ಅತೃಪ್ತರ ಒಪ್ಪಲು ಬಿಜೆಪಿಗರ ಹಿಂದೇಟು
17 ಕ್ಷೇತ್ರಗಳಲ್ಲಿ ಈಗ ಗೊಂದಲದ ಸ್ಥಿತಿ
Team Udayavani, Aug 14, 2019, 6:00 AM IST
ಬೆಂಗಳೂರು : ಅನರ್ಹಗೊಂಡಿರುವ ಶಾಸಕರು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಗುರುತಿಸಿಕೊಳ್ಳಲಾಗದೆ ಪೀಕಲಾಟಕ್ಕೆ ಸಿಲುಕಿರುವುದು ಒಂದೆಡೆಯಾದರೆ, ಕೆಲವು ಕ್ಷೇತ್ರದಲ್ಲಿ ಅನರ್ಹಗೊಂಡಿರುವ ಶಾಸಕರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ.
ಮೈತ್ರಿ ಸರ್ಕಾರ ವಿರುದ್ಧವಾಗಿ ಬಂಡಾಯ ಎದ್ದಿದ್ದ 17 ಶಾಸಕರಲ್ಲಿ ಬಹುತೇಕರಿಗೆ ಬಿಜೆಪಿ ಸೇರುವ ಹಂಬಲ ಇದೆ ಮತ್ತು ಅದನ್ನು ಆಪ್ತರ ಬಳಿಯಲ್ಲೂ ಹೇಳಿಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಒಂದೆರೆಡು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. ಆದರೆ, ಕ್ಷೇತ್ರದಲ್ಲಿ ಪರಿಸ್ಥಿತಿ ಭಿನ್ನವಾಗಿದೆ.
ಅತೃಪ್ತ ಶಾಸಕರನ್ನು ಒಪ್ಪಿಕೊಳ್ಳಲು ಬಿಜೆಪಿ ಕಾರ್ಯಕರ್ತರು ಹಿಂದೇಟು ಹಾಕುತ್ತಿದ್ದಾರೆ ಮತ್ತು ಇದನ್ನು ಪಕ್ಷದ ಪ್ರಮುಖರಲ್ಲಿಯೂ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅನರ್ಹಗೊಂಡಿರುವ ಎಲ್ಲ ಶಾಸಕರು ತಮ್ಮ ಕ್ಷೇತ್ರದಲ್ಲೇ ಇದ್ದಾರೆ. ಆ ಪೈಕಿ ಉತ್ತರ ಕರ್ನಾಟಕದ ಹಲವು ಭಾಗದಲ್ಲಿ ಪ್ರವಾಹ ಬಂದಿದ್ದರಿಂದ ಅಲ್ಲಿನವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ತುರ್ತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಬೆಂಗಳೂರು, ಮೈಸೂರು ಭಾಗದ ಶಾಸಕರು ತಮ್ಮ ಬೆಂಬಲಿಗರು ಹಾಗೂ ಆಪ್ತರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ. ಬೆಂಗಳೂರು ಮಹಾನಗರ ವ್ಯಾಪ್ತಿಯ ಐದು ಕ್ಷೇತ್ರಗಳ ಅನರ್ಹ ಶಾಸಕರಲ್ಲಿ ಕೆಲವರು ಬಿಜೆಪಿಯ ಜತೆ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಆರಂಭಿಸಿದ್ದಾರೆ. ಆದರೆ, ಬಿಜೆಪಿ ಕಾರ್ಯಕರ್ತರು ಇದನ್ನು ಒಪ್ಪಿಕೊಳ್ಳುತ್ತಿಲ್ಲ ಮತ್ತು ಅಂತರ ಕಾಯ್ದುಕೊಳ್ಳುತ್ತಿದ್ದಾರೆ.
ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಬಿಜೆಪಿಯ ರಾಜ್ಯ ಮುಖಂಡರು ಯಾರೂ ಕೂಡ ಅಧಿಕೃತವಾದ ಆಹ್ವಾನ ನೀಡಿಲ್ಲ ಹಾಗೂ ಅತೃಪ್ತ ಶಾಸಕರು ಕೂಡ ಎಲ್ಲಿಯೂ ಬಿಜೆಪಿಗೆ ಸೇರಿಕೊಳ್ಳುತ್ತೇವೆ ಎಂಬುದನ್ನು ಸಾರ್ವಜನಿಕವಾಗಿ ಹೇಳಿಲ್ಲ. ಬಿಜೆಪಿಯ ಕೆಲವು ಮುಖಂಡರಿಗೆ ಅತೃಪ್ತ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಇರಾದೆಯಿದೆ. ಅದರೆ, ಅದನ್ನು ಬಹಿರಂಗವಾಗಿ ಹೇಳಿಕೊಳ್ಳುವಂತಿಲ್ಲ.
