ನೆರೆ ಹಾನಿ; ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Aug 16, 2019, 3:00 AM IST
ಬಾಗಲಕೋಟೆ: ಪ್ರವಾಹಕ್ಕೆ ಮನೆ, ಬೆಳೆ ಸಂಪೂರ್ಣ ಹಾನಿಯಾಗಿದ್ದಕ್ಕೆ ಮನನೊಂದ ಮಹಿಳೆಯೊಬ್ಬರು ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುನಗುಂದ ತಾಲೂಕಿನ ರಾಮಥಾಳ ಬಳಿ ನಡೆದಿದೆ. ರೇಣವ್ವ ಮಲ್ಲೇಶಪ್ಪ ಯರನಾಳ (58) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆ.8ರಂದು ಇತಿಹಾಸದಲ್ಲೇ ಮೊದಲ ಬಾರಿ ಮಲಪ್ರಭಾ ನದಿಗೆ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿತ್ತು.
ಪ್ರವಾಹ ಹಿನ್ನೆಲೆಯಲ್ಲಿ ರಾಮಥಾಳದ ರೇಣವ್ವ ಅವರಿಗೆ ಸೇರಿದ ಮನೆ ಸಂಪೂರ್ಣ ಜಲಾವೃತಗೊಂಡಿತ್ತು. ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆಯೂ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಇದರಿಂದ ಮನನೊಂದ ರೇಣವ್ವ, ಮಂಗಳವಾರ ಮಲಪ್ರಭಾ ನದಿಗೆ ಹಾರಿದ್ದಳು. ಗುರುವಾರ ಸಂಜೆ ರಾಮಥಾಳ-ಬೇನಾಳ ಮಧ್ಯೆ ಇರುವ ಇಂಗಳಗಿ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ರೇಣವ್ವಳ ಪತಿ ಅಮೀನಗಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
Waqf Report: 150 ಕೋ.ರೂ.ಆಮಿಷ; ಸದನದಲ್ಲಿ ಪ್ರಸ್ತಾವ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.