ಬೈಂದೂರು ತಾಲೂಕು ಕೇಂದ್ರದಲ್ಲಿ ಪ್ರಥಮ ಸ್ವಾತಂತ್ರ್ಯೋತ್ಸವ ಆಚರಣೆಯ ಸಿದ್ಧತೆ
Team Udayavani, Aug 15, 2019, 5:18 AM IST
ಬೈಂದೂರು: ನೂತನ ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಬೈಂದೂರು ತಾಲೂಕು ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ.
ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಪ್ರಥಮ ಬಾರಿಗೆ ಧ್ವಜಾರೋಹಣ ನಡೆಯಲಿದೆ.
ರಾಜ್ಯದಲ್ಲಿ ನೆರೆ ಹಾವಳಿಯಿಂದ ಸಮಸ್ಯೆ ಇರುವ ಕಾರಣ ಸರಕಾರದ ಸುತ್ತೋಲೆಯಂತೆ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.
ವಿದ್ಯಾರ್ಥಿಗಳು, ಎನ್.ಸಿ.ಸಿ., ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಯಲಿದೆ. ಯಡ್ತರೆ ಗ್ರಾಮ ಪಂಚಾಯತ್ ವತಿಯಿಂದ ಹೊಸದಾಗಿ ಧ್ವಜಕಟ್ಟೆ ನಿರ್ಮಿಸಲಾಗಿದೆ. ಆ. 14ರಂದು ಬೆಳಗ್ಗೆ ವಿದ್ಯಾರ್ಥಿಗಳು ಪಥಸಂಚಲನದ ತಯಾರಿ ನಡೆಸಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಧ್ವಜಾರೋಹಣಗೈಯಲಿದ್ದಾರೆ. ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ನಡೆಯಲಿದೆ.ತಾಲೂಕು ಕೇಂದ್ರದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಹಶೀಲ್ದಾರ್‌ಬಿ.ಪಿ. ಪೂಜಾರ್ ತಿಳಿಸಿದ್ದಾರೆ.
ಕುಂದಾಪುರ: ಸ್ಯಾತಂತ್ರ್ಯ ಆಚರಣೆ
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ 73ನೇ ಸ್ವಾತಂತ್ರ್ಯ ಉತ್ಸವದ ಆಚರಣೆ ಆ.15ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಸಹಾಯಕ ಕಮಿಷನರ್ ಡಾ| ಎಸ್.ಎಸ್. ಮಧುಕೇಶ್ವರ್ ಧ್ವಜಾರೋಹಣಗೈದು ಸಂದೇಶ ನೀಡಲಿದ್ದಾರೆ. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿ, ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಎಸ್. ಕುಂದರ್, ಪೊಲೀಸ್ ಉಪಾಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.