ಕಾವೇರಿ ಪಾತ್ರದಲ್ಲಿ ಮತ್ತೆ ಮಳೆ: ಎಚ್ಚರಿಕೆ

ಸಂಗಮಕ್ಕೆ ಭೇಟಿ ನೀಡಿ ಮಾಜಿ ಸಚಿವ ಡಿಕೆಶಿ ಪರಿಶೀಲನೆ • ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Team Udayavani, Aug 15, 2019, 4:00 PM IST

15-Agust-42

ರಾಮನಗರ ಜಿಲ್ಲೆ ಕನಕಪುರ ತಾಲೂಕು ಸಂಗಮದಲ್ಲಿ ಕಾವೇರಿ ನದಿಯನ್ನು ವೀಕ್ಷಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌.

ರಾಮನಗರ/ಕನಕಪುರ: ಇನ್ನು 15 ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವಿನ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಪರಿಶೀಲನೆ ನಡೆಸಿರುವುದಾಗಿ ಮಾಜಿ ಸಚಿವ ಹಾಗೂ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದರು.

ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿ ಸಂಗಮದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಬಿನಿ, ಹೇಮಾವತಿ ನದಿಗಳು ಮತ್ತು ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚುವರಿ ನೀರು ಕಾವೇರಿ ನದಿ ಪಾತ್ರದಲ್ಲಿ ಹರಿದ ಕಾರಣ ಸಂಗಮದಲ್ಲಿ ಎಂದಿಗಿಂತ ಸುಮಾರು 10 ಅಡಿ ಎತ್ತರಕ್ಕೆ ನೀರು ಹರಿದಿದೆ. ಸಂಗಮದಲ್ಲಿರುವ ಪ್ರವಾಸಿಗರ ಕಟ್ಟಡದವರೆಗೂ ನೀರು ಬಂದಿದೆ. ಹೀಗೆ ಅಪಾರ ಪ್ರಮಾಣದ ನೀರು ಹರಿಯುವಾಗ ನದಿ ಪಾತ್ರದ ಬಳಿ ಇರುವ ಗ್ರಾಮಗಳಿಗೂ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಖುದ್ದ ಪರಿಶೀಲನೆ ನಡೆಸಿರುವುದಾಗಿ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ಹೇಳಿದರು.

ಮುಂಜಾಗ್ರತಾ ಕ್ರಮಗಳಿಗೆ ಸೂಚನೆ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅರ್ಕಾವರಿ ಹೊರತುಪಡಿಸಿ, ಎಲ್ಲಾ ನದಿಗಳಲ್ಲೂ ನೀರು ಹಿರಿವಿನ ಪ್ರಮಾಣ ಅಧಿಕವಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ. ಅಪಾಯದ ಮುನ್ಸೂಚನೆ ಇದ್ದರೆ, ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರಿಸಲು ಸಹ ಸಿದ್ಧವಾಗಿರುವಂತೆ ತಾವು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಬರ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ: ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಡುತ್ತಿದೆ. ಶೇ.20ರಷ್ಟು ಮಾತ್ರ ಬಿತ್ತನೆಯಾಗಿದೆ. ಈ ಭಾಗದ ದುರ್ದೈವ ಬರ ಕಾಡುತ್ತಿದೆ. ಸಿಎಂ ಯಡಿಯೂರಪ್ಪ ಅವರು ಶೀಘ್ರದಲ್ಲೇ ಬರ ಪರಿಹಾರ ಕೊಡಿಸಬೇಕು. ನರೇಗಾ ಯೋಜನೆಯಡಿಯಲ್ಲಿ 150 ದಿನಗಳ ಕಾಲ ಕೂಲಿ ಕೊಡಲು ಅವಕಾಶ ಇದೆ. ಪ್ರತಿ ಪಂಚಾಯ್ತಿಯಲ್ಲೂ ಕನಿಷ್ಠ 3-4 ಕೋಟಿ ರೂ., ಕಾಮಗಾರಿ ಕೈಗೊಂಡು ಕೃಷಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೋಟು ಪ್ರಿಂಟ್ ಮಾಡುತ್ತಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಹೆಚ್ಚು ಪರಿಹಾರದ ಹಣ ಘೋಷಿಸಿದ್ದಾರೆ. ಬಾಡಿಗೆ ಮನೆಗೆ 5 ಸಾವಿರ ರೂ., ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಈ ವಿಚಾರದಲ್ಲಿ ಈಗ ಚರ್ಚೆ ಬೇಡ ಎಂದು ತಿಳಿಸಿದರು.

ಕೆರೆಗಳಿಗೆ ನೀರು ಹರಿಸಲು ಆಗ್ರಹ: ಕೆ.ಆರ್‌.ಎಸ್‌ ಜಲಾಶಯದಲ್ಲಿ 124 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಇನ್ನು ಇದೆ. ಹೀಗಾಗಿ ಅಧಿಕಾರಿಗಳು ಕಾವೇರಿ ಕೊಳ್ಳದ ಕೆರೆಗಳಿಗೆ ನೀರು ಹರಿಸಲು ಮುಂದಾಗಬೇಕು ಎಂದು ಸಚಿವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮೇಕೆದಾಟು ಯೋಜನೆಗೆ ಅನುಮತಿ ಅಗತ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅಗತ್ಯ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಇನ್ನೂ ಎನ್ವಿರಾನ್‌ಮೆಂಟಲ್ ಕ್ಲಿಯರೆನ್ಸ್‌ ಸಿಕ್ಕಿಲ್ಲ. ಯೋಜನೆಗೆ ಬೇಕಾದ ಅಡಿಪಾಯವನ್ನು ಮೈತ್ರಿ ಸರ್ಕಾರ ಹಾಕಿ ಕೊಟ್ಟಿದೆ. ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಈ ವೇಳೆ ಎಂ.ಎಲ್.ಸಿ ಎಸ್‌.ರವಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶಿವಕುಮಾರ್‌ ಬಸಪ್ಪ, ತಾಪಂ ಅಧ್ಯಕ್ಷ ಧನಂಜಯ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಎಸ್‌ಪಿ ಅನೂಪ್‌ ಶೆಟ್ಟಿ, ಡಿಸಿಎಫ್ ರಮೇಶ್‌ ಕುಮಾರ್‌, ಎಸಿಎಫ್ ರಾಜು, ಆರ್‌ಎಫ್ಒ ಕಿರಣ್‌ ಕುಮಾರ್‌, ತಹಶೀಲ್ದಾರ್‌ ಆನಂದಯ್ಯ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.