2.70 ಕೋಟಿ ರೂ. ಪರಿಹಾರ ಬಿಡುಗಡೆ
•ಗದಗ ವಿಧಾನಸಭಾ ಕ್ಷೇತ್ರದಲ್ಲಿ 769 ಮನೆಗಳಿಗೆ ಹಾನಿ •ಪರಿಹಾರ ವಿತರಿಸಲು ಅಧಿಕಾರಿಗಳಿಗೆ ನಿರ್ದೇಶನ
Team Udayavani, Aug 14, 2019, 12:54 PM IST
ಗದಗ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಗದಗ ವಿಧಾನಸಭಾ ಮತಕ್ಷೇತ್ರದ 769 ಮನೆಗಳು ಹಾನಿಗೊಳಗಾಗಿವೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗದಗ-ಬೆಟಗೇರಿ ಅವಳಿ ನಗರದಲ್ಲಿಯೂ 15-18 ಮನೆಗಳಿಗೆ ಹಾನಿಯಾಗಿದೆ. ಈಗಾಗಲೇ ಸೊರಟೂರ, ಹಂಗನಕಟ್ಟಿ, ಮುಳಗುಂದ, ಚಿಂಚಲಿ, ನೀಲಗುಂದ, ಕುರ್ತಕೋಟಿ, ಹೊಸಳ್ಳಿ ಸೇರಿ ವಿವಿಧೆಡೆ ತೆರಳಿ ಹಾನಿ ವೀಕ್ಷಣೆ ಮಾಡಲಾಗಿದೆ. ಕೆಲವೆಡೆ ಭಾಗಶಃ, ಮತ್ತೆ ಕೆಲವೆಡೆ ಅರ್ಧ ಮತ್ತು ಕೆಲವು ಸಂಪೂರ್ಣ ಮನೆಗಳು ಬಿದ್ದಿವೆ. ಸೊರಟೂರು, ಹಂಗನಕಟ್ಟಿಯಲ್ಲಿ ಎರಡು ಆಕಳು, ಒಂದು ಎತ್ತು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಮಾಹಿತಿ ನೀಡಿದರು.
2.70 ಕೋಟಿ ರೂ. ಪರಿಹಾರ ಬಿಡುಗಡೆ: ಗದಗ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಮನೆಗಳಿಗೆ 2.70 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಹಾನಿಗೊಳಗಾದ 769 ಮನೆಗಳ ಪೈಕಿ 577 ಮನೆಗಳಿಗೆ 89,77,540 ರೂ. ಪರಿಹಾರವನ್ನು ಫಲಾನುಭವಿಗಳ ಖಾತೆಗೆ ಆರ್‌ಟಿಜಿಎಸ್ ಮೂಲಕ ಬಿಡುಗಡೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮಳೆಗೆ ಹಾನಿಯಾದ ಮನೆಗಳ ಸಮೀಕ್ಷೆ ಮಾಡಲಾಗುತ್ತಿದೆ. ಶೇ. 15ರಷ್ಟು ಹಾನಿಯದ ಮನೆಗಳಿಗೆ ಕನಿಷ್ಠ 5,800 ರೂ. ಹಾಗೂ ಶೇ. 75ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 95,000 ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.ಗದಗ ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ಧು ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ, ಪ್ರಭು ಬುರಬುರೆ, ತಾ.ಪಂ. ಸದಸ್ಯ ವಿದ್ಯಾಧರ ದೊಡ್ಡಮನಿ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ತಾಪಂ ಇಒ ಡಾ| ಎಚ್.ಎಸ್. ಜನಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.