5 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ


Team Udayavani, Aug 12, 2019, 3:07 AM IST

siddaramaiah

ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅರಿಯಲು ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿ, ತಕ್ಷಣವೇ 5 ಸಾವಿರ ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಭಾನುವಾರ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ 1 ಲಕ್ಷ ಕೋಟಿ ರೂ.ನಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ.

10 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದೆ. ಅನೇಕ ಬ್ರಿಡ್ಜ್ಗಳು ಬಿದ್ದಿವೆ. ವಿದ್ಯುತ್‌ ಕಂಬಗಳು ಹಾನಿಗೊಳಗಾಗಿವೆ. ಸರ್ಕಾರ, ಖಾಸಗಿ ಆಸ್ತಿ ಪಾಸ್ತಿ ನಾಶವಾಗಿದೆ. ಸರ್ಕಾರದ ಮೂಲಗಳ ಪ್ರಕಾರ 25 ಜನ ಸಾವಿಗೀಡಾಗಿದ್ದಾರೆ. 25 ಜನ ಕಾಣೆಯಾಗಿದ್ದಾರೆ. ಜಾನುವಾರುಗಳು ಸಾವಿಗೀಡಾಗಿವೆ. ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ 126 ಕೋಟಿ ರೂ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳುತ್ತಿದ್ದಾರೆ. ಅದು ರಾಜ್ಯಕ್ಕೆ ಬರಬೇಕಾಗಿರುವ ಎನ್‌ಡಿ ಆರ್‌ಎಫ್ ನಿಧಿ ಹಣ. ನರೇಗಾ ಬಾಕಿ ಹಣ ಬಿಡುಗಡೆ ಮಾಡಿದ್ದರೂ, ಅದರಿಂದ ಪ್ರವಾಹ ಪರಿಹಾರ ನೀಡಲು ಬರುವುದಿಲ್ಲ. ಕೂಡಲೇ ಪ್ರಧಾನಿ ತಕ್ಷಣ ರಾಜ್ಯಕ್ಕೆ ಭೇಟಿ ನೀಡಿ ಸಮೀಕ್ಷೆ ಮಾಡಬೇಕು. ಕೇಂದ್ರದಿಂದ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು. ಜನರ ಸಮಸ್ಯೆಗೆ ಸ್ಪಂದಿಸದೇ ಭಾವನಾತ್ಮಕ ವಿಷಯಗಳ ಮೇಲೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಯಡಿಯೂರಪ್ಪ ಏಕ ಪಾತ್ರಾಭಿನಯ: ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರೇ ಎಲ್ಲ ಕಡೆ ತಿರುಗಾಡಿ ಪರಿಹಾರ ಕಾರ್ಯ ಕೈಗೊಳ್ಳಲು ಆಗುತ್ತಿಲ್ಲ. ಇದರಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ಅಗತ್ಯ ಇದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಬೇಕು. ಸುಮಾರು 2.5 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ಖಾಸಗಿ ವೈದ್ಯರ ಸಹಕಾರ ಪಡೆದು ಅವರ ಆರೋಗ್ಯದ ಕಡೆಗೆ ಗಮನ ಕೊಡಬೇಕು. ಜಾನುವಾರುಗಳಿಗೆ ಮೇವು, ಔಷಧ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ವಿಪತ್ತು ಘೋಷಣೆ: ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪ್ರವಾಹ ಬಂದಿದ್ದರೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ರಾಜ್ಯಕ್ಕೆ ಒಂದು ರೂಪಾಯಿಯೂ ಕೊಟ್ಟಿಲ್ಲ. ಕೇರಳ, ಮಹಾರಾಷ್ಟಕ್ಕೆ ಹೆಚ್ಚಿನ ಪರಿಹಾರದ ಹಣ ನೀಡಿದ್ದಾರೆ. ರಾಜ್ಯದಿಂದ ಬಿಜೆಪಿಯ 26 ಜನ ಸಂಸದರನ್ನು ಕಳುಹಿಸಿಕೊಟ್ಟಿದ್ದಾರೆ. ಆದ್ಯತೆ ಮೇಲೆ ಹಣ ಬಿಡೆಗಡೆ ಮಾಡಬೇಕಿತ್ತು. ಇಂತಹ ವಿಷಯದಲ್ಲಿ ಮಲತಾಯಿ ಧೋರಣೆ ತೋರಬಾರದು ಎಂದು ಹೇಳಿದರು.

ವೈದ್ಯರ ಸಲಹೆ ಪಡೆದು ಹೋಗುತ್ತೇನೆ: ನನಗೆ ಕಣ್ಣಿನ ಆಪರೇಷನ್‌ ಆಗಿದೆ. ಹದಿನೈದು ದಿನ ಹೊರಗಡೆ ತಿರುಗಾಡದಂತೆ ವೈದ್ಯರು ಸೂಚಿಸಿದ್ದಾರೆ. ನಾನು ಇಂತ ಸಂದರ್ಭದಲ್ಲಿ ಯಾವತ್ತೂ ಮನೆಯಲ್ಲಿ ಕೂರುವುದಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಎಲ್ಲ ಅಧಿಕಾರಿಗಳೊಂದಿಗೆ ದಿನಕ್ಕೆ ಮೂರು ಬಾರಿ ಸಂಪರ್ಕ ಮಾಡುತ್ತಿದ್ದೇನೆ. ಸಂಕಷ್ಟದಲ್ಲಿ ಸಿಲುಕಿದವರನ್ನು ಹೆಲಿಕಾಪ್ಟರ್‌ ಮೂಲಕ ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ನನ್ನ ಮಗನನ್ನು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕಳುಹಿಸಿಕೊಟ್ಟಿದ್ದೇನೆ. ವೈದ್ಯರು ಸೂಚಿಸಿದರೆ, ಕೇವಲ ಬಾದಾಮಿಗಷ್ಟೇ ಅಲ್ಲ, ಮಲೆನಾಡು ಸೇರಿದಂತೆ ಪ್ರವಾಹ ಪೀಡಿತ ಎಲ್ಲ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.