ನಡುಗಡ್ಡೆಯಂತಾದ ಬರದ್ವಾಡದಲ್ಲಿ ಸಾಂಕ್ರಮಿಕ ರೋಗ ಭೀತಿ
Team Udayavani, Aug 13, 2019, 9:34 AM IST
ಹುಬ್ಬಳ್ಳಿ: ಸಾಂಕ್ರಾಮಿಕ ರೋಗಗಳ ಭೀತಿ ಹುಟ್ಟಿಸಿದ ತಿಪ್ಪೆಗುಂಡಿಯಲ್ಲಿ ನಿಂತಿರುವ ಮಳೆ ನೀರು.
ಹುಬ್ಬಳ್ಳಿ: ಪ್ರವಾಹದಿಂದ ನಡುಗಡ್ಡೆಯಂತಾಗಿದ್ದ ಬರದ್ವಾಡ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದ್ದು, ತುರ್ತು ಸಂದರ್ಭದಲ್ಲಿ ಗ್ರಾಮದಿಂದ ಹೊರಗಡೆ ಹೋಗಲು ಸಂಪರ್ಕ ರಸ್ತೆಯೂ ಇಲ್ಲದಂತಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಮಳೆರಾಯನ ಅರ್ಭಟಕ್ಕೆ ಎಲ್ಲವೂ ನೀರು ಪಾಲಾಗಿವೆ.
ಪ್ರತ್ಯೇಕ ಗ್ರಾಪಂಗೆ ಒತ್ತಾಯಿಸಿ ಹೋರಾಟ ಕೈಗೊಂಡು ಗ್ರಾಪಂ ಅನುದಾನವನ್ನೇ ಧಿಕ್ಕರಿಸಿರುವ ಕುಂದಗೊಳ ತಾಲೂಕಿನ ಗ್ರಾಮದಲ್ಲಿ ಪ್ರಮುಖವಾಗಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಪಂ ಮೂಲಕ ಬರುವ ಯೋಜನೆ ಸೇರಿದಂತೆ ಇತರೆ ಯಾವುದೇ ಅನುದಾನ ಬಳಕೆಗೆ ಅಸಹಕಾರ ತೋರಿದ್ದಾರೆ. ಇದೀಗ ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಪ್ರಮುಖ ರಸ್ತೆಯಿಂದ ಹಿಡಿದು, ಓಣಿಯ ರಸ್ತೆಗಳು ಕೆಸರುಗದ್ದೆಯಂತಾಗಿದೆ. ಕಣ್ಣು ಹಾಯಿಸಿದಲ್ಲೆಲ್ಲ ನೀರು ನಿಂತಿದೆ. ಪರಿಣಾಮ ಸಾಂಕ್ರಾಮಿಕ ರೋಗಗಳ ಭೀತಿ ಗ್ರಾಮಸ್ಥರನ್ನು ಆವರಿಸಿದ್ದು, ಬಡವನ ಸಿಟ್ಟು ದವಡೆಗೆ ಮೂಲ ಎಂಬಂತಾಗಿದೆ ಇಲ್ಲಿನ ಜನರ ಪರಿಸ್ಥಿತಿ.
ಇದ್ದೂ ಇಲ್ಲದ ಪರಿಸ್ಥಿತಿ: ಕುಡಿಯುವ ನೀರಿನ ಪೈಪ್‌ಗ್ಳು ದೊಡ್ಡಹಳ್ಳದ ಪಾಲಾಗಿವೆ. ಇದರಿಂದ ಗ್ರಾಮದ ಜನರು ಕುಡಿಯುವ ನೀರಿಗೂ ಸಮಸ್ಯೆ ಅನುಭವಿಸುವಂತಾಗಿದೆ. 2 ಕಿಮೀ ದೂರದಿಂದ ಕುಡಿಯುವ ನೀರು ಹೊತ್ತು ತರುವಂತಾಗಿದೆ. ಸಂಪರ್ಕ ರಸ್ತೆ ಇಲ್ಲದ ಪರಿಣಾಮ ಆಸ್ಪತ್ರೆಗೆ ಹೋಗುವುದು ಕಷ್ಟವಾಗಿದೆ. ಶಾಲೆ ಶಿಕ್ಷಕರು, ಬ್ಯಾಂಕ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಈ ಗ್ರಾಮಕ್ಕೆ ಬರುವುದಾದರೂ ಹೇಗೆ ಎನ್ನುವಂತಾಗಿದೆ. ನೆರೆ ಸಂದರ್ಭದಲ್ಲಿ ಸಿಬ್ಬಂದಿಯನ್ನು ಗ್ರಾಮಸ್ಥರೇ ಹಳ್ಳ ದಾಟಿಸಿದ್ದಾರೆ. ಇಲ್ಲಿನ ಪರಿಸ್ಥಿತಿ ಕಂಡು ಗ್ರಾಮಕ್ಕೆ ಯಾರೂ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಗ್ರಾಮದ ನಿವಾಸಿ ರವಿಕುಮಾರ.
ಎಂಟು ತಿಂಗಳ ಹಿಂದೆ ಸೇತುವೆ ನಿರ್ಮಾಣಕ್ಕೆ ಪೂಜೆ ಮಾಡಲಾಗಿದೆ. ಶೇ.10 ಕಾಮಗಾರಿ ಮುಗಿದಿಲ್ಲ. ನಿರ್ಮಾಣ ಕಾರ್ಯ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರು ಸಮಸ್ಯೆ ಅನುಭವಿಸುವಂತಾಗಿದೆ. ಎರಡೂ ಭಾಗದಲ್ಲೂ ಸಂಪರ್ಕ ರಸ್ತೆ ಇಲ್ಲದೆ ಜನರು ಬದುಕುವಂತಾಗಿದೆ. ಕನಿಷ್ಠಪಕ್ಷ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿಲ್ಲ.•ಫಕೀರಪ್ಪ ಮಾಡಳ್ಳಿ, ಗ್ರಾಮಸ್ಥ
•ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.