ಅರಸು ದಿನ ವಿಜೃಂಭಣೆಯಿಂದ ಆಚರಿಸಲು ನಿರ್ಧಾರ


Team Udayavani, Aug 15, 2019, 10:22 AM IST

15-Agust-1

ಕಲಬುರಗಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣಪ್ಪ ಅಧ್ಯಕ್ಷತೆಯಲ್ಲಿ ಡಿ.ದೇವರಾಜ ಅರಸು ಜಯಂತ್ಯುತ್ಸವ ಸಮಿತಿ ಸಭೆ ನಡೆಯಿತು.

ಕಲಬುರಗಿ: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿ ಹರಿಕಾರ ದಿ. ಡಿ. ದೇವರಾಜ ಅರಸು ಅವರ 104ನೇ ಜನ್ಮದಿನವನ್ನು ಆ. 20 ರಂದು ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ವಿಜೃಂಭಣೆಯಿಂದ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಡಿ. ದೇವರಾಜ ಅರಸು ಜಯಂತ್ಯುತ್ಸವ ಸಮಿತಿ ಸರ್ವಾನುಮತದ ತೀರ್ಮಾನ ಕೈಗೊಂಡಿತು.

ಅರಸು ದಿನಾಚರಣೆ ದಿನದಂದು ಡಿ. ದೇವರಾದ ಅರಸು ಭಾವಚಿತ್ರದ ಬೃಹತ್‌ ಮೆರವಣಿಗೆ ಅಲಂಕೃತ ವಾಹನದಲ್ಲಿ ಬೆಳಗ್ಗೆ 9ಕ್ಕೆ ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತದಿಂದ ಪ್ರಾರಂಭವಾಗಿ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಕೊನೆಗೊಳಿಸಲಾಗುವುದು. ಮೆರವಣಿಗೆಯಲ್ಲಿ ಕಲಾ ತಂಡಗಳ ವ್ಯವಸ್ಥೆ ಮಾಡಬೇಕು ಎಂದು ಸಭೆ ನಿರ್ಣಯ ಕೈಗೊಂಡಿತು.

ಅಂದು ಬೆಳಗ್ಗೆ 11ಕ್ಕೆ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯುವ ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಚುನಾಯಿತ ಜನಪ್ರತಿನಿಧಿಗಳನ್ನು ಮುಂಚಿತವಾಗಿ ಆಹ್ವಾನಿಸಲಾಗುವುದು. ಡಿ. ದೇವರಾಜ ಅರಸು ಜೀವನ ಸಾಧನೆ ಕುರಿತು ಸಾಹಿತಿ ಚಿ.ಸಿ.ನಿಂಗಣ್ಣ ಅವರಿಂದ ಉಪನ್ಯಾಸ ನಡೆಸಲು ಸಭೆಯು ಒಪ್ಪಿಗೆ ಸೂಚಿಸಿತು.

ಡಿ.ದೇವರಾಜ ಅರಸು ಜಯಂತಿ ಅಂಗವಾಗಿ ಬಿ.ಸಿ.ಎಂ. ವಸತಿ ನಿಲಯದಲ್ಲಿ ವಾಸಿಸುವ 2018-19ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಅರ್ಹ ವಿದ್ಯಾರ್ಥಿಗಳ ಪಟ್ಟಿ ನೀಡಬೇಕು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ಕ್ರೀಡೆ ಮತ್ತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಅಂದು ಜಿಲ್ಲೆಯಾದ್ಯಂತ ಎಲ್ಲ ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಡಿ. ದೇವರಾಜ ಅರಸು ಜಯಂತಿ ಆಚರಿಸುವಂತೆ ಸುತ್ತೋಲೆ ಹೊರಡಿಸಲಾಗುವುದು. ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ದಿನಾಚರಣೆ ಆಚರಿಸಲು ತಹಶೀಲ್ದಾರರು ಪೂರ್ವಭಾವಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆಹ್ವಾನ ಪತ್ರಗಳನ್ನು ಸಕಾಲದಲ್ಲಿ ಎಲ್ಲ ಗಣ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಸಮುದಾಯದ ಮುಖಂಡರು ಮಾತನಾಡಿ, ಶೇ.32ರಷ್ಟು ಮೀಸಲಾತಿ ಪಡೆಯುವ ಎಲ್ಲ ಹಿಂದುಳಿದ ಸಮುದಾಯದವರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ನಿಗಮದಿಂದ ಸಾಲ ಸೌಲಭ್ಯ ಪಡೆದ ಫಲಾನುಭವಿಗಳು ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಆಗಮಿಸಲು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಶಿಷ್ಠಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ್‌, ಸಮಾಜದ ಹಿರಿಯ ಮುಖಂಡರಾದ ಶಿವಲಿಂಗಪ್ಪ ಕಿನ್ನೂರ, ಕಟುಬು ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ, ಗೊಂಡ-ಕುರುಬ ಸಮಾಜದ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ, ಈಡಿಗ ಸಮಾಜದ ರಾಜ್ಯ ಸಮಿತಿ ಸದಸ್ಯ ಹಣಮಂತ ಆಲೂರ, ಕಲ್ಯಾಣ ಕರ್ನಾಟಕದ ರಾಜ್ಯಾಧ್ಯಕ್ಷ ವೆಂಕಟೇಶ ಯಾದವ, ಹರಳಯ್ಯ ಸಮಾಜದ ಶಿವಶರಣಪ್ಪ ನಿಂಗಪ್ಪ ಕೌಲಗಿ, ಪಿಎಲ್ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಅಬ್ದುಲ್ ರಜಾಕ್‌ ಮನಿಯಾರ, ಗಿಸಾಡಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಪವಾರ, ಕೋಲಿ ಸಮಾಜದ ದೇವಿಂದ್ರ ಚಿಗರಳ್ಳಿ ಹಾಗೂ ಮತ್ತಿತರರು ಇದ್ದರು.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೆಹಬೂಬ್‌ ಪಾಷಾ ಕಾರಟಗಿ ಪೂರ್ವಸಿದ್ಧತೆ ಬಗ್ಗೆ ವಿವರಿಸಿದರು.

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.