ಭಾರತ-ಪಾಕ್ ಡೇವಿಸ್ ಕಪ್ ಸ್ಥಳಾಂತರವಿಲ್ಲ: ಪಿಟಿಎಫ್
ಇಸ್ಲಾಮಾಬಾದ್‌ನಲ್ಲಿ ಯಾವುದೇ ಅಪಾಯವಿಲ್ಲ: ಪಿಟಿಎಫ್ ಮುಖ್ಯಸ್ಥ
Team Udayavani, Aug 12, 2019, 5:55 AM IST
ಕರಾಚಿ: ಭಾರತ ವಿರುದ್ಧ ನಡೆಯಲಿರುವ ಡೇವಿಸ್ ಕಪ್ ಏಶ್ಯ/ಒಶಿಯಾನಿಯ ಬಣ ಒಂದರ ಹೋರಾಟವನ್ನು ತಟಸ್ಥ ತಾಣಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಪಾಕಿಸ್ಥಾನ ಟೆನಿಸ್ ಫೆಡರೇಶನ್ (ಪಿಟಿಎಫ್) ತಳ್ಳಿ ಹಾಕಿದೆ.
ಇಸ್ಲಾಮಾಬಾದ್‌ನ ಕ್ರೀಡಾ ಸಂಕೀರ್ಣದಲ್ಲಿ ಸೆ. 14 ಮತ್ತು 15ರಂದು ಡೇವಿಸ್ ಕಪ್ ಕೂಟವನ್ನು ಆಯೋಜಿಸಲು ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಪಿಟಿಎಫ್ ಮುಖ್ಯಸ್ಥ ಸಲೀಂ ಸೈಫುಲ್ಲ ಹೇಳಿದ್ದಾರೆ.
‘ಈ ಹಿಂದಿನ ವೇಳಾಪಟ್ಟಿಯಂತೆ ಪಂದ್ಯಾಟವನ್ನು ಆಯೋಜಿಸಲು ನಾವು ಬದ್ಧರಾಗಿದ್ದೇವೆ. ಇಸ್ಲಾಮಾಬಾದ್‌ನಲ್ಲಿ ಭಾರತೀಯ ತಂಡಕ್ಕೆ ಯಾವುದೇ ಸಮಸ್ಯೆ ಎದುರಾಗುವ ಸಾಧ್ಯತೆಯಿಲ್ಲ. ಈ ತಾಣ ಸುರಕ್ಷಿತವಲ್ಲವೆಂದು ಭಾರತೀಯ ತಂಡ ಭಾವಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸೈಫುಲ್ಲ ತಿಳಿಸಿದ್ದಾರೆ.
ಪ್ರೇಕ್ಷಕರಿಲ್ಲದೆಯೂ ಪಂದ್ಯಾವಳಿ
‘ಭಾರತೀಯ ತಂಡ ಪಾಕಿಸ್ಥಾನದಲ್ಲಿ ಸುರಕ್ಷಿತವಾಗಿರುತ್ತದೆ ಎಂದು ಸೈಫುಲ್ಲ ಭರವಸೆ ನೀಡಿದ್ದಾರೆ. ತಂಡ 4 ದಿನ ಸುರಕ್ಷಿತ ತಾಣವಾದ ಇಸ್ಲಾಮಾಬಾದ್‌ನಲ್ಲಿ ಇರಲಿದೆ. ನಾವು ಭಾರತೀಯ ತಂಡ ಉಳಿದುಕೊಳ್ಳುವ ಹೊಟೇಲ್ ಮತ್ತು ಟೆನಿಸ್ ಕೋರ್ಟ್‌ಗೆ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಒಂದು ವೇಳೆ ಅವರು ಬಯಸಿದರೆ ಪ್ರೇಕ್ಷಕರಿಲ್ಲದೇ ಪಂದ್ಯಾಟ ನಡೆಸಲು ಸಿದ್ಧರಿದ್ದೇವೆ’ ಎಂದು ಸೈಫುಲ್ಲಾ ವಿವರಿಸಿದ್ದಾರೆ.
ತಟಸ್ಥ ತಾಣ: ಐಟಿಎಫ್ಗೆ ಭಾರತ ಮನವಿ
ಉಭಯ ರಾಷ್ಟ್ರಗಳ ನಡುವೆ ರಾಜಕೀಯ ಉದ್ವಿಗ್ನ ಸ್ಥಿತಿ ಮುಂದುವರಿದ ಹಿನ್ನೆಲೆಯಲ್ಲಿ ಮುಂಬರುವ ಡೇವಿಸ್ ಕಪ್ ಹೋರಾಟವನ್ನು ಪಾಕಿಸ್ಥಾನದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವಂತೆ ಭಾರತವು ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್‌ಗೆ (ಐಟಿಎಫ್) ಮನವಿ ಮಾಡಿದೆ. ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಮಾಡಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ. ಹೀಗಾಗಿ ಡೇವಿಸ್ ಕಪ್ ಹೋರಾಟವನ್ನು ತಟಸ್ಥ ತಾಣದಲ್ಲಿ ಆಯೋಜಿಸಲು ನಾವು ಐಟಿಎಫ್ ಅನ್ನು ಕೇಳಿಕೊಂಡಿದ್ದೇವೆ ಎಂದು ಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್ (ಎಐಟಿಎ) ಅಧ್ಯಕ್ಷ ಪ್ರವೀಣ್ ಮಹಾಜನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.