ಅಂಗವಿಕಲರ ಟಿ20 ವಿಶ್ವಕಪ್:ಭಾರತ ಚಾಂಪಿಯನ್
ಆತಿಥೇಯ ಇಂಗ್ಲೆಂಡ್ ವಿರುದ್ಧ 36 ರನ್ ಜಯ
Team Udayavani, Aug 15, 2019, 5:33 AM IST
ಲಂಡನ್: ಅಂಗವಿಕಲರ ಮೊತ್ತ ಮೊದಲ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಆತಿಥೇಯ ಇಂಗ್ಲೆಂಡನ್ನು 36 ರನ್ನುಗಳಿಂದ ಮಣಿಸಿದ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಭಾರತ 7 ವಿಕೆಟ್ ಕಳೆದುಕೊಂಡು 180 ರನ್ ಪೇರಿಸಿತು. ಗುರಿ ಬೆನ್ನತ್ತಿದ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಶರಣಾಯಿತು.
ವಿಜೇತ ಭಾರತ ಪರ ಮಧ್ಯಮ ಕ್ರಮಾಂಕದ ಆಟಗಾರ ಆರ್.ಜಿ. ಸಾಂಟೆ 34 ಎಸೆತಗಳಲ್ಲಿ 53 ರನ್ ಬಾರಿಸಿ ಮಿಂಚಿದರು (2 ಬೌಂಡರಿ, 4 ಸಿಕ್ಸರ್). ಆರಂಭಕಾರ ಕೆ.ಡಿ. ಫಾನ್ಸೆ 36, ವಿಕ್ರಾಂತ್ ಖೇಣಿ 29, ಎಸ್. ಮಹೇಂದ್ರನ್ 33 ರನ್ ಹೊಡೆದರು. ಇಂಗ್ಲೆಂಡ್ ಪರ 44 ರನ್ ಮಾಡಿದ ಎ.ಜಿ. ಬ್ರೌನ್ ಅವರದೇ ಹೆಚ್ಚಿನ ಗಳಿಕೆ. 2 ವಿಕೆಟ್ ಕೂಡ ಉರುಳಿಸಿದ ಫಾನ್ಸೆ ಆಲ್‌ರೌಂಡ್ ಪ್ರದರ್ಶನವಿತ್ತರು.
ಜಾಫರ್ ಅಭಿನಂದನೆ
“ತುಂಬು ಹೃದಯದ ಅಭಿನಂದನೆಗಳು. ನಿಮ್ಮ ಈ ಸಾಧನೆ ಭಾರತೀಯರಿಗೆ ಸಂತಸ ತಂದಿದೆ’ ಎಂಬುದಾಗಿ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ ಟ್ವೀಟ್ ಮಾಡಿದ್ದಾರೆ.
ಸಂಕ್ಷಿಪ್ತ ಸ್ಕೋರ್: ಭಾರತ-20 ಓವರ್‌ಗಳಲ್ಲಿ 7 ವಿಕೆಟಿಗೆ 180. ಇಂಗ್ಲೆಂಡ್- 20 ಓವರ್‌ಗಳಲ್ಲಿ 9 ವಿಕೆಟಿಗೆ 144.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.