ಕಬಕ ಬಸ್ಸು – ಕಾರು ಡಿಕ್ಕಿ ಒಂದು ಸಾವು
Team Udayavani, Aug 12, 2019, 5:04 PM IST
ಪುತ್ತೂರು: ಇಲ್ಲಿನ ಹೊರವಲಯದ ಪೋಳ್ಯ ಎಂಬಲ್ಲಿ ಖಾಸಗಿ ಬಸ್ಸ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಒಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಇಂದು ಮದ್ಯಾಹ್ನ ಸಂಭವಿಸಿದೆ .
ಈಶ್ವರಮಂಗಲದ ಮುಂಡೋಳೆಯ ಅಬ್ದುಲ್ ಹಕೀಮ್(23) ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಪುತ್ತೂರಿನಿಂದ ಮಂಗಳೂರು ಕಡೇ ತೆರಳುತಿದ್ದ ಝೆನ್ ಕಾರು ಹಾಗೂ ಮಂಗಳೂರಿನಿಂದ ಪುತ್ತೂರಿಗೆ ತೆರಳುತಿದ್ದ ಖಾಸಗಿ ಬಸ್ಸ್ ನಡುವೆ ಈ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತರು ಕಾರಿನಲ್ಲಿ ಬಕ್ರಿದ್ ಹಬ್ಬದ ಪ್ರಯುಕ್ತ ತಮ್ಮ ಬಂಧು ,ಮಿತ್ರರ ಮನೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಉದ್ರಿಕ್ತರಿಂದ ಬಸ್ ಗೆ ಕಲ್ಲು ತೂರಾಟ:
ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಘಟನಾ ಸ್ಥಳದಲ್ಲಿ ಸೇರಿದ ಉದ್ರಿಕ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದಾರೆ. ಕಲ್ಲು ತೂರಾಟದಿಂದ ಬಸ್ಸಿನ ಹಿಂಬಾಗದ ಗಾಜು ಒಡೆದು ಹೋಗಿದೆ.
ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದರಿಂದ ಕೆಲ ಸಮಯಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.