ಪುನರ್ವಸತಿಯೇ ದೊಡ್ಡ ಸವಾಲು; ಶಾಶ್ವತ ನೆಲೆ ಒದಗಿಸಿ


Team Udayavani, Aug 14, 2019, 5:11 AM IST

s-27

ರಾಜ್ಯದ 17 ಜಿಲ್ಲೆಗಳ 86 ತಾಲೂಕುಗಳಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹದಿಂದ 2217 ಗ್ರಾಮಗಳು ಮುಳುಗಡೆಯಾಗಿ 41,915 ಮನೆಗಳು ಕುಸಿದಿವೆ. ಇದೀಗ ರಾಜ್ಯ ಸರ್ಕಾರಕ್ಕೆ ಪುನರ್ವಸತಿ ದೊಡ್ಡ ಸವಾಲಾಗಿದೆ.

ತಕ್ಷಣಕ್ಕೆ 1224 ಆಶ್ರಯ ಕೇಂದ್ರ ತೆರೆದು 3,94,486 ಜನರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡಲಾಗಿದೆಯಾದರೂ ಅವರಿಗೆ ಶಾಶ್ವತ ನೆಲೆ ಒದಗಿಸಿ ತಲೆ ಮೇಲೆ ಸೂರು ಕಲ್ಪಿಸಬೇಕಾಗಿದೆ.

ಕಳೆದ ವರ್ಷ ಕೊಡಗಿನಲ್ಲಿ ನಡೆದ ಭೂ ಕುಸಿತದಿಂದ ಮನೆ ಕಳೆದು ಕೊಂಡವರಿಗೆ 800 ಮನೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತಾದರೂ ಇನ್ನೂ ಪೂರ್ಣಗೊಂಡಿಲ್ಲ. ಮಾದರಿ ಮನೆ ನಿರ್ಮಾಣ ಮಾಡಿ ತೋರಿಸಿ ಒಂದು ವರ್ಷ ಅವಧಿಯಲ್ಲಿ ಶಾಶ್ವತ ಮನೆ ನಿರ್ಮಿಸಿಕೊಡುವುದಾಗಿ ಹೇಳಲಾಗಿತ್ತು. ಪ್ರತಿ ಮನೆಯ ವೆಚ್ಚ ಹತ್ತು ಲಕ್ಷ ರೂ. ಎಂದು ತಿಳಿಸಲಾಗಿತ್ತು. ಆದರೆ, ಇದುವರೆಗೂ ಪೂರ್ಣಗೊಂಡಿಲ್ಲ.

ಹೀಗಾಗಿ, ಇದೀಗ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾದ ಪ್ರಯತ್ನ ನಡೆಸಬೇಕಾಗಿದೆ. ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಿಳಿಸಿದ್ದಾರಾದರೂ ಅಷ್ಟು ಸುಲಭಕ್ಕೆ ಮನೆ ನಿರ್ಮಾಣವಾಗುವುದಿಲ್ಲ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳನ್ನು ಕ್ರೋಡೀಕರಿಸಿ ಅನುದಾನ ಒಟ್ಟುಗೂಡಿಸಿ ದಕ್ಷ ಹಾಗೂ ಕ್ರಿಯಾಶೀಲ ಅಧಿಕಾರಿಗಳ ತಂಡ ರಚಿಸಿ ವಸತಿ ವ್ಯವಸ್ಥೆ ಕಲ್ಪಿಸುವ ಹೊಣೆಗಾರಿಕೆ ನೀಡಬೇಕಾಗಿದೆ. ವಸತಿ ಕಾಮಗಾರಿಗೆ ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ ಪಡೆದು ತ್ವರಿತಗತಿಯಲ್ಲಿ ಮನೆ ನಿರ್ಮಿಸಿಕೊಡಬೇಕು. ಅದಕ್ಕಾಗಿ ವಿಶೇಷ ಯೋಜನೆ ರೂಪಿಸಬೇಕಾಗಿದೆ. 2217 ಗ್ರಾಮಗಳಲ್ಲಿ ಕಂದಾಯ, ವಸತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿ ಮನೆ ನಿರ್ಮಿಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕಾಗಿದೆ.

ಕೊಡಗು ವಿಚಾರದಲ್ಲಿ ಬದಲಿ ಸ್ಥಳದಲ್ಲಿ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಆದರೆ, ಇದೀಗ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸ್ಥಳೀಯರು ಹೊಲ, ಗದ್ದೆ, ತೋಟ ಹೊಂದಿರುವುದರಿಂದ ಆಯಾ ಗ್ರಾಮಗಳಲ್ಲೇ ಮನೆಗಳ ನಿರ್ಮಾಣ ಆಗಬೇಕಾಗಿದೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಿನ ಕೆಲಸವೂ ಹೌದು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ ಸಂಪುಟ ವಿಸ್ತರಣೆಗೆ ಪ್ರವಾಹ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆವರು ಒಬ್ಬರೇ ಸ್ಥಳೀಯ ಶಾಸಕರು, ಸಂಸದರು, ಅಧಿಕಾರಿಗಳ ಜತೆಗೂಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಬಗ್ಗೆ ನಿಗಾ ವಹಿಸಿದ್ದಾರೆ. ನಿರಾಶ್ರಿತರಿಗೆ ತಾತ್ಕಾಲಿಕವಾಗಿ 1224 ಆಶ್ರಯ ಕೇಂದ್ರಗಳಲ್ಲಿ ವ್ಯವಸ್ಥೆಯನ್ನೂ ಮಾಡುವಲ್ಲಿ ಮುತುವರ್ಜಿ ವಹಿಸಿದ್ದಾರೆ.

ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ನೀಡಿ ನೀವೇ ಮನೆ ನಿರ್ಮಿಸಿಕೊಳ್ಳಿ ಎಂದರೆ ಈ ಸಂದರ್ಭದಲ್ಲಿ ಕಷ್ಟವಾಗಬಹುದು. ಜತೆಗೆ, ಸರ್ಕಾರದ ವತಿಯಿಂದ ನೀಡುವ ಹಣ ಫ‌ಲಾನುಭವಿಗೆ ತಲುಪುವಲ್ಲಿ ವ್ಯತ್ಯಾಸಗಳೂ ಆಗುವ ಸಾಧ್ಯತೆಯಿದೆ. ಹೀಗಾಗಿ, ಮುಖ್ಯಮಂತ್ರಿಯವರೇ ಖುದ್ದಾಗಿ ಈ ಬಗ್ಗೆ ಕಾಳಜಿ ವಹಿಸಿ ವಸತಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುದಾನದಡಿ ಪಕ್ಕಾ ಮನೆ ನಿರ್ಮಿಸಿಕೊಡುವ ಬಗ್ಗೆ ಕ್ರಮ ಕೈಗೊಂಡರೆ ಸೂಕ್ತವಾಗಬಹುದು.

ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಿಳಿಸಿದ್ದಾರಾದರೂ ಅಷ್ಟು ಸುಲಭಕ್ಕೆ ಮನೆ ನಿರ್ಮಾಣವಾಗುವುದಿಲ್ಲ.

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.