ಇಂದೇ ಮಳೆ ಹಾನಿ ಪ್ರಾಥಮಿಕ ವರದಿ ನೀಡಲು ತಾಕೀತು


Team Udayavani, Aug 12, 2019, 3:00 AM IST

inde-male

ಹುಣಸೂರು: ಲಕ್ಷ್ಮಣತೀರ್ಥ ನದಿಯ ಪ್ರವಾಹ ಸಂತ್ರಸ್ತರಿಗೆ ಶೀಘ್ರ ಮತ್ತು ಪರಿಣಾಮಕಾರಿಯಾಗಿ ನೆರವಾಗಲು ಇಲಾಖಾವಾರು ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯವರು ಸೋಮವಾರ ಸಂಜೆಯೊಳಗೆ ಪರಿಸ್ಥಿತಿಯ ಕುರಿತು ಪ್ರಥಮ ಹಂತದ ವರದಿ ನೀಡಬೇಕೆಂದು ತಹಶೀಲ್ದಾರ್‌ ಐ.ಇ.ಬಸವರಾಜು ತಾಕೀತು ಮಾಡಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಾದ್ಯಂತ‌ ರಸ್ತೆ ಹಾಳಾಗಿರುವ ಕುರಿತು ಸಮಗ್ರ ಮಾಹಿತಿ ನೀಡಬೇಕು. ಸಣ್ಣ ನೀರಾವರಿ ಇಲಾಖೆ ನಾಲೆಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಒದಗಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಪರಿಹಾರ ಕೇಂದ್ರಗಳ ಸಮಗ್ರ ನಿರ್ವಹಣೆ, ಸಂತ್ರಸ್ತರನ್ನು ಗುರುತಿಸಿ ಪರಿಹಾರ ಕೇಂದ್ರಕ್ಕೆ ಕರೆತರುವ ಕಾರ್ಯ ನಡೆಸಬೇಕೆಂದರು.

ಮನೆಗಳ ನಷ್ಟದ ವರದಿ ನೀಡಿ: ಜಿಪಂ ಎಇಇ ಕಚೇರಿ ವತಿಯಿಂದ ತಾಲೂಕಾದ್ಯಂತ‌ ನೆರೆಯಿಂದ ಹಾನಿಯಾಗಿರುವ ಮನೆಗಳ ಕುರಿತು ಮಾಹಿತಿ ನೀಡಬೇಕು. ನಗರಸಭೆ ಪೌರಾಯುಕ್ತರು ಹುಣಸೂರು ನಗರದಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಮನೆಗಳ ಮಾಹಿತಿ ನೀಡಬೇಕು. ಅಗ್ನಿಶಾಮಕದಳ ಮತ್ತು ಪೊಲೀಸ್‌ ಇಲಾಖೆ ದಿನದ 24 ಗಂಟೆಯೂ ಕಾರ್ಯಸನ್ನದ್ಧªವಾಗಿರಬೇಕು ಎಂದು ಸೂಚಿಸಿದರು.

ಪಿಡಿಒಗಳಿಂದ ಮಾಹಿತಿ ಪಡೆಯಿರಿ: ಮಳೆಯಿಂದ ಸಂಕಷ್ಟಕ್ಕೊಳಗಾಗಿರುವ ಎಲ್ಲರಿಗೂ ಸಮರ್ಪಕವಾಗಿ ಸವಲತ್ತು ವಿತರಣೆಯಾಗಬೇಕು. ಈ ಹಿನ್ನೆಲೆಯಲ್ಲಿ ಗ್ರಾಪಂ ಪಂಚಾಯಿತಿ ವ್ಯಾಪ್ತಿಯಲ್ಲಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದು, ಯಾವುದೇ ದಾಖಲೆಗಳಿಲ್ಲದೇ ಇದ್ದ ಮನೆಗಳು ಹಾನಿಗೊಳಗಾಗಿದ್ದರೆ ಅಂತಹ ಮನೆಗಳನ್ನು ಆಯಾ ಪಂಚಾಯಿತಿಯ ಪಿಡಿಒ ಮೂಲಕ ದೃಢೀಕರಣಪತ್ರ ದೊರಕಿಸುವ ಮೂಲಕ ಪರಿಹಾರ ಸಿಗುವಂತೆ ಮಾಡಬೇಕು.

ದಾನಿಗಳು ನೀಡುವ ಪರಿಹಾರ ಸಾಮಗ್ರಿಗಳು, ಆಹಾರ ಇನ್ನಿತರ ಪದಾರ್ಥಗಳನ್ನು ಆಹಾರ ಶಿರಸ್ತೇದಾರ್‌ ನಿರ್ವಹಣೆ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ತಾಲೂಕಾದ್ಯಂತ ಬೆಳೆನಷ್ಟ ಕುರಿತಾದ ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಗಿರೀಶ್‌ ಅವರಿಗೆ ಸೂಚಿಸಿದರು. ಸಭೆಯಲ್ಲಿ ತಾಪಂ ಇಒ ಗಿರೀಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ನಾಗರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಗ್ನಿಶಾಮಕ ಅಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ನೆರೆ ಹಾನಿ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತೆ: ನಗರದ ದೇವರಾಜ ಅರಸು ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ ನೇತೃತ್ವದಲ್ಲಿ ತಾಲೂಕಿನ ವಿವಿಧ ಕಾಲೇಜುಗಳ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಮತ್ತು ಆರೋಗ್ಯ ಸಿಬ್ಬಂದಿಗಳ ತಂಡ ರಚಿಸಲಾಗಿದೆ. ಇವರೆಲ್ಲರೂ ಒಂದುಗೂಡಿ ಹಾನಿಗೊಳಗಾದ ಗ್ರಾಮಗಳಲ್ಲಿ ಸಂಚರಿಸಿ ಸ್ವಚ್ಛತೆ ಅರಿವು, ಆರೋಗ್ಯ ಶಿಬಿರ ಆಯೋಜನೆ ಮತ್ತು ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡಸುವಂತೆ ತಿಳಿಸಲಾಯಿತು.

ಹನಗೋಡು ಭಾಗಕ್ಕೆ ಹೆಚ್ಚಿನ ಸಿಬ್ಬಂದಿ: ತಾಲೂಕಿನಲ್ಲಿ ಮಳೆಯಿಂದಾಗಿ ಅತಿಹೆಚ್ಚು ಹಾನಿಗೊಳಗಾಗಿರುವ ಹನಗೋಡು ಹೋಬಳಿಗೆ ಹಾನಿ ಸಮೀಕ್ಷಾ ಕಾರ್ಯಕ್ಕಾಗಿ ಹೆಚ್ಚುವರಿಯಾಗಿ ತಲಾ ಇಬ್ಬರು ರಾಜಸ್ವ ನಿರೀಕ್ಷಕ ಮತ್ತು ಗ್ರಾಮಲೆಕ್ಕಿಗನನ್ನು ನಿಯೋಜಿಸಲಾಗುವುದು ಎಂದು ತಹಶೀಲ್ದಾರ್‌ ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.