ಹೊಸ ಪ್ರತಿಭೆಗಳ “ವಿಜಯರಥ’ ಯಾತ್ರೆ
ಆ.23 ರಿಲೀಸ್
Team Udayavani, Aug 15, 2019, 3:01 AM IST
ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸಿರುವ “ವಿಜಯರಥ’ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಬಿಡುಗಡೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿರುವ “ವಿಜಯರಥ’ ಇದೇ ಆಗಸ್ಟ್ 23ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ನವನಟ ವಸಂತ್ ಕಲ್ಯಾಣ್ “ವಿಜಯರಥ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.
ಚಿತ್ರದಲ್ಲಿ ವಸಂತ್ “ರಥ’ ಎನ್ನುವ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ಅರ್ಪಿತಾ ಗೌಡ ಮತ್ತು ಅರ್ಚನಾ ಜೋಯ್ಸ ನಾಯಕಿಯರಾಗಿ ಜೋಡಿಯಾಗಿದ್ದಾರೆ. ಉಳಿದಂತೆ ರಾಜೇಶ್ ನಟರಂಗ, ಮಂಜು ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ವರ್ಷ ಸೆಟ್ಟೇರಿದ್ದ “ವಿಜಯರಥ’ ಚಿತ್ರವನ್ನು ಮಧುಗಿರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ.
ಲವ್ ಕಂ ಸೆಂಟಿಮೆಂಟ್ ಕಥಾಹಂದರಹೊಂದಿರುವ ಈ ಚಿತ್ರವನ್ನು “ವೃಕ್ಷ ಕ್ರಿಯೇಷನ್ಸ್’ ಬ್ಯಾನರ್‌ನಲ್ಲಿ ರಮೇಶ್ ಆರ್.ಮಧುಗಿರಿ ನಿರ್ಮಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಅಜಯ್ ಸೂರ್ಯ. ಕೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ಈಗಾಗಲೇ ಚಿತ್ರದ ಪ್ರಮೋಶನ್ ಕೆಲಸಗಳನ್ನು ನಡೆಸುತ್ತಿದ್ದು,
ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಮತ್ತು ಟ್ರೇಲರ್‌ಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಾಗಾಗಿ ಇದೇ ತಿಂಗಳು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎನ್ನುವುದು ಚಿತ್ರತಂಡದ ಮಾತು. “ವಿಜಯ್ ಸಿನಿಮಾಸ್’ ಚಿತ್ರದ ಹಂಚಿಕೆಯನ್ನು ಪಡೆದುಕೊಂಡಿದ್ದು ಮುಂದಿನವಾರ ಚಿತ್ರ ಸುಮಾರು 40-50 ಕೇಂದ್ರಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.