ಮಳೆ ಇಳಿಮುಖ; ನಷ್ಟ ಏರುಮುಖ

Team Udayavani, Aug 12, 2019, 3:09 AM IST

male-ili

ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿ ರಾಜ್ಯದ ಹಲವೆಡೆ ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಪ್ರಮಾಣ ಕಡಿಮೆಯಾಗಿದೆ. ನೆರೆ ಕೂಡ ಕೆಲವೆಡೆ ಇಳಿಮುಖವಾಗಿದೆ. ಆದರೆ, ಮಳೆ, ನೆರೆಗಳಿಂದ ಉಂಟಾದ ನಷ್ಟದ ಪ್ರಮಾಣ ಸತತ ಏರುತ್ತಿದ್ದು, ನೆರೆಯ ಪ್ರವಾಹದಿಂದ ಸಂತ್ರಸ್ತರಾಗಿರುವವರ ಗೋಳು ಮುಗಿಲು ಮುಟ್ಟಿದೆ.

ಈ ಮಧ್ಯೆ, ಸಂತ್ರಸ್ತರ ನೆರವಿಗೆ ಸಂಘ-ಸಂಸ್ಥೆಗಳು, ಸಾರ್ವಜನಿಕರು ಧಾವಿಸಿದ್ದು, ಮಾನವೀಯತೆ ಮೆರೆಯುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಳಗಾವಿ ಸೇರಿ ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರೂ ಪ್ರವಾಹಪೀಡಿತರ ಅಳಲು ಆಲಿಸುತ್ತಿದ್ದು, ತುರ್ತು ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

4.15 ಲ.ಹೆ. ಬೆಳೆ ಹಾನಿ
ಬೆಳಗಾವಿ: ಪ್ರಾಥಮಿಕ ವರದಿಗಳ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿಯಿಂದ ಇದುವರೆಗೆ 34 ಜನರು ಮೃತಪಟ್ಟಿದ್ದು, ಅವರ ಕುಟುಂಬದವರಿಗೆ 48 ಗಂಟೆಗಳಲ್ಲಿ ಐದು ಲಕ್ಷ ರೂ.ಪರಿಹಾರದ ಚೆಕ್‌ ನೀಡಲಾಗುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಹೇಳಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದರು.

ರಾಜ್ಯದಲ್ಲಿ ಭಾನುವಾರ ಆರೇಂಜ್‌ ಅಲರ್ಟ್‌ ಘೋಷಿಸಲಾ ಗಿತ್ತು. ಸೋಮವಾರ ಹಳದಿ ಅಲರ್ಟ್‌ ಇರಲಿದ್ದು, ರಾಜ್ಯದ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದರು. ಪರಿಹಾರ ಕೇಂದ್ರ ಆರಂಭಿಸಿ ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆ ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಿಸಲಾಗುತ್ತಿದೆ ಎಂದರು.

100 ಕೋಟಿ ಬಿಡುಗಡೆ: ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ-ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

4.15 ಲಕ್ಷ ಹೆಕ್ಟೇರ್‌ ಬೆಳೆ ಹಾನಿ: ಈಗಿನ ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್‌ ಕೃಷಿ-ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. 136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ-ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ-ಭೂಕುಸಿತದಿಂದ ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ಶಾಲೆಗಳು, ಪೈಪ್‌ಲೈನ್‌ ವಿದ್ಯುತ್‌ ಕಂಬಗಳು ಸೇರಿ ಮೂಲ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ ಎಂದರು.

ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಕಳಸದ, ಲಕ್ಷ್ಮೀನಾರಾಯಣ, ಜಿಲ್ಲಾಧಿಕಾರಿ ಡಾ|ಎಸ್‌.ಬಿ.ಬೊಮ್ಮ ನಹಳ್ಳಿ, ಪೊಲೀಸ್‌ ಆಯುಕ್ತ ಬಿ.ಎನ್‌.ಲೋಕೇಶ್‌ ಕುಮಾರ್‌, ಐಜಿಪಿ ಎಚ್‌.ಜಿ. ರಾಘವೇಂದ್ರ ಸುಹಾಸ್‌, ಜಿಪಂ ಸಿಇಒ ಡಾ|ರಾಜೇಂದ್ರ ಕೆ.ವಿ.ಉಪಸ್ಥಿತರಿದ್ದರು.

10 ಸಾವಿರ ಕೋಟಿ ರೂ. ಹಾನಿ: ರಾಜ್ಯದಲ್ಲಿ ಅತಿಯಾದ ಮಳೆ ಹಾಗೂ ಪ್ರವಾಹದಿಂದ ಸುಮಾರು 10 ಸಾವಿರ ಕೋಟಿ ರೂ. ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ. ಪ್ರವಾಹಪೀಡಿತ ಜಿಲ್ಲೆಗಳಲ್ಲಿ 4.81 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗಾಗಿ ಒಟ್ಟು 19 ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದ್ದು, ಕೊಡಗು ಜಿಲ್ಲೆಗೆ ಇನ್ನೂ ಎರಡು ಹೆಲಿಕಾಪ್ಟರ್‌ ಅಗತ್ಯವಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ತಿಳಿಸಿದರು.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.