ಕಿಷ್ಕಿಂಧೆಯಂತಾದ ಹುಳಿಯಾರ್ ರಸ್ತೆ
ಸಮರ್ಪಕವಾಗಿ ಆಗುತ್ತಿಲ್ಲ ರಸ್ತೆ ಅಗಲೀಕರಣ •ಸಂಚಾರ ಸಮಸ್ಯೆ ನಿವಾರಣೆಗೆ ಬೇಕಿದೆ ಪರಿಹಾರ
Team Udayavani, Aug 12, 2019, 11:38 AM IST
ಹಿರಿಯೂರು: ಗಾಂಧಿ ವೃತ್ತದ ಬಳಿ ಹಾದು ಹೋಗಿರುವ ನಗರದ ಪ್ರಮುಖ ರಸ್ತೆಯಾಗಿರುವ ಹುಳಿಯಾರ್ ರಸ್ತೆ.
ಹಿರಿಯೂರು: ಹಿರಿಯೂರು ದಿನೇ ದಿನೇ ಬೆಳೆಯುತ್ತಿರುವ ನಗರವಾಗಿದೆ. 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಪುರಸಭೆಯಿಂದ ನಗರಸಭೆಗೆ ಬಡ್ತಿ ಹೊಂದಿದೆ. ಆದರೆ ಜನದಟ್ಟಣೆಯಿಂದ ಕೂಡಿರುವ ಹುಳಿಯಾರ್ ರಸ್ತೆ ಅಗಲೀಕರಣ ಸಮರ್ಪಕವಾಗಿ ಆಗದೇ ಇರುವುದರಿಂದ ಸಮಸ್ಯೆಯೂ ಹೆಚ್ಚುತ್ತಿದೆ.
ನಗರದ ಮಧ್ಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ-4 ಹಾದು ಹೋಗಿದ್ದು, ಪ್ರಧಾನ ರಸ್ತೆಯಾದ ಗಾಂಧಿ ವೃತ್ತದಲ್ಲಿ ಸದಾ ಜನ ದಟ್ಟಣೆ ಇರುತ್ತದೆ. ಇದೇ ವೃತ್ತದಲ್ಲಿ ಹುಳಿಯಾರ್ ರಸ್ತೆ ಹಾದು ಹೋಗಿದ್ದು, ಈ ಮಾರ್ಗದಲ್ಲಿ ಮೈಸೂರು, ಶ್ರೀರಂಗಪಟ್ಟಣ, ಹಾಸನ, ಮಂಗಳೂರು, ಅರಸಿಕೆರೆ, ತಿಪಟೂರುಗಳಿಗೆ ಭಾರಿ ವಾಹನಗಳು, ಲಾರಿಗಳು, ಬಸ್‌ಗಳು ಸಂಚರಿಸುತ್ತವೆ.
ರಾಜ್ಯ ಹೆದ್ದಾರಿಯಾಗಿದ್ದರೂ 20-30 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿ ಹೊಂದಿಲ್ಲ. ಇದುವರೆಗೂ ರಸ್ತೆ ಅಗಲೀಕರಣವೂ ಆಗಿಲ್ಲ. ಹೀಗಾಗಿ ಅತ್ಯಂತ ಕಿರಿದಾದ ರಸ್ತೆಯಲ್ಲಿ ವಾಹನಗಳು ಸಂಚರಿಸಬೇಕಾಗಿದೆ. ಇಲ್ಲಿ ಅಪಘಾತಗಳು ಸಾಮಾನ್ಯವಾಗಿಬಿಟ್ಟಿವೆ. ಇದೇ ರಸ್ತೆಯಲ್ಲಿ ಶಾಲಾ-ಕಾಲೇಜುಗಳಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರತಿ ದಿನ ಓಡಾಡುತ್ತಾರೆ. ಪಾದಚಾರಿಗಳ, ವಿದ್ಯಾರ್ಥಿಗಳ, ವಯೋವೃದ್ಧರ ಗೋಳು ಹೇಳತೀರದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ನಗರಸಭೆಯವರು ಎಚ್ಚೆತ್ತುಕೊಂಡು ಶೀಘ್ರ ಹುಳಿಯಾರ್ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಈ ಕುರಿತು ನಗರಸಭೆ ಪೌರಾಯುಕ್ತ ಮಹಂತೇಶ್ ಅವರನ್ನು ಸಂಪರ್ಕಿಸಿದಾಗ ಅವರು ಹೇಳಿದ್ದಿಷ್ಟು. ಹುಳಿಯಾರ್ ರಸ್ತೆ ಅಗಲೀಕರಣ ಕಾಮಗಾರಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿದೆ. ನಗರದ ಹೊರಭಾಗದಲ್ಲಿರುವ ವೇದಾವತಿ ಪ್ರಥಮ ದರ್ಜೆ ಕಾಲೇಜಿನಿಂದ ಹುಳಿಯಾರ್ ರಸ್ತೆ ಚಾನಲ್ವರೆಗೆ ಕಾಮಗಾರಿ ಪ್ರಗತಿಯಲ್ಲಿದೆ. ಹಂತ ಹಂತವಾಗಿ ನಗರದಲ್ಲೂ ಆರಂಭಗಾಗಲಿದೆ. ರಸ್ತೆ ಅಕ್ಕ ಪಕ್ಕದಲ್ಲಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಲಾಗಿದೆ. ಈ ಕೆಲಸ ಪೂರ್ಣ ಗೊಂಡ ನಂತರ ಉಳಿದ ಕೆಲಸ ಆರಂಭಿಸಲಾಗುವುದು.ಎರಡನೇ ಹಂತದ ಕಾಮಗಾರಿಯಲ್ಲಿ ಚಾನಲ್ನಿಂದ ನಗರದ ಒಳಭಾಗದಿಂದ ಗಾಂಧಿ ವೃತ್ತದ ವರೆಗೆ ರಸ್ತೆ ಅಗಲೀಕರಣ ನಡೆಯಬೇಕಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.