ಚಾರ್ಮಾಡಿಯಲ್ಲಿ ರಸ್ತೆಗಿಳಿದಿವೆ ಕಲ್ಲುಬಂಡೆ

Team Udayavani, Aug 15, 2019, 6:00 AM IST

1308CH7-A

ಬೆಳ್ತಂಗಡಿ: ಪಶ್ಚಿಮ ಘಟ್ಟ ಸಾಲಿನಲ್ಲಿ ಮಳೆ – ಪ್ರವಾಹದ ಅವಾಂತರ ಒಂದೊಂದಾಗಿಯೇ ಅನಾವರಣಗೊಳ್ಳುತ್ತಿದೆ. ಘಟ್ಟದ ಸಾಲು ಸಾಲುಗಳಲ್ಲಿ ಜಲಸ್ಫೋಟದಿಂದ ಹೊಸ ಝರಿಗಳು ಸೃಷ್ಟಿಯಾಗಿವೆ.

ಸಾವಿರಾರು ಹೆಕ್ಟೇರ್‌ ಭೂ ಪ್ರದೇಶದಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಶ್ರೇಣಿಯ ನೂರಕ್ಕೂ ಅಧಿಕ ಸ್ಥಳಗಳಲ್ಲಿ ಕುಸಿತವಾಗಿರುವುದು ಮಾತ್ರವಲ್ಲ; ಈಗಲೂ ಅಲ್ಲಲ್ಲಿ ಸ್ಫೋಟ, ಕಂಪನದ ಅನುಭವಗಳಾಗುತ್ತಿವೆ. ಇದರ ಪ್ರತಿಧ್ವನಿ ಅಲ್ಲಿನ ನಿವಾಸಿಗಳ ಭಯದ ಏದುಸಿರಿನಲ್ಲಿ ಕೇಳಿಸುತ್ತಿದೆ.

ಚಾರ್ಮಾಡಿ ಮತ್ತು ನೆರಿಯ, ಕುಕ್ಕಾವು ಪ್ರದೇಶದಲ್ಲಿ ನಿಂತು ಪಶ್ಚಿಮ ಘಟ್ಟ ಶ್ರೇಣಿಯನ್ನು ವೀಕ್ಷಿಸಿದರೆ ನೂರಕ್ಕೂ ಅಧಿಕ ಹೊಸ ಝರಿಗಳು ಸೃಷ್ಟಿಯಾಗಿರುವುದು ಕಾಣಿಸುತ್ತದೆ. ಈ ಬಗ್ಗೆ ಸ್ಥಳೀಯ ಹಿರಿಯರು ಆತಂಕ ವ್ಯಕ್ತಪಡಿಸುತ್ತಾರೆ, ಇಂಥದ್ದು ಕಂಡುಬಂದಿರುವುದು ಇದೇ ಮೊದಲು ಎಂದು ಉದ್ಗರಿಸುತ್ತಾರೆ.

ಚಾರ್ಮಾಡಿ ರಸ್ತೆಯ 60 ಕಡೆ ಭೂ ಕುಸಿತ
ಚಾರ್ಮಾಡಿ -ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಆಗಿರುವ ಭೂಕುಸಿತದ ಪ್ರಮಾಣ ಈ ರಸ್ತೆಯ ಇತಿಹಾಸದಲ್ಲಿಯೇ ಅತಿ ದೊಡ್ಡದು. ಘಾಟಿ ಆರಂಭವಾಗುವಲ್ಲಿಂದ ಕೊಟ್ಟಿಗೆಹಾರದ ವರೆಗೆ ಸುಮಾರು 60ಕ್ಕೂ ಅಧಿಕ ಕಡೆ ರಸ್ತೆಯೇ ಕುಸಿದಿದೆ ಅಥವಾ ಅದರ ಮೇಲೆ ಗುಡ್ಡ ಬಿದ್ದಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಾಗಿರುವುದು ಪ್ರವಾಹವಲ್ಲ; ಜಲಸ್ಫೋಟ ಅನ್ನುತ್ತಾರೆ ಪರಿಸರ ತಜ್ಞ ದಿನೇಶ್‌ ಹೊಳ್ಳ. ಮುನ್ನುಗ್ಗಿದ ನೀರಿನ ರಭಸಕ್ಕೆ ರಸ್ತೆಯ ಅಲ್ಲಲ್ಲಿ ಹೊಸ ಝರಿಗಳು ಸೃಷ್ಟಿಯಾಗಿವೆ. ನೀರಿನ ಒತ್ತಡವನ್ನು ತಾಳಲಾರದೆ ಘಟ್ಟದ ಮೇಲ್ಮೈ ಒಡೆದು ರಸ್ತೆಯ ಅಲ್ಲಲ್ಲಿ ಹೊಸ ದಾರಿ ಹುಡುಕಿ ಹರಿಯುತ್ತಿದೆ.

11ನೇ ತಿರುವಿನಲ್ಲಿ ಅಪ್ಪಳಿಸಿದೆ ಬಂಡೆ
ಬಣಕಲ್ ಮತ್ತು ಚಾರ್ಮಾಡಿಯ ಮಧ್ಯ ಭಾಗದ 11ನೇ ತಿರುವಿನ ಝರಿ ಪ್ರದೇಶದಲ್ಲಿ ಬೃಹತ್‌ ಬಂಡೆ ಮೇಲಿನಿಂದ ಉರುಳಿ ಬಂದು ಅಪ್ಪಳಿಸಿದ್ದರಿಂದ ರಸ್ತೆ ಸುಮಾರು 20 ಅಡಿ ಆಳಕ್ಕೆ ಜಗ್ಗಿ ಛಿದ್ರವಾಗಿದೆ. ಬಂಡೆ ಅಪ್ಪಳಿಸಿದ ರಭಸಕ್ಕೆ ರಸ್ತೆಯ ಅಂಚಿನ ಮೋರಿಗಳ ಕಲ್ಲುಗಳೆಲ್ಲ ಕಳೆದು ಹೋಗಿವೆ. ಬಣಕಲ್ ವ್ಯಾಪ್ತಿಯ ಅಣ್ಣಪ್ಪ ಬೆಟ್ಟ ಮತ್ತು ಇತರೆಡೆಯೂ ಗಂಭೀರ ಹಾನಿಯಾಗಿದೆ.

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.