ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಿ
Team Udayavani, Aug 13, 2019, 3:00 AM IST
ಮೈಸೂರು: ಸಮಾಜದಲ್ಲಿರುವ ಸಮಸ್ಯೆ ಬಗೆಹರಿಸುವ ಸಂವೇಧನಾಶೀಲತೆ ಬೆಳೆಸಿಕೊಂಡಾಗ ಮಾತ್ರ ನೈಜ ಪರೀಕ್ಷೆ ಎದುರಿಸಲು ಸಾಧ್ಯ ಎಂದು ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯೀಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹೇಳಿದರು. ಜ್ಞಾನಬುತ್ತಿ ಸಂಸ್ಥೆಯಿಂದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ 2019ರ ಐಎಎಸ್/ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ಮಾತನಾಡಿದರು.
ಸಮಾಜದ ಮೂಲ ಸಮಸ್ಯೆಗಳನ್ನು ಮೊದಲು ಪರಿಹರಿಸುವುದು, ಸಮಾಜದ ಕಟ್ಟ ಕಡೆ ವರ್ಗಕ್ಕೂ ಸೌಲಭ್ಯ ತಲುಪುವಂತೆ ಮಾಡುವುದು ಮುಖ್ಯ ಪರೀಕ್ಷೆಯಾಗಿದೆ. ಶೈಕ್ಷಣಿಕವಾಗಿ ಹಲವು ಪರೀಕ್ಷೆಗಳನ್ನು ನಾವು ಪಾಸ್ ಮಾಡುತ್ತೇವೆ. ಐಎಎಸ್ ಹಾಗೂ ಇತರೆ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗಳಲ್ಲಿ ಪಾಸ್ ಆಗುತ್ತೇವೆ. ಆದರೆ, ಸಮಾಜದ ಸಮಸ್ಯೆಗಳನ್ನು ಬಗೆಹರಿಸುವುದೇ ನೈಜ ಪರೀಕ್ಷೆಯಾಗಿದೆ. ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.
ಇದೇ ವಿಚಾರ ಸಂದರ್ಶನದಲ್ಲೂ ಬರಬಹುದು. ಐಎಎಸ್‌ನಲ್ಲಿ ಹೀಗಿರುವ ಪತ್ರಿಕೆಯೊಂದಿಗೆ ಮೌಲ್ಯ(ಎಥಿಕ್ಸ್ ) ಎಂಬ ವಿಷಯ ಸೇರಿಸಲಾಗಿದ್ದು, ಮೌಲ್ಯ ಮೈಗೂಡಿಸಿಕೊಳ್ಳಿ. ಏಕೆ ಐಎಎಸ್ ಅಧಿಕಾರಿಯಾಗಬೇಕೆಂಬುದನ್ನು ಸ್ಪಷ್ಟಪಡಿಸಿಕೊಳ್ಳಿ ಎಂದರು. ರಾಜ್ಯದಲ್ಲಿರುವ 6 ಕೋಟಿ ಜನಸಂಖ್ಯೆಯಲ್ಲಿ 2 ಕೋಟಿಯಷ್ಟು ಬಡತನ ರೇಖೆಯಿಂದ ಕಡಿಮೆ ಇರುವ ಬಡವರಿದ್ದಾರೆ.
ಇವರಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಪಡಿತರ ಸೇರಿದಂತೆ ಇತ್ಯಾದಿಗಳನ್ನು ನೀಡುವುದರಿಂದ ಬಡತನ ನಿರ್ಮೂಲನೆಯಾಗುವುದೇ ಎಂಬುದನ್ನು ತಿಳಿದುಕೊಳ್ಳಬೇಕು. ಇವರೆಲ್ಲರನ್ನು ಒಳಗೊಳ್ಳುವ ಸಮಗ್ರ ಯೋಜನೆ ರೂಪಿಸುವ ದೂರದೃಷ್ಟಿ ಇರಬೇಕು ಎಂದರು. ಇಂದಿನ ಯುವ ಸಮುದಾಯದಲ್ಲಿ ಗುರಿ ಇಲ್ಲದೆ ಜೀವಿಸುವವರೇ ಹೆಚ್ಚಾಗಿದ್ದಾರೆ. ಗುರಿ ಮತ್ತು ಕನಸು ಇಲ್ಲದೆ ಹೇಗೆ ಬದುಕಿದರೆ ಆಯಿತು ಎಂಬ ಆಸಡ್ಡೆ ಭಾವನೆಯಲ್ಲಿ ಮುಳುಗಿದ್ದಾರೆ.
ಮೈಸೂರಿನಲ್ಲಿ ಯುವಶಕ್ತಿ ಎಷ್ಟಿದೆ?, ಇಲ್ಲಿ ತರಬೇತಿಗೆ ಬಂದಿರುವವರು ಎಷ್ಟು?. ಪ್ರಪಂಚದಲ್ಲೇ ಭಾರತದ ಅತಿ ಹೆಚ್ಚು ಯುವ ಸಮುದಾಯವನ್ನು ಹೊಂದಿರುವ ದೇಶ ಎಂದು ಹೇಳಲಾಗುತ್ತದೆ. ಆದರೆ, ಯುವ ಸಮುದಾಯದಲ್ಲಿ ಎಷ್ಟು ಮಾನವ ಸಂಪನ್ಮೂಲ ಸದ್ಬಳಕೆಯಾಗುತ್ತಿದೆ ಎಂಬುದನ್ನು ಮನ ಗಾಣಬೇಕಿದೆ ಎಂದರು.
ಯುವಕರಿಗೆ ಸರಿ ಮಾರ್ಗ ತೋರಿಸುವವರು ಕಡಿಮೆ ಇರುವ ಸಂದರ್ಭದಲ್ಲಿ ಜೈನಹಳ್ಳಿ ಸತ್ಯನಾರಾಯಣ ಗೌಡರಂತವರು ಯುವಕರಿಗೆ ತರಬೇತಿ ಶಿಬಿರ ಏರ್ಪಡಿಸಿ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ಜೈನಹಳ್ಳಿ ಸತ್ಯನಾರಾಯಣ ಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.