧ್ಯಕ್ಷೆ ಕೋಮಲ, ಹಾಸನ ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಹಾಂತಪ್ಪ, ಡಿಡಿಪಿಐ ರೇವಣಸಿದ್ದಪ್ಪ, ಬಿಇಒ ನಾಗಭೀಷಣ್, ಶಾಲೆಯ ಹಳೆಯ ವಿದ್ಯಾರ್ಥಿ, ನಿವೃತ್ತ ಡಿಡಿಪಿಐ ನಾಗೇಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.