ಹಳ್ಳಿಗಳ ಅಭಿವೃದ್ಧಿಗೆ ಶಿಕ್ಷಣ ಅಗತ್ಯ
Team Udayavani, Aug 17, 2019, 3:00 AM IST
ಚಿಕ್ಕಬಳ್ಳಾಪುರ: ಸರ್ವ ರೀತಿಯಲ್ಲಿ ಹಳ್ಳಿಗಳ ಶ್ರೇಯೋಭಿವೃದ್ಧಿಯಾಗಬೇಕಾದರೆ ಅದು ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಾಧ್ಯ. ಪ್ರತಿಯೊಂದು ಮನೆಯ ಮಗುವು ವಿದ್ಯಾವಂತನಾದರೆ ಆ ಮನೆಯ ಏಳಿಗೆಯಾಗುತ್ತದೆ. ಪ್ರತಿಯೊಂದು ಮನೆಯ ಏಳಿಗೆಯಾದರೆ ಇಡೀ ಉರೇ ಉದ್ಧಾರವಾಗುತ್ತದೆ ಎಂದು ಆದಿಚುಂಚಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು.
ನಗರದ ಹೊರ ವಲಯದ ಸೊಲಾಲಪ್ಪನ ದಿನ್ನೆಯಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಗ್ರಾಮೀಣ ಮಕ್ಕಳ ಶೈಕ್ಷಣಿಕಾಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಡು ಬಡವರಿಂದ ಕೂಡಿದ ಶೈಕ್ಷಣಿಕವಾಗಿ ಹಿಂದುಳಿದ ಕುಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಲ್ಲಿನ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ದೃಷ್ಟಿಯಿಂದ ರೂಪಿಸಿರುವ ಶ್ರೀ ಆದಿಚುಂಚನಗಿರಿ ವಿದ್ಯಾವಿಕಾಸ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೂಜ್ಯರ ಆಶಯ: ಚಿಕ್ಕಬಳ್ಳಾಪುರ ತಾಲೂಕಿನ ಕುಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಹಳ್ಳಿಯ ಪ್ರತಿಯೊಂದು ಮನೆಗೂ ಶೈಕ್ಷಣಿಕ ಜ್ಯೋತಿಯನ್ನು ಹಚ್ಚುವ ಕಾರ್ಯವನ್ನು ಪೂಜ್ಯರ ಆಶಯದಂತೆ ಆದಿಚುಂಚನಗಿರಿ ಮಠ ಕೈಗೆತ್ತಿಕೊಂಡಿದೆ. ಅದಕ್ಕೆ ತಮ್ಮೆಲ್ಲೆರ ಸಹಕಾರ ಅತ್ಯಗತ್ಯ. ಯಾವುದೇ ಜಾತಿ ಮತ ಭೇದವಿಲ್ಲದೇ ಸರ್ವರು ಈ ಯೋಜನೆಯಡಿಯಲ್ಲಿ ಶಿಕ್ಷಣ ಪಡೆದುಕೊಂಡು ಪ್ರತಿಯೊಂದು ಮಗುವು ಒಂದು ಶಕ್ತಿಯಾಗಿ ಬೆಳೆಯಬೇಕೆಂದರು. ಮೂರನೇ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ನ್ಯಾಯಾಧೀಶೆ ಭಾನುಮತಿ ಮಾತನಾಡಿ, ಸ್ವಾಮೀಜಿಯವರು ಶೈಕ್ಷಣಿಕವಾಗಿ ಹಿಂದುಳಿದಿರುವ ಗ್ರಾಮಗಳನ್ನು ವಿದ್ಯಾವಿಕಾಸ ಯೋಜನೆಯಡಿ ಗುರುತಿಸಿರುವುದು ನಿಮ್ಮ ಸೌಭಾಗ್ಯ.
