2ನೇ ದಿನವೂ ಯಶ ಕಾಣಲಿಲ್ಲ ಗೇಟ್ ದುರಸ್ತಿ ಕಾರ್ಯ

•ನೀರಾವರಿ ಕಾರ್ಯದರ್ಶಿ ನಾರಾಯಣ ಭೇಟಿ•ಮೂರು ತಂಡಗಳಿಂದ ಕಾರ್ಯಾಚರಣೆ

Team Udayavani, Aug 16, 2019, 12:35 PM IST

kopala-tdy-1

ಕೊಪ್ಪಳ: ತುಂಗಭದ್ರಾ ಡ್ಯಾಂನ ಎಡದಂಡೆ ಮೇಲ್ಮಟ್ಟದ ಕಾಲುವೆ ಗೇಟ್ ಕಿತ್ತು ಗುರುವಾರಕ್ಕೆ ಮೂರು ದಿನಗಳಾದರೂ ತಜ್ಞರ ತಂಡವು ಹಗಲು-ರಾತ್ರಿ ಎನ್ನದೇ ನಿರಂತರ ಕಾರ್ಯಾಚರಣೆ ನಡೆಸಿದೆ. ಡ್ಯಾಂಗೆ ರಾಜ್ಯ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ

ಲಕ್ಷ್ಮಿನಾರಾಯಣ ಭೇಟಿ ನೀಡಿ ತಜ್ಞರ ಜೊತೆ ಸಮಾಲೋಚನೆ ನಡೆಸಿದರು. ನೀರಾವರಿ ನಿಗಮದ ಎಂಡಿ ಮಲ್ಲಿಕಾರ್ಜುನ ಗುಂಗೆ ಅವರು ಎರಡು ದಿನದಿಂದ ಡ್ಯಾಂ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ನಿರಂತರ ಕಾರ್ಯಾಚರಣೆಗೆ ವಿವಿಧ ಯೋಜನೆ ರೂಪಿಸಿದ್ದಾರೆ. ಆದರೆ ಮೊದಲ ದಿನದಿಂದ ನಡೆದ ಕಾರ್ಯಾಚರಣೆಯಲ್ಲಿ ಶೇ. 10ರಷ್ಟು ಪ್ರಗತಿ ಕಾಣಲಾಗಿಲ್ಲ.

ವಿವಿಧ ವಿಧಾನಗಳು ವಿಫಲವಾಗುತ್ತಿದ್ದರಿಂದ ತಜ್ಞರಲ್ಲೂ ತುಂಬ ಆತಂಕ ಮೂಡುತ್ತಿದೆ. ಇಲ್ಲಿನ ಸ್ಥಿತಿ ತಿಳಿಯಲು ರಾಜ್ಯ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಲಕ್ಷ್ಮಿನಾರಾಯಣ ಪೇಶ್ವೆ ಅವರು ಭೇಟಿ ನೀಡಿ ತಜ್ಞರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕಾರ್ಯ ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ.

ನೀರು ಹರಿಯುವ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಪಂಪಾವನವು ನೀರಿನಲ್ಲಿ ನೆನೆಯುತ್ತಿದೆ. ಉದ್ಯಾನವನದಲ್ಲಿ ಸಂಗ್ರಹವಾಗುವ ನೀರನ್ನು ನದಿ ಪಾತ್ರಕ್ಕೆ ಹರಿ ಬಿಡಲಾಗುತ್ತಿದೆ. ನೀರು ನಿರಂತರ ಹರಿಯುವುದರಿಂದ ತಾಲೂಕಿನ ಮುನಿರಾಬಾದ್‌ ಗ್ರಾಮದ ಜನರು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ 110 ಮನೆಗಳಿಗೆ ಡ್ಯಾಂ ನೀರು ನುಗ್ಗಿದ್ದರಿಂದ 650 ಜನರನ್ನು ವಿವಿಧೆಡೆ ಸ್ಥಳಾಂತರಿಸಲಾಗಿದೆ.

ಸ್ಥಳಕ್ಕೆ ಕರಡಿ, ಹಿಟ್ನಾಳ ಭೇಟಿ: ಡ್ಯಾಂ ಗೇಟ್ ದುರಸ್ತಿ ಕಾರ್ಯ ಮೂರು ದಿನಗಳಿಂದ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಸಂಸದ ಸಂಗಣ್ಣ ಕರಡಿ ಅವರಿಗೂ ತೆಲೆ ಬಿಸಿಯಾಗಿದೆ. ಇದರಿಂದ ಎಡದಂಡೆ ಮುಖ್ಯ ಕಾಲುವೆಗೆ ನೀರು ಇಲ್ಲದಂತಾಗಿದೆ. ರೈತರಿಗೆ ನೀರು ಹರಿಸದಿದ್ದರೆ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ನೀರು ಹರಿಸಿದರೆ, ಒಂದೆಡೆ ಬೋಂಗಾ ಬಿದ್ದು ತೊಂದರೆ ಎದುರಾಗಿದೆ. ಆದಷ್ಟು ಬೇಗ ಡ್ಯಾಂನ ಗೇಟ್ ದುರಸ್ತಿ ಮಾಡಿಸಬೇಕು. ಇಲ್ಲವೇ ನೀರು ಹರಿದು ಹೋಗುವುದನ್ನು ತಡೆಯಬೇಕು ಎನ್ನುವ ಆಲೋಚನೆಯಲ್ಲೇ ಕಾಲ ಕಳೆಯುತ್ತಿದ್ದು ಸ್ಥಳಕ್ಕೆ ಭೇಟಿ ನೀಡಿ ತಜ್ಞರ ಜೊತೆ ಸಂಪರ್ಕದಲ್ಲಿದ್ದಾರೆ. ಇನ್ನೂ ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಸೇರಿ ಜನಾರ್ದನ ಹುಲಿಗಿ ಸ್ಥಳದಲ್ಲೇ ಕಾರ್ಯಾಚರಣೆಗೆ ಸಹಕಾರ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.