ಶೀಘ್ರವೇ ರಾಜ್ಯ ಸಚಿವ ಸಂಪುಟ ರಚನೆ: ಜಗದೀಶ ಶೆಟ್ಟರ


Team Udayavani, Aug 16, 2019, 9:23 AM IST

huballi-tdy-3

ಹುಬ್ಬಳ್ಳಿ: ಅತಿವೃಷ್ಟಿ ಹಾನಿ ಸಂಬಂಧ ಹೆಚ್ಚಿನ ನೆರವು ಕೋರಲು ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ತೆರಳಲಿದ್ದು, ಈ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಲು ಮನವಿ ಮಾಡಲಿದ್ದಾರೆ. ನನಗೂ ಬರುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಕುರಿತು ಚರ್ಚೆಯಾಗುವ ಸಾಧ್ಯತೆಗಳಿದ್ದು, ಹೈಕಮಾಂಡ್‌ ನೀಡುವ ಮಾರ್ಗದರ್ಶನ ಹಾಗೂ ನಿರ್ದೇಶನದ ಮೇಲೆ ಮುಂದಿನ ಕಾರ್ಯಗಳು ನಡೆಯಲಿವೆ. ಆದಷ್ಟು ಬೇಗ ಸಚಿವ ಸಂಪುಟ ರಚನೆಯಾಗಲಿದೆ ಎಂದರು.

ಫೋನ್‌ ಕದ್ದಾಲಿಕೆ ತನಿಖೆಯಾಗಲಿ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಳಿ ಬಂದಿರುವ ಫೋನ್‌ ಕದ್ದಾಲಿಕೆ ಆರೋಪದ ಕುರಿತು ಸಮಗ್ರ ತನಿಖೆಯಾಗಬೇಕು. ಮಾಜಿ ಸಚಿವ ಎಚ್. ವಿಶ್ವನಾಥ ಮಾಡಿರುವ ಆರೋಪ ಗಂಭೀರವಾಗಿದ್ದು, ಸಮರ್ಪಕ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಫೋನ್‌ ಕದ್ದಾಲಿಕೆ ಕುರಿತು ವಿಪಕ್ಷ ನಾಯಕನಿದ್ದ ಸಂದರ್ಭದಲ್ಲಿ ಪ್ರಸ್ತಾಪ ಮಾಡಿದ್ದೆ. ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತಿರುವವರ ಫೋನ್‌ ಕದ್ದಾಲಿಕೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಕುರ್ಚಿಗೆ ಅಂಟಿಕೊಂಡು ಕೂಡಲು ಕಾನೂನು ವಿರೋಧಿ ಕ್ರಮ ಅನುಸರಿಸಿದ್ದಾರೆ. ರಾಜಕೀಯ ವಿರೋಧಿಗಳು, ಕೆಲ ನಾಯಕರು, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಅವರ ಸರ್ಕಾರದಲ್ಲಿದ್ದ ಸಿದ್ದರಾಮಯ್ಯ ಅವರ ಫೋನ್‌ ಕೂಡ ಕದ್ದಾಲಿಕೆ ಮಾಡಿದ್ದಾರೆ. ಹಿಂದೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ವಿರುದ್ಧ ಕೂಡ ಫೋನ್‌ ಕದ್ದಾಲಿಕೆ ಆರೋಪ ಬಂದಾಗ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದರು.

ಐತಿಹಾಸಿಕ ನಿರ್ಧಾರ: ಜಮ್ಮು-ಕಾಶ್ಮೀರದಲ್ಲಿ 370 ಕಲಂ ರದ್ದು ಮಾಡಿದ್ದು ಐತಿಹಾಸಿಕ ನಿರ್ಧಾರ. ಇದನ್ನು ಅಲ್ಲಿನ ಜನರು ಕೂಡ ಸ್ವಾಗತಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಲಿದೆ. ಅಲ್ಲಿ ಉದ್ಯೋಗಾವಕಾಶಗಳ ಸಂಖ್ಯೆ ಹೆಚ್ಚಾಗಲಿದೆ. ವಿಶ್ವದ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪಿಸುವುದು ಕೇಂದ್ರದ ಮುಖ್ಯ ಉದ್ದೇಶವಾಗಿದೆ ಎಂದರು.

ಟಾಪ್ ನ್ಯೂಸ್

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.