ಬಿಜೆಪಿ ಈಗ ಅಧಿಕಾರದಲ್ಲಿ ಇರುವುದರಿಂದ ಸರ್ಕಾರಕ್ಕೆ ನೇರ ಹೊಡೆತ ಬೀಳುವ ಎಚ್ಚರಿಕೆಯೂ ಇರುವುದರಿಂದ ಯಾವುದನ್ನು ಎಲ್ಲಿಯೂ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ಕೆಲವು ಮುಖಂಡರು ಇದ್ದಾರೆ ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಹೇಳುತ್ತಾರೆ.
ಅನರ್ಹಗೊಂಡಿರುವ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜತೆಗೆ ತಮ್ಮ ಬೆಂಬಲಿಗರಿಗೆ ಮುಂದಿನ ನಡೆ ಏನು ಎಂಬುದನ್ನು ಸೂಕ್ಷ್ಮವಾಗಿ ತಿಳಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ ಜತೆಗೆ ಹೋಗುವ ಬಗ್ಗೆಯೂ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾರ್ಯಕರ್ತರ ನಡುವೆ ಸಾಕಷ್ಟು ವಾಗ್ವಾದ ಆಗಿದ್ದರಿಂದ ಈಗ ಏಕಾಏಕಿ ಒಪ್ಪಿಕೊಳ್ಳಲು ಬಿಜೆಪಿ ಕಾರ್ಯಕರ್ತರು ಕೂಡ ಹಿಂದೇಟು ಹಾಕುತ್ತಿದ್ದಾರೆ. ಹಾಗೆಯೆ ಅತೃಪ್ತ ಶಾಸಕರ ಬೆಂಬಲಿಗರು ಕೂಡ ಬಿಜೆಪಿ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕವಾಗಿ ಬೆರೆಯಲು ಒಪ್ಪುತ್ತಿಲ್ಲ ಎಂದು ತಿಳಿದುಬಂದಿದೆ.
ಶಾಸಕರ ವಿರುದ್ಧವೇ ಪ್ರಕರಣವನ್ನು ದಾಖಲಿಸಿ, ಕೋರ್ಟು, ಕಚೇರಿಗೂ ಅಲೆದಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ಏಕಾಏಕಿ ಅವರು ನಮ್ಮ ಪಕ್ಷಕ್ಕೆ ಬಂದರೆ ಹೇಗೆ ತತ್ವ ಸಿದ್ಧಾಂತ ಬಿಟ್ಟು ಅವರನ್ನು ಒಪ್ಪಿಕೊಳ್ಳಲು ಸಾಧ್ಯ ಎಂದು ಬೆಂಗಳೂರಿನ ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸುತ್ತಾರೆ.
ಜಿ.ಟಿ.ದೇವೇಗೌಡರಿಗೆ ಬಿಜೆಪಿಯಿಂದ ಗಾಳ?
ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ನಂತರ ಜೆಡಿಎಸ್‌ನ ಮೈಸೂರು ಭಾಗದ ಮತ್ತೂಬ್ಬ ಪ್ರಭಾವಿ ಮುಖಂಡ ಜಿ.ಟಿ.ದೇವೇಗೌಡರ ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಮೈಸೂರು ಭಾಗದಲ್ಲಿ ರಾಜಕೀಯವಾಗಿ ನೆಲೆ ಕಲ್ಪಿಸಲು ಬಿ.ಎಸ್.ಯಡಿಯೂರಪ್ಪ ರೂಪಿಸಿರುವ ಕಾರ್ಯತಂತ್ರವಿದು ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಎಚ್.ವಿಶ್ವನಾಥ್, ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸಪ್ರಸಾದ್ ಅವರ ಬೆಂಬಲ ಇದ್ದರೆ ಮೈಸೂರು-ಚಾಮರಾಜನಗರ -ಮಂಡ್ಯ ಭಾಗದ ಕ್ಷೇತ್ರವೊಂದರಿಂದ ಪುತ್ರ ವಿಜಯೇಂದ್ರ ಅವರನ್ನು ವಿಧಾನಸಭೆ ಚುನಾವಣೆಗೆ ನಿಲ್ಲಿಸಿ ಆಯ್ಕೆ ಮಾಡುವುದು, ಆ ಭಾಗದ ನಾಯಕತ್ವ ವಹಿಸುವುದು ಯಡಿಯೂರಪ್ಪ ಅವರ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ 12 ಹಾಗೂ ಜೆಡಿಎಸ್‌ನ ಇನ್ನೂ ಐವರು ಶಾಸಕರು ಬಿಜೆಪಿಗೆ ಬರಲು ಸಿದ್ಧವಾಗಿದ್ದಾರೆ. ಆದರೆ, ಬಿಜೆಪಿ ನಾಯಕರೇ ತಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.
● ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.