ಬಸವ ಬ್ಯಾಂಕ್: ಸಸಿ ವಿತರಿಸಿ ಸ್ವಾತಂತ್ರ್ಯ ದಿನಾಚರಣೆ
Team Udayavani, Aug 16, 2019, 10:28 AM IST
ಬಾಗಲಕೋಟೆ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಸಸಿ ವಿತರಿಸಿದರು.
ಬಾಗಲಕೋಟೆ: ಶತಮಾನ ಕಂಡಿರುವ ಉತ್ತರ ಕರ್ನಾಟಕದ ಪ್ರತಿಷ್ಠಿತ ಬಸವೇಶ್ವರ ಬ್ಯಾಂಕ್‌ನ ಪ್ರಧಾನ ಕಚೇರಿ ಆಚರಣದಲ್ಲಿ ಸ್ವಾತಂತ್ರ್ಯ ದಿನವನ್ನು ಸಸಿ ವಿತರಿಸುವ ಮೂಲಕ ಆಚರಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಿರಿಯರ ತ್ಯಾಗ-ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಅರ್ಥಪೂರ್ಣ ಆಚರಿಸೋಣ. ದೇಶದ ಉನ್ನತಿಗಾಗಿ, ರಾಷ್ಟ್ರದ ಜಾಗ್ರತಿಗಾಗಿ ಒಂದಷ್ಟು ಒಳ್ಳೆಯ ಕೆಲಸ ಮಾಡೋಣ. ದೇಶದ ರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಿರಬೇಕು. ಪ್ರವಾಹದ ಸಂತ್ರಸ್ತರ ನೆರವಿಗೆ ಜನರು ಧಾವಿಸಬೇಕು ಎಂದು ಹೇಳಿದರು.
ಬಸವೇಶ್ವರ ಸಹಕಾರಿ ಬ್ಯಾಂಕ್‌ನಿಂದ ಸಂತ್ರಸ್ತರಿಗೆ ದಿನಸಿ ಸಾಮಾನುಗಳಾದ ಸಕ್ಕರೆ, ಚಹಾಪುಡಿ, ಲಡಕಿ ಉಂಡಿ, ಖಾರ ಮತ್ತು ಬಿಸ್ಕೀಟ ಮುಂತಾದವುಗಳನ್ನು ಸುಮಾರು ಎರಡು ಸಾವಿರ ಸಂತ್ರಸ್ತರಿಗೆ ವಿತರಿಸಿದರು. ಇದೇ ವೇಳೆ ಸಿಬ್ಬಂದಿಗಳಿಗೆ ಅಧ್ಯಕ್ಷರು ಸಸಿಗಳನ್ನು ವಿತರಿಸಿದರು.
ಬ್ಯಾಂಕಿನ ಉಪಾಧ್ಯಕ್ಷ ಎಂ.ಜಿ. ವಾಲಿ, ನಿರ್ದೇಶಕ ಸಿ.ಟಿ. ಪಾಟಿಲ, ಎಂ.ಎಸ್. ಏಳೆಮ್ಮಿ, ಎಸ್.ಎಸ್. ಕಂಕಣಮೇಲಿ, ಆರ್.ಎಸ್. ದಂಡನ್ನವರ, ಆರ್.ವೈ. ಪಟ್ಟಣದ, ವೀರಪ್ಪ ವಿ. ಶಿರಗನ್ನವರ, ಎಸ್.ಡಿ. ಶಿರೂರ, ಎಸ್.ಪಿ. ಮುಳಗುಂದ, ಎಸ್.ಸಿ. ಆರಬ್ಬಿ, ಎಂ.ಎಸ್. ಜೋಳದ, ಎಸ್.ಟಿ. ಬಳ್ಳಾರಿ, ಎಸ್.ಸಿ. ನಂದಿಕೋಲಮಠ, ಎಚ್.ಎಸ್. ರಾಠೊಡ, ವಿ.ವಿ. ಕಲಬುರ್ಗಿ, ಎನ್.ಆರ್. ಕುಲಕರ್ಣಿ, ಎಂ.ಆರ್. ಗೌಡರ, ಪ್ರಧಾನ ವ್ಯವಸ್ಥಾಪಕ ಎಂ.ಎಚ್. ಕಳ್ಳಿಗುಡ್ಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.