ಅನುದಾನ ದುರ್ಬಳಕೆ ಆರೋಪ
ತಾಪಂ ಕಚೇರಿ ಎದುರು ಕೆಆರ್‌ಡಿಎಸ್‌ಎಸ್ ಕಾರ್ಯಕರ್ತರ ಧರಣಿ
Team Udayavani, Aug 14, 2019, 11:52 AM IST
ಶಹಾಪುರ: ತಾಲೂಕು ಪಂಚಾಯಿತಿ ಕಚೇರಿ ಎದುರು ಕೆಆರ್‌ಡಿಎಸ್‌ಎಸ್ ಕಾರ್ಯಕರ್ತರು ಧರಣಿ ನಡೆಸಿ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು.
ಶಹಾಪುರ: ತಾಲೂಕಿನ ಹಲವಾರು ಗ್ರಾಮಗಳಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು 14ನೇ ಹಣಕಾಸು ಯೋಜನೆ ಅನುದಾನ ಸದ್ಬಳಕೆ ಮಾಡಿಕೊಳ್ಳದೆ ಅಕ್ರಮವಾಗಿ ಬಳಸಿಕೊಂಡಿದ್ದು, ಕೂಡಲೇ ತನಿಖೆ ನಡಸಬೇಕೆಂದು ಆಗ್ರಹಿಸಿ ಇಲ್ಲಿನ ಕೆಆರ್‌ಡಿಎಸ್‌ಎಸ್ ಕಾರ್ಯಕರ್ತರು ತಾಪಂ ಕಚೇರಿ ಮುಂದೆ ಧರಣಿ ಕೈಗೊಂಡು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶಿವಪುತ್ರ ಜವಳಿ, ತಾಲೂಕಿನ ಮದ್ರಿಕಿ, ಕಾಡಂಗೇರಾ, ಗುಲಸರಂ, ಖಾನಾಪುರ, ತಡಿಬಿಡಿ, ಉಕ್ಕಿನಾಳ, ಗೋಗಿ ಪೇಟ ಗ್ರಾಮಗಳಲ್ಲಿ 14ನೇ ಹಣಕಾಸು ಯೊಜನೆಯಡಿ ಬರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಯಾ ಗ್ರಾಪಂ ಅಧ್ಯಕ್ಷರು ಜನಪ್ರತಿನಿಧಿಗಳು ಶಾಮೀಲಾಗಿ ಅನುದಾನವನ್ನು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಗೋಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಬಹುತೇಕ ಗ್ರಾಪಂ ಪ್ರಭಾರಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಕೊಟ್ಟಿ ದಾಖಲಾತಿಗಳನ್ನು ಸೃಷ್ಟಿಸಿ ಲಕ್ಷಾಂತರ ಅನುದಾನ ಅಕ್ರಮವಾಗಿ ಬಳಸಿಕೊಂಡಿದ್ದಾರೆ. ಈ ಕುರಿತು ಕೂಡಲೇ ಸಮಗ್ರ ತನಿಖೆ ಕೈಗೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
2018-19ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆಗೊಂಡ ಗ್ರಾಮಗಳಲ್ಲಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸಿರುವುದಿಲ್ಲ. ಕಳಪೆ ಮಟ್ಟದಿಂದ ಕಾಮಗಾರಿ ನಡೆದಿವೆ ಎಂದು ಆರೋಪಿಸಿದರು.
ಅಲ್ಲದೆ ದಲಿತರ ಕೇರಿಯಲ್ಲಿ ಚರಂಡಿ ಹುಳೆತ್ತಲು ಸಹ ಗ್ರಾಪಂ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. ಕೂಡಲೇ ಸಮರ್ಪಕ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.
ಬಾಲರಾಜ ಖಾನಾಪುರ, ಸಂತೋಷ ನಾಟೇಕಾರ, ಮಲ್ಲಿಕಾರ್ಜುನ ಹುರಸಗುಂಡಗಿ, ಮರೆಪ್ಪ ಕುದರಿ, ಯಲ್ಲಾಲಿಂಗ ಹೊಸಮನಿ, ಶರಣಪ್ಪ ಕೋಟೆ, ಹಣಮಂತ ರೋಜಾ, ಶಿವಲಿಂಗ ಹಸನಾಪುರ ಸೇರಿದಂತೆ ದಸಂಸ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.