10 ಕೋಟಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಗ್ರಾಮಗಳಿಗೆ ನಾಮಕರಣ :ಬಿಎಸ್ ವೈ
Team Udayavani, Aug 14, 2019, 8:43 PM IST
ಬೆಂಗಳೂರು; ನೆರೆ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ನಿಂತು ಉದಾತ್ತವಾಗಿ ದೇಣಿಗೆ ನೀಡುವಂತೆ ಇದೇ ವೇಳೆ ಮನವಿ ಮಾಡಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ಉದ್ದಿಮೆದಾರರನ್ನು ಆಹ್ವಾನಿಸಿ ನೆರೆ ಪೀಡಿತ ಪ್ರದೇಶಗಳಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದರು. ಸರಕಾರದ ಕರೆಗೆ ಮನ್ನಣೆ ನೀಡಿ 60ಕ್ಕೂ ಹೆಚ್ಚು ಕಂಪನಿ ಮುಖ್ಯಸ್ಥರು ಆಗಮಿಸಿ ನೆರವು ನೀಡುವ ಭರವಸೆ ನೀಡಿದರು.
ಸಭೆಯಲ್ಲಿ ಎಲ್ಲಾ ಉದ್ದಿಮೆದಾರರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಈ ಬಾರಿ ಅತೀವ ಮಳೆ ಮತ್ತು ಪ್ರವಾಹದಿಂದ ಜನ ತತ್ತರಿಸಿದ್ದಾರೆ. 23 ಜಿಲ್ಲೆಯ 103 ತಾಲೂಕು ನೆರೆ ಪೀಡಿತ ಎಂದು ಘೋಷಿಸಲಾಗಿದೆ.
ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಮಳೆಯಿಂದ ಭೂ ಕುಸಿತ ಸಂಬಂವಿಸಿದೆ. ಹಳ್ಳಿ, ಪಟ್ಟಣ ಜಲಾವೃತವಾಗಿದೆ. ಸೇತುವೆ ಮುಳುಗಿ, ರಸ್ತೆ ಹಾಳಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ವರೆಗೂ 6.97 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 1160 ಪರಿಹಾರ ಕೇಂದ್ರ ತೆರೆಯಲಾಗಿದೆ.
56 ಸಾವಿರ ಮನೆ ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಿಸಿದ್ದೇವೆ. ಅಧಿಕಾರಿಗಳು, ನಾನು ಪ್ರವಾಹ ಮಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿದ್ದೇವೆ. ರಕ್ಷಣೆ, ಪರಿಹಾರ ಕೆಲಸ ನಡೆಯುತ್ತಿದೆ. ಕಳೆದೆರಡು ದಿನದಿಂದ ಮಳೆ ಹತೋಟಿಗೆ ಬಂದಿದೆ. ಇನ್ನೂ ಸಂಪೂರ್ಣ ಚಿತ್ರಣ, ನಷ್ಟ ತಿಳಿಯಲು ಇನ್ನು ಕೆಲವು ದಿನ ಬೇಕಾಗಲಿದೆ.
23 ಜಿಲ್ಲೆಗಳ ಪೈಕಿ 200 ಗ್ರಾಮವನ್ನು ಸ್ಥಳಾಂತರಿಸುವ ಪರಿಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಉದ್ಯಮಿದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಿ.
10 ಕೋಟಿಗೂ ಹೆಚ್ಚು ನೆರವು ನೀಡಿದ ಗ್ರಾಮಕ್ಕೆ ನಿಮ್ಮ ಸಂಸ್ಥೆ ಹೆಸರನ್ನೇ ಇಡಲು ತೀರ್ಮಾನಿಸಿದ್ದೇವೆ. ಆ ಗ್ರಾಮವನ್ನು ಹಣ ನೀಡುವ ಸಂಸ್ಥೆ ದತ್ತು ಪಡೆದುಕೊಂಡಂತೆ ಬಿಂಬಿಸಲಾಗುವುದು ಎಂದು ಹೇಳಿದರು.
ಬಟ್ಟೆ, ಆಹಾರ ಧಾನ್ಯ ಇತರೆ ಮೂಲಸೌಕರ್ಯ ಒದಗಿಸಿಕೊಡುವ ಬದಲು ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರೆ ಸಂತ್ರಸ್ತರಿಗೆ ಹೆಚ್ಚು ನೆರವಾಗಲಿದೆ ಎಂದು ಹೇಳಿದರು.
ಎಲ್ಲಾ ಕೈಗಾರಿಕೋದ್ಯಮಿಗಳೊಂದಿಗೆ ನಮ್ಮ ಸರಕಾರ ಇದೆ. ನೀವು ಏನು ಸಹಕಾರ ಬಯಸುತ್ತೀರ ಅದನ್ನು ನಾವು ಕೊಡಲು ಸಿದ್ಧ.
ನಿಮ್ಮ ಸಂಸ್ಥೆ ಉದ್ಯಮ ನಡೆಸಲು ಬೇಕಾದ ಮೂಲಸೌಕರ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರಕಾರದಿಂದ ಯಾವುದೇ ಸಮಸ್ಯೆ ತೊಡಕು ಆಗುವುದಿಲ್ಲ. ಒಂದು ವೇಳೆ ಅನಗತ್ಯ ಸಮಸ್ಯೆ ಆಗುತ್ತಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಎಲ್ಲಾ ಸಂಸ್ಥೆಗಳ ಮುಖ್ಯಸ್ಥರಿಗೆ ಸಿಎಂ ಭರವಸೆ ನೀಡಿದರು.
ಇದೇವೇಳೆ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ , ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜಲ್ ಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.