ವಿರಾಟ್, ಶ್ರೇಯಸ್ ಬ್ಯಾಟಿಂಗ್ ಸಾಹಸ, ಸರಣಿ ಭಾರತ ಕೈ ವಶ
Team Udayavani, Aug 15, 2019, 9:32 AM IST
ಟ್ರಿನಿಡಾಡ್ : ನಾಯಕ ವಿರಾಟ್ ಕೊಹ್ಲಿ 43ನೇ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ ಜವಾಬ್ದಾರಿಯುತ ಆಟದಿಂದ ಭಾರತ, ವೆಸ್ಟ್ ಇಂಡಿಸ್ ವಿರುಧ್ದದ 3ನೇ ಏಕದಿನ ಪಂದ್ಯವನ್ನು ಗೆದ್ದಿದೆ . ಈ ಮೂಲಕ ಮೂಲಕ ಸರಣಿಯನ್ನು 2-0 ಯಿಂದ ಕೈವಶ ಮಾಡಿಕೊಂಡಿದೆ.
ಕ್ವಿನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ಪಂದ್ಯವನ್ನು ಮಳೆಯಿಂದ 35 ಓವರ್ ಗೆ ಇಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡಿಸ್ 35 ಓವರ್ ಗಳಲ್ಲಿ 7 ವಿಕಟ್ ನಷ್ಟಕ್ಕೆ 240 ರನ್ ಗಳಿಸಿತು. ಡಕ್ವರ್ತ್ ಲೂಯಿಸ್ ನಿಯಮದಡಿ ಭಾರತಕ್ಕೆ 35 ಓವರ್‌ಗಳಲ್ಲಿ 255 ರನ್ ಗುರಿ ನೀಡಲಾಯಿತು. ಗುರಿ ಬೆನ್ನೆತ್ತಿದ ಭಾರತ 32.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 256 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಆಕರ್ಷಕ ಬ್ಯಾಟಿಂಗ್ ನಡೆಸಿದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ( 114*) ಗಳಿಸಿದರೆ, ಶ್ರೇಯಸ್ ಅಯ್ಯರ್ ಅರ್ಧಶತಕ (65) ಗಳಿಸುವ ಮೂಲಕ ಕೊಹ್ಲಿಗೆ ಉತ್ತಮ ಸಾಥ್ ನೀಡಿದರು. ಉಳಿದಂತೆ ಶಿಖರ್ ಧವನ್ (36) ಹಾಗೂ ಕೇಧಾರ್ ಜಾಧವ್(19*) ಜವಬ್ದಾರಿಯುತ ಬ್ಯಾಟಿಂಗ್ ನಡೆಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.