ನಿಮ್ಮ ಆಸೆ ನಿಜವಾಗಲಿದೆ: ಶೈಕ್ಷಣಿಕವಾಗಿ ಹಿಂದುಳಿದಿರುವ ಹಳ್ಳಿ ಮಕ್ಕಳಿಗೆ ಈ ಯೋಜನೆಯು ಬಹಳ ಉಪಯುಕ್ತವಾಗಿದ್ದು, ಕೂಲಿ ಮಾಡಿ ಬದುಕು ಸಾಗಿಸುತ್ತಿರುವ ಹಳ್ಳಿಯ ಪ್ರತಿಯೊಂದು ಮನೆಯಲ್ಲಿಯೂ ಮುಂದೊಂದು ದಿನ ಒಬ್ಬ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಬ್‌ಇನ್‌ಸ್ಪೆಕ್ಟರ್, ಶಿಕ್ಷಕರು, ಇಂಜಿನಿಯರ್ ಮುಂತಾದವರನ್ನು ಕಾಣುವ ನಿಮ್ಮ ಆಸೆ ನಿಜವಾಗಬಹುದು ಎಂದರು.
ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಆರ್.ನಾರಾಯಣಸ್ವಾಮಿ ಮಾತನಾಡಿ, ಈ ಯೋಜನೆಯ ಅಡಿಯಲ್ಲಿ ನಮ್ಮ ಹಳ್ಳಿಯನ್ನು ಗುರುತಿಸಿರುವುದು ನಮ್ಮಲ್ಲರ ಭಾಗ್ಯ. ಈ ಉಪಯೋಗವನ್ನು ಪ್ರತಿಯೊಂದು ಮಗುವು ಸದುಪಯೋಗ ಪಡೆದುಕೊಂಡು ಉನ್ನತ ಹಂತ ತಲುಪಿ ಊರಿನ ಕೀರ್ತಿಯನ್ನು ಹೆಚ್ಚಿಸಬೇಕು. ಇಂತಹ ಯೋಜನೆಯನ್ನು ಕಲ್ಪಿಸದ್ದಕ್ಕಾಗಿ ನಮ್ಮೂರಿನ ಗ್ರಾಮಸ್ಥರೆಲ್ಲರೂ ಸ್ವಾಮೀಜಿಯವರಿಗೆ ಕೃತಜ್ಞತೆ ಸಲ್ಲಿಸಬೇಕೆಂದರು.
100 ಮಕ್ಕಳು ವಿದ್ಯಾಭ್ಯಾಸ: ಆದಿಚುಂಚನಗಿರಿ ವಿದ್ಯಾವಿಕಾಸ ಯೋಜನೆಯ ಅಡಿಯಲ್ಲಿ ಅಗಲಗುರ್ಕಿ ಗ್ರಾಮದ 1 ರಿಂದ 10ನೇ ತರಗತಿಯ 100ಕ್ಕೂ ಹೆಚ್ಚು ಮಕ್ಕಳು ವಿದ್ಯಾರ್ಜನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜಿಎಸ್ ಅಗಲಗುರ್ಕಿ ಶಾಲೆಯ ಪ್ರಾಂಶುಪಾಲ ಡಿ.ಸಿ.ಮೋಹನ್‌ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಕ್ಕಳನ್ನೇ ಆಸ್ತಿಯಾಗಿಸಿ: ಆಧುನಿಕ ಜಗತ್ತಿನಲ್ಲಿ ಶಿಕ್ಷಣವೇ ಶಕ್ತಿಯಾಗಿದ್ದು, ಪೋಷಕರು ಈ ನಿಟ್ಟಿನಲ್ಲಿ ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಸಮಾಜದಲ್ಲಿ ಸ್ವತಂತ್ರವಾಗಿ ಬದುಕಲು ಸದೃಢರನ್ನಾಗಿ ಮಾಡಬೇಕೆಂದು ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಸಲಹೆ ನೀಡಿದರು.
ಆದಿಚುಂಚನಗಿರಿ ವಿದ್ಯಾ ವಿಕಾಸ ಯೋಜನೆಯಡಿ ನಡೆಯುವ ಪಾಠ, ಪ್ರವಚನ, ಭಜನೆ ಹಾಗೂ ಸುಸಂಸ್ಕೃತರನ್ನಾಗಿಸಲು ನಡೆಯುವ ವಿವಿಧ ಚಟುವಟಿಕೆಗಳಲ್ಲಿ ಮಕ್ಕಳನ್ನು ಕಳುಹಿಸಿ ಸಹಕರಿಸಬೇಕೆಂದು ಪೋಷಕರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.