ಬಾಗಿನ ಅರ್ಪಿಸಿದ ಸಂಸದ ಪ್ರಜ್ವಲ್
Team Udayavani, Aug 12, 2019, 3:00 AM IST
ಹಾಸನ: ಹೇಮಾವತಿ ಜಲಾಶಯದ ಒಡಲು ಭರ್ತಿಯಾದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಭಾನುವಾರ ಬಾಗಿನ ಅರ್ಪಿಸಿದರು. ಈ ವೇಳೆ ಮಾತನಾಡಿ, ಕಳೆದೊಂದು ವಾರದಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಹೇಮಾವತಿ ಜಲಾಶಯಕ್ಕೆ 1,30,000 ಕ್ಯೂಸೆಕ್ ನೀರಿನ ಒಳಹರಿವು ಇದ್ದುದರಿಂದ ಅನಿವಾರ್ಯವಾಗಿ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಬೇಕಾಯಿತು. ಪರಿಣಾಮ ಪ್ರವಾಹದಿಂದ ಹೊಳೆನರಸಿಪುರ ತಾಲೂಕಿನಲ್ಲಿ 25 ಸಾವಿರ ಎಕರೆ ಬೆಳೆ ಜಲಾವೃತವಾಯಿತು.
18 ಚಾನಲ್‌ಗಳು ಒಡೆದು ಹೋಗಿವೆ. ಅತಿವೃಷ್ಟಿಯಿಂದ ಬೇಲೂರು ತಾಲೂಕಿನಲ್ಲಿ 50 ಸಾವಿರ ಎಕರೆಯಷ್ಟು ಬೆಳೆ ಹಾಳಾಗಿದೆ. ಹೊಳೆನರಸೀಪುರ ತಾಲೂಕು ಹಳೆಕೋಟೆ ಹೋಬಳಿಯಲ್ಲಿ 98 ಮನೆಗಳು, ಚನ್ನರಾಯ ಪಟ್ಟಣದಲ್ಲಿ 28 ಮನೆಗಳು, ಹೊಳೆನರಸಿಪುರದಲ್ಲಿ 5 ಮತ್ತು ಗನ್ನಿಕಡದಲ್ಲಿ ಹಲವು ಮನೆಗಳು ಕುಸಿದಿವೆ. ಚನ್ನರಾಯ ಪಟ್ಟಣದ 78 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಹೊಳೆನರಸಿಪುರದಲ್ಲಿ 1, ಸಕಲೇಶಪುರದಲ್ಲಿ 6, ಬೇಲೂರಿನಲ್ಲಿ 4 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.