ರೈಲ್ವೆ-ಹೆದ್ದಾರಿಗೆ ಒತ್ತು ನೀಡಿದ ಕೇಂದ್ರ

•ಸ್ಥಗಿತಗೊಂಡಿದ್ದ ರೈಲ್ವೆ ಯೋಜನೆಗೆ ಮೋದಿ ಸರ್ಕಾರದಲ್ಲಿ ವೇಗ•ಗುಣಮಟ್ಟದ ಕಾಮಗಾರಿ ಮಾಡಿ

Team Udayavani, Aug 16, 2019, 12:41 PM IST

kopala-tdy-2

ಯಲಬುರ್ಗಾ: ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ನೂತನ ಕಚೇರಿಯನ್ನು ಶಾಸಕ ಹಾಲಪ್ಪ ಆಚಾರ ಉದ್ಘಾಟಿಸಿದರು.

ಯಲಬುರ್ಗಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಭಾಗದಲ್ಲಿ ನನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಕಾಮಗಾರಿಗಳು ಆರಂಭಗೊಂಡಿವೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ಪಟ್ಟಣದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಭಾನಾಪೂರದಿಂದ ಗದ್ದಿನಕೇರಿವರೆಗೆ ರಾಷ್ಟ್ರೀಯ ಹೆದ್ದಾರಿ, ಮುನಿರಬಾದ್‌-ಮೆಹಬೂಬ್‌ ನಗರ ರೈಲ್ವೆ, ಗದಗ-ವಾಡಿ ರೈಲ್ವೆ ಯೋಜನೆ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದವು. ಗದಗ-ವಾಡಿ ರೆೈಲ್ವೆ ಯೋಜನೆಯನ್ನು ಅಂದಿನ ಸಚಿವ ಮಲ್ಲಿಕಾರ್ಜುನ ಖರ್ಗೆಯವರು ನಾಮಕಾವಸ್ಥೆ ಎಂಬಂತೆ ಅದಕ್ಕೆ ಯಾವುದೇ ಅನುದಾನ ನೀಡದೇ ಯೋಜನೆಗೆ ಚಾಲನೆ ನೀಡಿದ್ದರು. ಅದು ಸರ್ವೇ ಸಹ ಆಗಿರಲಿಲ್ಲ. ತದನಂತರ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೆೈಲ್ವೆ ಯೋಜನೆ ಹಣ ನೀಡಿ ಸರ್ವೇ ಕಾರ್ಯ ಮಾಡಿಸಿ ಇದೀಗ ಭಾನಾಪೂರದಿಂದ ಕಾಮಗಾರಿ ಆರಂಭಿಸಿದೆ. ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಸಾಕಷ್ಟು ಅನುದಾನ ಬಿಡುಗಡೆ ಮಾಡಿಸಿದ್ದಾರೆ.

ತಾಲೂಕಿನಲ್ಲಿ ಲೋಕಪಯೋಗಿ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿಲ್ಲ. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿವೆ. ತಾಲೂಕಿನಲ್ಲಿ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಕಳಪೆ ಕಂಡುಬಂದರೇ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ಸರಕಾರಿ ಅಧಿಕಾರಿಗಳು ಸರಕಾರದ ಕೆಲಸವನ್ನು ತಮ್ಮ ಮನೆಯ ಕಾರ್ಯವೆಂದು ಭಾವಿಸಿ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಮುಂದಾಗಬೇಕು. ಒಟ್ಟಾರೆಯಾಗಿ ತಾಲೂಕು ಸಮಗ್ರ ಅಭಿವೃದ್ದಿ ಯಾಗಬೇಕಾದರೇ ಅಧಿಕಾರಿಗಳು ಸಹ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಭ್ರಷ್ಟಚಾರ ಎಸಗಿದರೆ ಮನೆಗೆ ಕಳುಹಿಸುವುದು ಶತಸಿದ್ಧ ಎಂದರು.

ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಪಟ್ಟಣದ ತಾಲೂಕು ಕ್ರೀಡಾಂಗಣದಿಂದ ಮೊಗ್ಗಿಬಸವೇಶ್ವರ ದೇವಸ್ಥಾನದವರೆಗೆ ಕಾಂಕ್ರೀಟ್ ರಸ್ತೆಯ ಬದಲು ಡಾಂಬರೀಕರಣ ನಿರ್ಮಾಣಕ್ಕೆ ಮುಂದಾಗಬೇಕು. ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿದರೇ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಕುರಿತು ಅಧಿಕಾರಿಗಳು ಡಾಂಬರ್‌ ರಸ್ತೆ ನಿರ್ಮಾಣಕ್ಕೆ ಮುಂದಾಗುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಆರ್‌.ಕೆ. ಮಠದ ಮಾತನಾಡಿ, ಲೋಕಪಯೋಗಿ ಇಲಾಖೆಯ ಒಂದು ಕೋಟಿ ರೂ. ಅನುದಾನದಲ್ಲಿ ನೂತನ ಉಪ ವಿಭಾಗ ಕಚೇರಿ ಆರಂಭವಾಗಿದೆ. ಪ್ರಯೋಗಾಲಯ, ಗುಣಮಟ್ಟ ಪರೀಕ್ಷೆ ಕೊಠಡಿ ಸೇರಿದಂತೆ ಎಲ್ಲವೂ ಗುಣಮಟ್ಟದಿಂದ ಕೂಡಿವೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕ ಹಾಲಪ್ಪ ಆಚಾರ್‌ ಅವರನ್ನು ಇಲಾಖೆ ವತಿಯಿಂದ ಸನ್ಮಾನಿಸಲಾಯಿತು. ತಹಶೀಲ್ದಾರ್‌ ರಮೇಶ ಅಳವಂಡಿಕರ್‌ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಲಕ್ಷ್ಮಿ ಗೌಡ್ರ, ಜಿಪಂ ಸದಸ್ಯರಾದ ಗಂಗಮ್ಮ ಗುಳಗಣ್ಣನವರ, ಗಿರಿಜಾ ಸಂಗಟಿ, ಹೊಳಿಯಮ್ಮ ಪಾಟೀಲ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಸದಸ್ಯೆ ಕವಿತಾ ಉಳ್ಳಾಗಡ್ಡಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್. ಪಾಟೀಲ, ಶಿವಶಂಕರರಾವ್‌ ದೇಸಾಯಿ, ಈರಪ್ಪ ಕುಡಗುಂಟಿ, ಶಿವನಗೌಡ ಬನ್ನಪ್ಪಗೌಡ್ರ, ಸಿದ್ದರಾಮೇಶ ಬೆಲೇರಿ, ಕೊಟ್ರಪ್ಪ ತೋಟದ, ಎಸ್‌.ಎನ್‌. ಶ್ಯಾಗೋಟಿ, ವಕೀಲ ಶಂಕರಗೌಡ ಗೆದಗೇರಿ, ಎಚ್.ಎಚ್. ಕುರಿ, ಶಂಕರಗೌಡ ಟೀಕಲ್, ಲೋಕಪಯೋಗಿ ಇಲಾಖೆ ಎಇಇ ಹೇಮಂತ ರಾಜ್‌, ಗಿರೀಶ, ಶರಣ ಬಸವರಾಜ, ಮಹಾಂತೇಶ, ಗುತ್ತಿಗೆದಾರ ಶಿವಪ್ರಸಾದ, ಸುರೇಶ ಹೊಸಳ್ಳಿ, ನೀಲನಗೌಡ ತಳುಗೇರಿ ಇತರರು ಇದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.