ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
Team Udayavani, Aug 12, 2019, 3:00 AM IST
ಚಿಕ್ಕಬಳ್ಳಾಪುರ: ಎಂದೂ ಕಂಡು ಕೇಳರಿಯದ ಮಹಾಪ್ರವಾಹಕ್ಕೆ ಸಿಲುಕಿ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಜಿಲ್ಲೆಗಳ ಜನರು ತತ್ತರಿಸಿದರೆ, ಇತ್ತ ಬಯಲು ಸೀಮೆಯ ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಇಲ್ಲದೆ ರೈತಾಪಿ ಜನರ ಬದುಕು ಬರ್ಬರವಾಗಿದೆ.
ಮುಂಗಾರು ಹಂಗಾಮಿನಲ್ಲಿ ಮಳೆ ಇಲ್ಲದೆ ಬರಕ್ಕೆ ಸಿಲುಕಿರುವ ಜಿಲ್ಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಓಂಶಕ್ತಿ ಅಮ್ಮನವರ ನೂರಾರು ಮಹಿಳಾ ಭಕ್ತರು ಗಂಜಿ ಉತ್ಸವದ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಕಿ.ಮೀ.ಗಟ್ಟಲೇ ತಲೆಯ ಮೇಲೆ ಮಡಿಕೆ ಇಟ್ಟುಕೊಂಡು ಕಾಲ್ನಡಿಗೆಯಲ್ಲಿ ಸಾಗಿ ವರುಣನ ಕೃಪೆಗೆ ಮೊರೆಯಿಟ್ಟರು. ಕೆಲವರು ಮಡಿಕೆಗಳಲ್ಲಿ ನೀರು ತುಂಬಿಸಿದ್ದರೆ, ಮತ್ತೆ ಕೆಲವರು ಬೆಂಕಿ ತುಂಬಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನಗರದ ಜಿಲ್ಲಾಸ್ಪತ್ರೆ ಸಮೀಪದ ಕೈವಾರ ಯೋಗಿ ನಾರೇಯಣ ತಾತಯ್ಯನವರಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ, ನಗರದ ಪ್ರಮುಖ ಗ್ರಾಮ ದೇವರುಗಳಾದ ಶ್ರೀ ರಂಗನಾಥಸ್ವಾಮಿ, ಮಹಾಕಾಳಿ ಅಮ್ಮನವರಿಗೆ ಹಾಗೂ ಕಂದವಾರದ ವೆಂಕಟರಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ಸಾಧು ಮಠದ ರಸ್ತೆಯಿಂದ ಪುನ: ಕೈವಾರ ತಾತಯ್ಯನ ದೇವಸ್ಥಾನಕ್ಕೆ ತೆರಳಿದ ಭಕ್ತರು, ಗಂಜಿ ಉತ್ಸವವನ್ನು ಸಂಪನ್ನಗೊಳಿಸಿದರು.
ಗಂಜಿ ಉತ್ಸವದಲ್ಲಿ ಪಾಲ್ಗೊಂಡಿದ್ದವರಿಗೆಲ್ಲಾ ಓಂಶಕ್ತಿ ಸೇವಾ ಮಂಡಳಿ ವತಿಯಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು. ಗಂಜಿ ಮಡಿಕೆಯ ಉತ್ಸವದ ಆಚರಣೆ ವೇಳೆ ಓಂಶಕ್ತಿ ಆಧಿಪರಾಶಕ್ತಿ ಅಮ್ಮನವರ ಉತ್ಸವ ಮೂರ್ತಿಯನ್ನು ಅಲಂಕೃತ ಬೆಳ್ಳಿ ರಥದ ಮೂಲಕ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.