ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ನಿಖೀಲ್

•ಜೆಡಿಎಸ್‌ ಯುವ ಘಟಕದಿಂದ ಸಂತ್ರಸ್ತರಿಗೆ ನೆರವು•ಸಂತ್ರಸ್ತರ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸಲಿ

Team Udayavani, Aug 14, 2019, 9:53 AM IST

bk-tdy-1

ಗುಳೇದಗುಡ್ಡ: ಪ್ರವಾಹ ಪೀಡಿತ ಸ್ಥಳಗಳಿಗೆ ನಿಖೀಲ ಕುಮಾರಸ್ವಾಮಿ ಭೇಟಿ ನೀಡಿ ಮಾತನಾಡಿದರು.

ಗುಳೇದಗುಡ್ಡ: ಪ್ರವಾಹದಿಂದ ಉತ್ತರ ಕರ್ನಾಟಕದಲ್ಲಿ ಊಹಿಸಲು ಸಾಧ್ಯವಾಗಷ್ಟು ನಷ್ಟ ಸಂಭವಿಸಿದೆ. ರೈತರು ಪ್ರವಾಹದಿಂದ ಕಂಗಾಲಾಗಿದ್ದಾರೆ. ಸಾಕಷ್ಟು ಸಾವು ನೋವು ಸಂಭವಿಸಿದೆ. ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಒತ್ತಾಯಿಸಿದರು.

ತಾಲೂಕಿನ ಬಿ.ಎನ್‌.ಜಾಲಿಹಾಳ, ಬಾಚನಗುಡ್ಡ, ಪಟ್ಟದಕಲ್ಲ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಮನೆ, ಹೊಲಗಳಲ್ಲಿ ನೀರು ನುಗ್ಗಿ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದರು.

ಜೆಡಿಎಸ್‌ ಯುವ ಘಟಕದಿಂದ ಸುಮಾರು 5 ಟ್ರಕ್‌ಗಳಲ್ಲಿ ವಿವಿಧ ಸಾಮಗ್ರಿಗಳನ್ನು ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ ಸಂತ್ರಸ್ತರ ನೆರವಿಗೆ ಬರಬೇಕು. ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಉತ್ತರ ಕನಾಟಕದ ಜತೆಗಿದ್ದೇವೆ. ಸಂತ್ರಸ್ತರ ನೋವಿಗೆ ಸದಾ ಸ್ಪಂದಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎನ್‌.ಎಚ್.ಕೋನರೆಡ್ಡಿ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ, ಶರಣಗೌಡ ಕಂದಕೂರ, ಚಂದ್ರಕಾಂತ ಶೇಖಾ, ಮಹೇಶ ಬಿಜಾಪುರ, ಅನ್ವರಖಾನ ಪಠಾಣ, ಟಿ.ಎಸ್‌. ಬೆನಕಟ್ಟಿ, ಉಮೇಶ ಹುನಗುಂದ, ಸಂತೋಷ ನಾಯನೇಗಲಿ, ರಾಘು ಬಳಿಗೇರ, ಸಚಿನ ರಾಂಪುರ ಇದ್ದರು.

ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ನೀಡಿ: ನಿಖೀಲ್
ನೆರೆಪೀಡಿತ ಕಿತ್ತಲಿ ಗ್ರಾಮಕ್ಕೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಭೇಟಿ ಸಂತ್ರಸ್ತರ ಸಮಸ್ಯೆ ಆಲಿಸಿದರು. ಗ್ರಾಮದೊಳಗೆ ಹೋಗಿ ಗ್ರಾಮಸ್ಥರನ್ನು ಮಾತನಾಡಿಸಿ, ಪ್ರವಾಹಕ್ಕೆ ಕುಸಿದು ಬಿದ್ದ ಮನೆಗಳನ್ನು ವೀಕ್ಷಿಸಿದರು. ಕಾಲು ಜಾರಿ ಬೀಳುತ್ತಿದ್ದರೂ ಅದನ್ನು ಲೆಕ್ಕಿಸದೇ ಬರಿಗಾಲಲ್ಲಿ ವೀಕ್ಷಣೆ ಮಾಡಿದರಲ್ಲದೇ, ಗ್ರಾಮದ ಹೊರಗೆ ಜೀವನ ದೂಡುತ್ತಿರುವ ಸಂತ್ರಸ್ತರ ಟೆಂಟ್‌ಗಳಿಗೆ ಭೇಟಿ ನೀಡಿ ಜನರ ನೋವಿಗೆ ಸ್ಪಂದಿಸಿದರು.

ಕಣ್ಣಿರು ಒರೆಸಿದ ನಿಖೀಲ್: ನಿಖೀಲ್ ಕುಮಾರಸ್ವಾಮಿ 1 ಗಂಟೆಗೂ ಹೆಚ್ಚು ಕಾಲ ಗ್ರಾಮದಲ್ಲಿ ಸಂಚರಿಸಿ ಸಮಸ್ಯೆ ಆಲಿಸಿದರು. ಬಳಿಕ ಮಾತನಾಡಿದ ಅವರು, ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿ ಕೈಲಾದಷ್ಟು ಸಹಾಯ ಮಾಡುವ ಉದ್ದೇಶದಿಂದ ನನ್ನ ತಂದೆಯ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದರು. ನಾನು ಯಾರನ್ನು ಟೀಕಿಸುವುದಿಲ್ಲ. ಇಂತ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಕೇಂದ್ರ-ರಾಜ್ಯ ಸರ್ಕಾರ ಪಕ್ಷಭೇದ ಮರೆತು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು. ಪಕ್ಷದ ಮುಖಂಡ ಹನಮಂತ ಮಾವಿನಮರದ, ಮಾಜಿ ಶಾಸಕ ಎನ್‌.ಎಚ್. ಕೋನರೆಡ್ಡಿ, ಶರಣಗೌಡ ಕಂದಕೂರ, ಮಹೇಶ ಬಿಜಾಪುರ, ಟಿ.ಎಸ್‌. ಬೆನಕಟ್ಟಿ, ರಾಘು ಬಳಿಗೇರ, ನಾಗರಾಜ ಮುದಿಯಪ್ಪನವರ, ಅನ್ವರಖಾನ್‌ ಪಠಾಣ, ಸಂತೋಷ ನಾಯನೇಗಲಿ ಇದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.